AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

President Election 2022 ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ, ಶೇ 99.18 ಮತದಾನ ದಾಖಲು

727 ಸಂಸದರು ಮತ್ತು 9 ಶಾಸಕರು ಸೇರಿದಂತೆ 736 ಸದಸ್ಯರು ರಾಷ್ಟ್ರಪತಿ ಚುನಾವಣೆಗೆ ಸಂಸತ್​​ನಲ್ಲಿ ಮತದಾನ ಮಾಡಲು ಅನುಮತಿ ನೀಡಲಾಗಿದೆ. ಇದರಲ್ಲಿ 730(721 ಸಂಸದರು, 9 ಶಾಸಕ) ಇಂದು ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.

President Election 2022 ರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯ, ಶೇ 99.18 ಮತದಾನ ದಾಖಲು
ರಾಷ್ಟ್ರಪತಿ ಚುನಾವಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 18, 2022 | 6:48 PM

ದೇಶದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲಿರುವ ಚುನಾವಣೆಗೆ (Presidential poll) ಸೋಮವಾರ ಮತದಾನ ನಡೆದಿದ್ದು ಎಲ್ಲಾ ಕಡೆ ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಮತದಾನ ಪ್ರಕ್ರಿಯೆ ನಡೆದಿದೆ. ಒಟ್ಟು ಶೇ 99.18 ಮತದಾನ ದಾಖಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪಿ.ಸಿ ಮೋಡಿ (PC Mody) ಹೇಳಿದ್ದಾರೆ. ಶಿರೋಮಣಿ ಅಕಾಲಿದಳ ಶಾಸಕ ಮನಪ್ರೀತ್ ಸಿಂಗ್ ಅಯಾಲಿ ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ್ದಾರೆ. ಪಂಜಾಬ್​​ಗೆ ಸಂಬಂಧಿಸಿದ ಸಮಸ್ಯೆಗಳು ಇನ್ನೂ ಪರಿಹಾರವಾಗಿಲ್ಲ ಅಷ್ಟೇ ಅಲ್ಲದೆ ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಬೆಂಬಲಿಸಲು ನಿರ್ಧರಿಸುವಾಗ ತಮ್ಮ ಪಕ್ಷದ ನಾಯಕತ್ವ ನನ್ನನ್ನು ಭೇಟಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. 727 ಸಂಸದರು ಮತ್ತು 9 ಶಾಸಕರು ಸೇರಿದಂತೆ 736 ಸದಸ್ಯರು ರಾಷ್ಟ್ರಪತಿ ಚುನಾವಣೆಗೆ ಸಂಸತ್​​ನಲ್ಲಿ ಮತದಾನ ಮಾಡಲು ಅನುಮತಿ ನೀಡಲಾಗಿದೆ. ಇದರಲ್ಲಿ 730(721 ಸಂಸದರು, 9 ಶಾಸಕ) ಇಂದು ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಹೇಳಿದ್ದಾರೆ.  ಇಲ್ಲಿ ಎಂಟು ಸಂಸದರು ಮತದಾನ  ಮಾಡಿಲ್ಲ. ಈ ಪೈಕಿ ಬಿಜೆಪಿ  – 2, ಕಾಂಗ್ರೆಸ್  – 1, ಶಿವಸೇನಾ – 2, ಸಮಾಜವಾದಿ ಪಕ್ಷ- 1, ಬಿಎಸ್​​ಪಿ – 1, ಎಐಎಂಐಎಂ – 1 ಸಂಸದರು ಮತದಾನ ಮಾಡಿಲ್ಲ.

ಪಿಪಿಇ ಕಿಟ್​​ನಲ್ಲಿ ಬಂದು ಮತದಾನ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಅವರು ಕೋವಿಡ್ ಬಾಧಿತರಾಗಿದ್ದು ಪಿಪಿಇ ಕಿಟ್ ಧರಿಸಿ ಬಂದು ಮತದಾನ ಮಾಡಿದ್ದಾರೆ.

ರಸ್ತೆ ಮತ್ತು ವಾಯುಮಾರ್ಗ ಮೂಲಕ ದೆಹಲಿ ತಲುಪಲಿದೆ ಮತ ಪೆಟ್ಟಿಗೆ

ರಾಷ್ಟ್ರಪತಿ ಚುನಾವಣೆಯ ಮತ ಪೆಟ್ಟಿಗೆಗಳನ್ನು ರಸ್ತೆ ಮತ್ತು ವಿಮಾನದ ಮೂಲಕ ದೆಹಲಿಗೆ ಸಾಗಿಸಲಾಗುವುದು ಎಂದು ಚೀಫ್ ರಿಟರ್ನಿಂಗ್ ಅಫೀಸರ್ ಹೇಳಿದ್ದಾರೆ. ಸಹಾಯಕ ರಿಟರ್ನಿಂಗ್ ಆಫೀಸರ್ ಮತಪೆಟ್ಟಿಗೆ ಸಾಗಿಸುವಾಗ ಜತೆಯಲ್ಲಿ ಹೋಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಎಲ್ಲ ರಾಜ್ಯಗಳಿಂದ ಸೋಮವಾರ ಸಂಜೆ ಬ್ಯಾಲೆಟ್ ಬಾಕ್ಸ್ ಸಂಸತ್ ಗೆ ತಲುಪಲಿದೆ ಎಂದು ಅವರು ಹೇಳಿದ್ದಾರೆ.

70 ಸದಸ್ಯರಿರುವ ದೆಹಲಿ ವಿಧಾನಸಭೆಯಲ್ಲಿ 68 ಸದಸ್ಯರು ಮತದಾನ ಮಾಡಿದ್ದಾರೆ. ಮುಸ್ತಫಾಬಾದ್ ಶಾಸಕ ಹಾದಿ ಯೂನಸ್ ಹಜ್ ತೀರ್ಥಯಾತ್ರೆಯಲ್ಲಿದ್ದು, ಸಚಿವ ಸತ್ಯೇಂದರ್ ಜೈನ್ ಜೈಲಿನಲ್ಲಿದ್ದಾರೆ . ಹಾಗಾಗಿ ಇಬ್ಬರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ.

ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದ ಒ ಪನ್ನೀರ್ ಸೆಲ್ವಂ

ಕೋವಿಡ್ ಬಾಧಿತರಾಗಿರುವ ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಪಿಪಿಇ ಕಿಟ್ ಧರಿಸಿ ಬಂದು ಮತದಾನ ಮಾಡಿದ್ದಾರೆ.

Published On - 6:30 pm, Mon, 18 July 22

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ