ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ; ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ
ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ಆಗುತ್ತಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ. ಕೊಲೆಗಾರರು, ಪೊಲೀಸರ ಮಧ್ಯೆ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಅಂತ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಗೃಹ ಇಲಾಖೆಗೆ ವಸೂಲಿ ಇಲಾಖೆ ಎಂದು ಹೆಸರಿಡಬೇಕು. ಬಿಜೆಪಿಗೆ ಪೊಲೀಸ್ ಠಾಣೆಗಳೇ ಕಾಮಧೇನು. ಹಣ ಕೊಟ್ಟವರಿಗೆ ಮಾತ್ರ ಪೋಸ್ಟಿಂಗ್ ಕೊಡುತ್ತಾರೆ. ಕೇವಲ ದಂಡದಿಂದ 701 ಕೋಟಿ ಹಣ ಸಂಗ್ರಹವಾಗಿದೆ. ಆದ್ರೂ ಜೂಜು, ಗಾಂಜಾ, ಕೊಲೆ ನಿಯಂತ್ರಣ ಮಾಡುತ್ತಿಲ್ಲ. ಸಾಮಾನ್ಯ ಜನರಿಗೆ ದಂಡದ ಹೆಸರಲ್ಲಿ ತೊಂದರೆ ಕೊಡುತ್ತಿದ್ದಾರೆ ಅಂತ ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಗಾಂಜಾ ಸಾಗಾಟ ಪಡಿತರ ಹಂಚಿಕೆಗಿಂತ ಸುಲಭವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಸುಲಭವಾಗಿ ಸಿಗುತ್ತಿದೆ ಎಂದು ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ, ಬಾರ್ಗಳಿಂದ 5 ಸಾವಿರ ಹಫ್ತಾ ವಸೂಲಿ ಮಾಡುತ್ತಾರೆ. ಬಿಜೆಪಿ ಸೇರಿದರೆ ರೌಡಿಶೀಟರ್ ಪಟ್ಟಿಯಲ್ಲಿ ಹೆಸರು ಇರಲ್ಲ. ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುತ್ತದೆ ಎಂದು ಹೇಳಿದ್ದಾರೆ.
ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ; ಪ್ರಿಯಾಂಕ್ ಖರ್ಗೆ ಹೇಳಿಕೆ ಮುಂದುವರಿದು ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ಆಗುತ್ತಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ. ಬೇರೆ ಪಕ್ಷದವರು ಭಾಗಿಯಾಗಿದರೆ ತನಿಖೆ ಮಾಡಿಸಲಿ. ತನಿಖೆಯಲ್ಲಿ ಯಾರಿದ್ದಾರೆಂದು ಬಹಿರಂಗವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್ ಕಾಯಿನ್ ಎಲ್ಲಿ? 35 ಬಿಟ್ ಕಾಯಿನ್‌ಗಳನ್ನು ಜಪ್ತಿ ಮಾಡಿದ್ದಾಗಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಹಗರಣದ ತನಿಖೆಯನ್ನ ಉನ್ನತ ಮಟ್ಟದ ಸಮಿತಿಗೆ ವಹಿಸಲು ವಿಳಂಬವೇಕೆ? ಹಗರಣದಲ್ಲಿ ಸಿಎಂ ಭಾಗಿಯಾಗಿದ್ದಾರೆ ಎಂದು ಹೇಳುತ್ತಿಲ್ಲ. ಈ ಹಗರಣದ ಪಾರದರ್ಶಕ ತನಿಖೆಯಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿಯ 3ನೇ ಮುಖ್ಯಮಂತ್ರಿ ನೋಡುತ್ತೇವೆ. ಇದರಲ್ಲಿ ಯಾಱರು ಇದ್ದಾರೆಂದು ತನಿಖಾಧಿಕಾರಿಗಳಿಗೆ ಗೊತ್ತಿದೆ. ಸರಿಯಾದ ತನಿಖಾ ಏಜೆನ್ಸಿಗೆ ನೀಡಿದರೆ ಪ್ರಕರಣ ಬಯಲಾಗುತ್ತೆ. ಈ ಹಗರಣದಲ್ಲಿ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಇದು ಕೇವಲ 200-300 ಕೋಟಿ ರೂಪಾಯಿಯ ಹಗರಣವಲ್ಲ. ಬಿಜೆಪಿಯವರು ಕ್ರಿಪ್ಟೋ ಕರೆನ್ಸಿಯಲ್ಲಿ ಲಂಚ ತೆಗೆದುಕೊಂಡಿದ್ದಾರೆ. ಡ್ರಗ್ಸ್ ಕೇಸ್ ಸೇರಿ ಎಲ್ಲ ಕೇಸ್ ಮುಚ್ಚಿಹಾಕಲು ಲಂಚ ಪಡೆದಿದ್ದಾರೆ. ಸರ್ಕಾರದಲ್ಲಿರುವ ಹಲವರು ಇದರಲ್ಲಿದ್ದಾರೆ. ಬಿಟ್ ಕಾಯಿನ್ ಹಗರಣ ಪಾರದರ್ಶಕವಾಗಿ ತನಿಖೆ ಮಾಡಿದರೆ ಈ ಸರ್ಕಾರಕ್ಕೆ ತೊಂದರೆಯಾಗುತ್ತೆ ಅಂತ ಟಿವಿ9ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ
Tamil Nadu Rains ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; 9 ಜಿಲ್ಲೆಗಳಲ್ಲಿ ರಜೆ ಘೋಷಣೆ
ವಿವಾಹ ಪೂರ್ವ ಅತ್ಯಾಚಾರ ಆರೋಪ; ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಕಿರುತೆರೆ ನಟಿ
Published On - 12:17 pm, Wed, 10 November 21