ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಿದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya), ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಮತ್ತು ಚಂಡಿಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ (Arun Sood) ವಿರುದ್ಧ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ದೂರು ನೀಡಿದ್ದಾರೆ.
ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
Published On - 2:48 pm, Mon, 19 June 23