AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸವಾಲು ಎದುರಿಸಲು ನೂತನ ಅಧ್ಯಕ್ಷ ವಿಜಯೇಂದ್ರ ಮೆಗಾ ಪ್ಲ್ಯಾನ್: ಏನದು?

ಬಿಜೆಪಿಗೆ ರಾಜ್ಯಾಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ಆಗಿದ್ದಾರೆ. ಫುಲ್ ಆ್ಯಕ್ಟೀವ್ ಆಗಿ ಮತ್ತೆ ಪಕ್ಷ ಸಂಘಟನೆಗೆ ಧುಮುಕಿದ್ದಾರೆ. ಆದ್ರೆ, ಶುರುವಿನಲ್ಲೇ ವಿಜಯೇಂದ್ರಗೆ ಸಂಕಷ್ಟ ಶುರುವಾಗಿದೆ. ಅದಕ್ಕೆ ಕಾರಣ ಹಿರಿಯರ ಮುನಿಸು. ಹೌದು..ಹಿರಿಯರ ಮುನಿಸು ವಿಜಯೇಂದ್ರಗೆ ಮೊದಲ ಸವಾಲಾಗಿದೆ. ಇದೀಗ ದೇಗುಲ, ಮಠ ಎಂದು ಸುತ್ತಾಡುತ್ತಿರುವ ವಿಜಯೇಂದ್ರ ಸಂಕಷ್ಟದಿಂದ ಪಾರಾಗಾಲು ಒಂದು ಪ್ಲ್ಯಾನ್ ಮಾಡಿದ್ದಾರೆ. ಅದೇನು ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಮೊದಲ ಸವಾಲು ಎದುರಿಸಲು ನೂತನ ಅಧ್ಯಕ್ಷ ವಿಜಯೇಂದ್ರ ಮೆಗಾ ಪ್ಲ್ಯಾನ್: ಏನದು?
ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 13, 2023 | 7:09 AM

ಬೆಂಗಳೂರು, (ನವೆಂಬರ್ 13): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ ಬೊವೈ ವಿಜಯೇಂದ್ರಗೆ (BY Vijayendra) ಬಿಜೆಪಿ ಅಧ್ಯಕ್ಷಗಿರಿ ನೀಡಿದ ಮೇಲೆ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ(BJP) ಹಿರಿಯ ನಾಯಕ ಸಿ.ಟಿ.ರವಿ ತಮ್ಮ ಅಸಮಾಧಾನವನ್ನ ಪರೋಕ್ಷವಾಗಿ ಹೊರಗೆ ಹಾಕುತ್ತಿದ್ದಾರೆ. ಸೋಮಣ್ಣ, ಬೆಲ್ಲದ್ ಪ್ರತಿಕ್ರಿಯೆ ನೀಡದೇ ಸೈಲೆಂಟ್ ಆಗಿದ್ದಾರೆ. ಸದ್ಯ ಇದೇ ಸವಾಲನ್ನು ವಿಜಯೇಂದ್ರ ಮೆಟ್ಟಿ ನಿಲ್ಲಬೇಕಿದೆ. ಹೀಗಾಗಿ ವಿಜಯೇಂದ್ರ ಹಿರಿಯರ ಅಸಮಾಧಾನವನ್ನು ಶಮನ ಮಾಡಲು ಅವರ ಬಳಿ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಹೌದು…ಹಿರಿಯ ಮುನಿಸು ವಿಜಯೇಂದ್ರಗೆ ಮೊದಲ ಸವಾಲು ಆಗಿದ್ದು, ಆ ಸವಾಲನ್ನು ಮೆಟ್ಟಿ ನಿಲ್ಲಲು ವಿಜಯೇಂದ್ರ  ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಸ್​​ಎಂ ಕೃಷ್ಣ ಸೇರಿದಂತೆ ಹಲವರು ಹಿರಿಯ ನಾಯಕರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ.

ದೇವೇಗೌಡರನ್ನು ಭೇಟಿಯಾಗಲಿರುವ ವಿಜಯೇಂದ್ರ

ವಿಜಯೇಂದ್ರ ಕೇವಲ ಸ್ವಪಕ್ಷದ ನಾಯಕರ ಮನೆಗೆ ಮಾತ್ರವಲ್ಲದೇಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರನ್ನು ಭೇಟಿ ಮಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ, ಹೀಗಾಗಿ ಮೈತ್ರಿ ಪಕ್ಷದ ನಾಯಕರ ಬೆಂಬಲಕ್ಕಾಗಿ ವಿಜಯೇಂದ್ರ, ದೇವೇಗೌಡರ ಭೇಟಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ 1 ಬದಲಾವಣೆ, ಇಲ್ಲಿದೆ ಲೆಟೆಸ್ಟ್ ಅಪ್ಡೇಟ್

ಹಿರಿಯರ ಅಸಮಾಧಾನ ಕಡೆಗಣಿಸುವ ಸ್ಥಿತಿಯಲ್ಲಿ ವಿಜಯೇಂದ್ರ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗೆ ಅಸಮಾಧಾನಗೊಂಡಿರುವ ಹಿರಿಯರ ಸಹಕಾರ ಬೇಕೇ ಬೇಕು. ಇಲ್ಲದೇ ಹೋದ್ರೆ ಮೊದಲ ಸವಾಲಿನಲ್ಲೇ ಸಂಕಷ್ಟ ಎದುರಾಗಬಹುದು. ಹೀಗಾಗಿ ಹಿರಿಯರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ವಿಜಯೇಂದ್ರಗೆ ಅನಿವಾರ್ಯವಾಗಿದೆ. ಇದರಿಂದ ಇಂದು ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದುಕೊಳ್ಳಲಿದ್ದಾರೆ. ಈ ಮೂಲಕ ಎಲ್ಲರನ್ನೂ ಗಣನೆಗೆ ತೆಗೆದುಕೊಳ್ಳುವ ಕಸರತ್ತು ನಡೆಸಿದ್ದಾರೆ.

ಸಿ.ಟಿ. ರವಿ, ವಿ ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ಮ ಅರವಿಂದ್ ಬೆಲ್ಲದ್ ಸೇರಿದಂತೆ ಇನ್ನೂ ಕೆಲ ಅಸಮಧಾನಿತ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ವಿಜಯೇಂದ್ರ ಹೇಳಿದ್ದಾರೆ. ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯವಾಗಿದ್ದು, ಎಲ್ಲರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದಿದ್ದಾರೆ.

ಸವಾಲಿನ ಬೆಟ್ಟವನ್ನೇ ಹೊತ್ತು ಸಾಗುತ್ತಿರುವ ವಿಜಯೇಂದ್ರ ಸಿದ್ಧಗಂಗಾ ಮಠ, ಎಡೆಯೂರು ಸಿದ್ಧಲಿಂಗೆಶ್ವರ ದೇವಸ್ಥಾನ, ಸಂಸದರ ಮನೆ, ಶಾಸಕರ ಕಚೇರಿ ಅಂತೆಲ್ಲ ಸುತ್ತಾಡಿದ್ದು, ನವೆಂಬರ್ 15 ರಂದು ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇನ್ನು ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಎನ್ನುವ ಮುಳ್ಳಿನ ಮೇಲಿನ ನಡಿಗೆ ಶುರುವಾಗಿದೆ. ಈ ಸವಾಲನ್ನು ಹೇಗೆ ಮೆಟ್ಟಿ ನಿಲ್ಲುತ್ತಾರೆ ? ಎಲ್ಲರನ್ನ ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ