Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ರೆ ನಮಗೆ ಅವಮಾನ ಎಂದ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್

ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ ಆಗುತ್ತದೆ. ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ಆಗ್ರಹ ಮಾಡಿದ್ದಾರೆ.

ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ರೆ ನಮಗೆ ಅವಮಾನ ಎಂದ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್
ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜು
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2023 | 5:21 PM

ಬೆಂಗಳೂರು: ಉಚಿತ ಪ್ರಯಾಣ (Free Bus Service) ಅಂತಾ ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ. ಹಾಗಂತ ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ. ಆದರೆ ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಆಗ್ರಹ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ದರೆ ನಮಗೆ ಅವಮಾನ ಆಗುತ್ತದೆ. ಮುಂದಿನ ವಾರ ಬಿಎಂಟಿಸಿ ಬಸ್​ ಹತ್ತಿ ಎಲ್ಲರ ಪರವಾಗಿ ಕೇಳುತ್ತೇನೆ ಎಂದು ಹೇಳಿದರು.

ಮನೆ ಎರೆಡು ಭಾಗ ಮಾಡಿದ್ದೀರಿ ಎಲ್ಲರಿಗೂ ಉಚಿತ ಕೊಡಿ, ಇದೊಂದು ಪ್ರಳಯ ಆಗಲಿ. ಗಂಡಸರ ಉಚಿತ ಪ್ರಯಾಣ ಬಗ್ಗೆಯೂ ಬಜೆಟ್​ನಲ್ಲಿ ಘೋಷಿಸಿ. ಗಂಡಸರು ವೋಟ್ ಹಾಕಿಲ್ವಾ, ಅವರಿಗೆ ಉಚಿತ ಪ್ರಯಾಣ ಕೊಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್​; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ

ಉಚಿತ ಬಸ್​​ ಪ್ರಯಾಣ ರದ್ಧುಗೊಳಿಸುವಂತೆ ಸಿಎಂಗೆ ಮನವಿ ಮಾಡಿದ ಮದ್ಯಪ್ರಿಯ ಪತಿರಾಯ   

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಸ್ ನಿಲ್ದಾಣದಲ್ಲಿ ಪ್ರವಾಸಕ್ಕೆ ಹೋದ ಪತ್ನಿ ಮನೆಗೆ ಬಂದಿಲ್ಲ ಎಂದು ಮದ್ಯಪ್ರಿಯ ಪತಿರಾಯ ಅವಾಂತರ ಸೃಷ್ಠಿಸಿದ್ದ. ನನ್ನ ಹೆಂಡತಿ ಪ್ರವಾಸಕ್ಕೆ ಹೋಗಿದ್ದು, ಇನ್ನು ವಾಪಸ್ ಬಂದಿಲ್ಲವೆಂದು ಸರ್ಕಾರಿ ಬಸ್​ ಕೆಳಗೆ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದ.

ಇದನ್ನೂ ಓದಿ: Chamarajanagara: ಮಹಿಳೆಯರಿಗೆ ಉಚಿತ ಪ್ರಯಾಣ ಎಫೆಕ್ಟ್​; ಡ್ರೈವರ್​ ಸೀಟ್​ ಮೂಲಕ ಬಸ್ ಹತ್ತಿದ ಲೇಡಿಸ್

ಸಿಎಂ ಸಿದ್ದರಾಮಯ್ಯ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ರದ್ದುಗೊಳಿಸಿ ಎಂದು ಮನವಿ ಮಾಡಿದ್ದ. ಉಚಿತ ಬಸ್ ಪ್ರಯಾಣವನ್ನು ತೆಗೆದು ಹಾಕಬೇಕು ಎಂದು ಪತಿರಾಯ ವಾಗ್ದಾಳಿ ಮಾಡಿದ್ದ. ಕೊನೆಗೆ ಸ್ಥಳೀಯರು ಈತನನ್ನು ಬಸ್​ ಕೆಳಗಡೆಯಿಂದ ಹೊರಗೆ ಎಳೆದರು. ನಂತರ ಹೊಸಕೋಟೆ ಪೊಲೀಸರಿಗೆ ‌ಒಪ್ಪಿಸಲಾಗಿದೆ. ಈತನ ಅವಾಂತರವನ್ನು ಸಾರ್ವಜನಿಕರು ಮೊಬೈಲ್​​ನಲ್ಲಿ ಸೆರೆ ಹಿಡಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:19 pm, Sat, 1 July 23

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ