ಬಿಎಲ್ ಸಂತೋಷ್​ಗೆ ಎರಡು ಪ್ರಮುಖ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸುತ್ತಿರುವ ಆಪರೇಷನ್ ಹಸ್ತದ ಸುಳಿಗಾಳಿಗೆ ಪ್ರತಿಯಾಗಿ, 40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳುವ ಮೂಲಕ ಬಿ.ಎಲ್ ಸಂತೋಷ ಅವರು ಬಿರುಗಾಳಿ ಎಬ್ಬಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡು ಪ್ರಮುಖ ಸವಾಲು ಹಾಕಿದ್ದಾರೆ.

ಬಿಎಲ್ ಸಂತೋಷ್​ಗೆ ಎರಡು ಪ್ರಮುಖ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ ಮತ್ತು ಬಿಎಲ್ ಸಂತೋಷ್
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on:Sep 01, 2023 | 5:25 PM

ಬೆಂಗಳೂರು, ಸೆ.1: ನಮ್ಮ ಸಂಪರ್ಕದಲ್ಲಿ 40-45 ಕಾಂಗ್ರೆಸ್ ಶಾಸಕರು ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (B.L.Santhosh) ಅವರು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸುತ್ತಿರುವ ಆಪರೇಷನ್ ಹಸ್ತದ ಸುಳಿಗಾಳಿಗೆ ಪ್ರತಿಯಾಗಿ ಬಿರುಗಾಳಿ ಎಬ್ಬಿಸಿದಂತಾಗಿದೆ. ಸದ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಒಂದು ಹೆಜ್ಜೆ ಮುಂದೆ ಹೋಗಿ ಬಿಎಲ್ ಸಂತೋಷ್ ಅವರಿಗೆ ಎರಡು ಪ್ರಮುಖ ಸವಾಲುಗಳನ್ನು ಹಾಕಿದ್ದಾರೆ.

ಬಿಎಲ್ ಸಂತೋಷ್ ಹೇಳಿಕೆಗೆ ಟ್ವೀಟ್ ಮೂಲಕ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ, “ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದಾರೆ.

ಇದನ್ನೂ ಓದಿ: 40 – 45 ಜನ ಸಂಪರ್ಕದಲ್ಲಿದ್ದಾರೆ, ಒಪ್ಪಿಗೆ ಸಿಕ್ಕರೆ ಒಂದು ದಿನದ ಕೆಲಸ, ಆದರೆ; ಬಿಎಲ್​ ಸಂತೋಷ್ ಸ್ಫೋಟಕ ಹೇಳಿಕೆ

“ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು, ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ? ಎಂದು ಬಿಎಲ್ ಸಂತೋಷ್ ಅವರಿಗೆ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಟ್ವೀಟ್

ಬಿಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಎಲ್ಲ ಶಾಸಕರನ್ನೂ ಸಂಪರ್ಕದಲ್ಲಿ ಇಟ್ಟುಕೊಳ್ಳಲಿ, ಬಹಳ ಸಂತೋಷ ಎಂದಿದ್ದಾರೆ. ಬಿಜೆಪಿ ಶಾಸಕರೇ ನಮ್ಮ ಜೊತೆಗೆ ಬರುತ್ತಾ ಇದ್ದಾರೆ. ಕರ್ನಾಟಕ ಬಿಜೆಪಿ ಮುಳುಗಿ ಹೋದ ಹಡುಗು. ಸೀ ಡೈವರ್ಸ್ ತರಹ ಸಂತೋಷ್ ಮುಳುಗಿ ಅದನ್ನು ಮೇಲೆತ್ತಲಿ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Fri, 1 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ