ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿ; ದೇಶದಾದ್ಯಂತ ಬಿಜೆಪಿ ಸಂಭ್ರಮಾಚರಣೆ

Presidential Election Winner 2022 ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ದ್ರೌಪದಿ ಮುರ್ಮು ದೇಶದ 15ನೇ ರಾಷ್ಟ್ರಪತಿ; ದೇಶದಾದ್ಯಂತ ಬಿಜೆಪಿ ಸಂಭ್ರಮಾಚರಣೆ
ದ್ರೌಪದಿ ಮುರ್ಮು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 22, 2022 | 8:08 AM

Draupadi Murmu | ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನವಾಣಾ ಫಲಿತಾಂಶ ಪ್ರಕಟವಾಗಿದ್ದು, ಎನ್​​ಡಿಎ ಅಭ್ಯರ್ಥಿ, ಜಾರ್ಖಂಡ್ ನ ಮಾಜಿ ಗವರ್ನರ್ ಆಗಿದ್ದ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾ ಮೂಲದ ಮುರ್ಮು ಪಾತ್ರರಾಗಿದ್ದಾರೆ. 1958 ಜೂನ್ 20ರಂದು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಉಪರಬೇದಾ ಗ್ರಾಮದಲ್ಲಿ ಸಂತಾಲ್ ಬುಡಕಟ್ಟು ಸಮುದಾಯದಲ್ಲಿ ಜನನ. ಬ್ಯಾಂಕ್ ಉದ್ಯೋಗಿಯಾಗಿದ್ದ ಶ್ಯಾಮ್ ಚರಣ್ ಮುರ್ಮು ಎಂಬವರನ್ನು ಮುರ್ಮು ವಿವಾಹವಾಗಿದ್ದು, 2014ರಲ್ಲಿ ಪತಿ ಸಾವಿಗೀಡಾಗಿದ್ದು. ಇಬ್ಬರು ಪುತ್ರರು ಕೂಡಾ ಮರಣ ಹೊಂದಿದ್ದು ಮಗಳು ಇತಿಶ್ರೀ ಮುರ್ಮು ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ಮುರ್ಮು ಶಿಕ್ಷಕಿಯಾಗಿದ್ದರು . ರಾಯಿರಂಗ್ ಪುರದಲ್ಲಿ ಶ್ರೀ ಅರಬಂದೊ ಇಂಟೆಗ್ರಲ್ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅವರು ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರು. ಒಡಿಶಾ ಸರ್ಕಾರ ನೀರಾವರಿ ಇಲಾಖೆಯಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.

ರಾಜಕೀಯ ಪಯಣ

1997ರಲ್ಲಿ ಬಿಜೆಪಿ ಸೇರಿದ ಮುರ್ಮು ರಾಯಿರಂಗಪುರ ನಗರ ಪಂಚಾಯತ್ ಕೌನ್ಸಿಲರ್ ಆಗಿ ಆಯ್ಕೆಯಾದರು. 2000ದಲ್ಲಿ ರಾಯಿರಂಗಪುರ ನಗರ ಪಂಚಾಯತ್ ಅಧ್ಯಕ್ಷರಾದ ಅವರು ಬಿಜೆಪಿ ಬುಡಕಟ್ಟು ಜನಾಂಗ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿ ಸೇವೆ ಸಲ್ಲಿಸಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಸಮ್ಮಿಶ್ರ ಸರ್ಕಾರ ರಚನೆಯಾದ ಮುರ್ಮು ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದರು.

ಯಾರಿಗೆ ಎಷ್ಟೆಷ್ಟು ಮತ?

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿದ್ದು ಇಂದು(ಗುರುವಾರ) ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ನಡೆದಿದೆ. ರಾಷ್ಟ್ರಪತಿ ಚುನಾವಣೆಯ  ಮೊದಲ ಸುತ್ತಿನ ಮತ ಎಣಿಕೆಯಲ್ಲಿಯೇ  ಮುರ್ಮ ಮುನ್ನಡೆ ಸಾಧಿಸಿದ್ದರು. ಮುರ್ಮ ಅವರಿಗೆ 540 ಮತಗಳು  ಲಭಿಸಿದ್ದು  ಒಟ್ಟು ಮತದ ಮೌಲ್ಯ 3,78,000  ಆಗಿದೆ. ಅದೇ ವೇಳೆ ಯಶವಂತ ಸಿನ್ಹಾ ಅವರಿಗೆ 1,45,600 ಮೌಲ್ಯದ 208 ಮತಗಳು ಲಭಿಸಿದೆ. 15 ಮತಗಳು ಅಸಿಂಧುವಾಗಿವೆ. 2ನೇ ಸುತ್ತಿನಲ್ಲೂ  ದ್ರೌಪದಿ ಮುರ್ಮುಗೆ 1,349 ಮತಗಳು ಲಭಿಸಿದ್ದು,  ಮೌಲ್ಯ 4,83,299 ಆಗಿದೆ. ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾಗೆ 537 ಮತಗಳು ಲಭಿಸಿದ್ದು ಮತಗಳ ಮೌಲ್ಯ 1,89,876 ಆಗಿದೆ.  ಮೂರನೇ  ಸುತ್ತಿನ ಮತ ಎಣಿಕೆಯಲ್ಲಿ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ 1,349 ಮತಗಳು ಲಭಿಸಿದ್ದು  ಮತಗಳ ಮೌಲ್ಯ 4,83,299 ಆಗಿದೆ. ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾಗೆ 537 ಮತಗಳು ಲಭಿಸಿದ್ದು,ಯಶವಂತ ಸಿನ್ಹಾ ಪಡೆದ ಮತಗಳ ಮೌಲ್ಯ 1,89,876 ಆಗಿದೆ. ಮೂರು ಸುತ್ತಿನ ಮತ ಎಣಿಕೆ ನಂತರ ದ್ರೌಪದಿ ಮುರ್ಮು ಪಡೆದ ಮತಗಳ ಮೌಲ್ಯ 5,77,777 ಆಗಿದ್ದುಯಶವಂತ ಸಿನ್ಹಾ ಪಡೆದ ಮತಗಳ ಮೌಲ್ಯ 2,61,062 ಆಗಿದೆ.

Published On - 7:48 pm, Thu, 21 July 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ