ಇಂದಿರಾ ಕ್ಯಾಂಟೀನ್ನಲ್ಲಿ ಗುಣಮಟ್ಟದ ಆಹಾರಕ್ಕೆ ಆದ್ಯತೆ, ಟೆಂಡರ್ ಪ್ರಕ್ರಿಯೆ ಬಳಿಕ ಪುನಾರಂಭ: ಸಿಎಂ ಸಿದ್ಧರಾಮಯ್ಯ
ಇಂದಿರಾ ಕ್ಯಾಂಟೀನ್ ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ, ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಮತ್ತೊಮ್ಮೆ ಟೆಂಡರ್ ಆದ ಬಳಿಕ ರೀ ಲಾಂಚ್ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ಬೆಂಗಳೂರು: ಇಂದಿರಾ ಕ್ಯಾಂಟೀನ್ (Indira Canteen) ವಿಚಾರವಾಗಿ ಹೊಸ ಟೆಂಡರ್ ಕರೆಯುತ್ತೇವೆ. ಕ್ವಾಲಿಟಿ, ಕ್ವಾಂಟಿಟಿಗೂ ಹೆಚ್ಚಿನ ಒತ್ತು ಕೊಡುತ್ತೇವೆ. ಮತ್ತೊಮ್ಮೆ ಟೆಂಡರ್ ಆದ ಬಳಿಕ ರೀ ಲಾಂಚ್ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚನೆ ನೀಡಲಾಗಿದೆ. ಈವರೆಗೆ ಪಾಲಿಕೆ ಶೇ.70, ಸರ್ಕಾರ 30% ಅನುದಾನ ನೀಡುತ್ತಿತ್ತು. ಇನ್ಮುಂದೆ ಸರ್ಕಾರ, ಪಾಲಿಕೆ ತಲಾ 50ರಷ್ಟು ಅನುದಾನ ನೀಡುತ್ತೆ. ಎಲ್ಲೆಲ್ಲಿ ಹೊಸ ಕ್ಯಾಂಟೀನ್ ಪ್ರಾರಂಭಿಸಬೇಕೆಂಬ ಬಗ್ಗೆಯೂ ಚರ್ಚೆ ಮಾಡಿ ಪಟ್ಟಿ ಕೊಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ಸಿಎಂ ಸಿದ್ಧರಾಮಯ್ಯ ನಿರ್ಧರ
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿ ಆಗಿದ್ದು, ಬಿಜೆಪಿ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಬೆಂಗಳೂರಿನ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಮುಚ್ಚಿಹೋಗಿದೆ. ಈಗ ಮತ್ತೆ ತಮ್ಮ ಸರ್ಕಾರ ಬಂದ ಹಿನ್ನೆಲೆಯಲ್ಲಿ ತಮ್ಮ ಹಿಂದಿನ ಆಡಳಿತದಲ್ಲಿ ತಂದಿದ್ದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.
ಇದನ್ನೂ ಓದಿ: Indira Canteen: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ತಲೆ ಎತ್ತಲಿವೆ 50 ಇಂದಿರಾ ಕ್ಯಾಂಟಿನ್
ಸಿದ್ದರಾಮಯ್ಯರಿಂದಲೇ ಮೆನು ಫೈನಲ್
ಊಟದ ಮೇನು ದರ ಪರಿಷ್ಕರಣೆ ಸೇರಿದಂತೆ ಒಂದಿಷ್ಟು ಬದಲಾವಣೆಗಳೊಂದಿಗೆ ಇಂದಿರಾ ಕ್ಯಾಂಟೀನ್ ಪುನಾರಾಂಭಗೊಳ್ಳಲಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ಇನ್ಮುಂದೆ ವೆರೈಟಿ ವೆರೈಟಿ ತಿಂಡಿ, ಊಟಾ ಸಿಗಲಿದೆ. ಬೆಳಗಿನ ತಿಂಡಿಗೆ ವಿಶೇಷ ತಿಂಡಿ ಖ್ಯಾದ್ಯ, ಮಧ್ಯಾಹ್ನಕ್ಕೆ ಭರ್ಜರಿ ಪುಲ್ ಮಿಲ್ಸ್ ನೀಡಲು ಸಿಎಂ ಸಿದ್ದರಾಮಯ್ಯರಿಂದಲೇ ಮೆನು ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಕನಸಿನ ಕೂಸು ಇಂದಿರಾ ಕ್ಯಾಟಿನ್ಗೆ ಮತಷ್ಟು ಬಲ
ಸರ್ಕಾರದ ಸೂಚನೆಯಂತೆ ಬಿಬಿಎಂಪಿ 198 ರಿಂದ 250 ಕ್ಕೆ ಇಂದಿರಾ ಕ್ಯಾಂಟಿನ್ ಏರಿಕೆಗೆ ಮುಂದಾಗಿದೆ. 24 ಮೊಬೈಲ್ ಇಂದಿರಾ ಕ್ಯಾಂಟಿನ್ಗಳು ಸೇರಿದಂತೆ 250 ಇಂದಿರಾ ಕ್ಯಾಂಟಿನ್ ಸ್ಥಾಪನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಹೈಟೆಕ್ ಮಾಡಿ ಉತ್ತಮ ಗುಣಮಟ್ಟದ ಆಹಾರ ನೀಡಲು ಹೆಚ್ಚುವರಿಯಾಗಿ 15 ಕೋಟಿ ಅನುದಾನ ಬೇಕಾಗಿದೆ. ಹೀಗಾಗಿ ಹೆಚ್ಚುವರಿ ಅನುದಾನಕ್ಕೆ ಪಾಲಿಕೆ, ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಸಿಎಂ; ಇಂದಿರಾ ಕ್ಯಾಂಟೀನ್ಗೆ ಸಿಗಲಿದೆ ಮರುಜೀವ
ಪಂಚ ಗ್ಯಾರಂಟಿಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟಿನ್ಗೆ ಮತಷ್ಟು ಅನುದಾನ ನೀಡಲು ಮುಂದಾಗಿದ್ದಾರೆ. ಈಗಾಗಲೇ ಇಂದಿರಾ ಕ್ಯಾಂಟಿನ್ ದುರಸ್ಥಿಗೆ ಪ್ರತಿ ಇಂದಿರಾ ಕ್ಯಾಂಟಿನ್ಗೂ ಒಂದು ಲಕ್ಷ ತುರ್ತು ಅನುದಾನ ಬಿಡುಗಡೆ ಮಾಡಿದ್ದಾರೆ.
ಜೊತೆಗೆ ವಿಧಾನಸೌಧ, ವಿಕಾಸಸೌಧ, ಶಾಸಕರ ಭವನಕ್ಕೆ ಬರುವವರು, ಅಲ್ಲಿ ಕಾರ್ಯನಿರ್ವಹಿಸುವವರಿಗಾಗಿ ಹೊಸದಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.