Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಪ್ರೊ ಎಂಆರ್ ​ದೊರೆಸ್ವಾಮಿ: ಸರ್ಕಾರಕ್ಕೆ 18 ಸಲಹೆಗಳನ್ನ ನೀಡಿದ ಶಿಕ್ಷಣ ತಜ್ಞ

ಶಿಕ್ಷಣ ತಜ್ಞ ಪ್ರೊ. ಎಂ.ಆರ್​ ದೊರೆಸ್ವಾಮಿ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಪ್ರೊ ಎಂಆರ್ ​ದೊರೆಸ್ವಾಮಿ: ಸರ್ಕಾರಕ್ಕೆ 18 ಸಲಹೆಗಳನ್ನ ನೀಡಿದ ಶಿಕ್ಷಣ ತಜ್ಞ
ಪ್ರೊ. ಎಂ.ಆರ್. ದೊರೆಸ್ವಾಮಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 08, 2023 | 8:20 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ (School textbook revise) ಮುಂದಾಗಿದೆ. ಇದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಕೂಡ ಮಾಡಲಾಗಿತ್ತು. ಬಳಿಕ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದರು.  ಇವೆಲ್ಲದರ ಮಧ್ಯೆ ಶಿಕ್ಷಣ ತಜ್ಞ ಪ್ರೊ. ಎಂ.ಆರ್​ ದೊರೆಸ್ವಾಮಿ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ವಿಚಾರ ಬಗ್ಗೆ ಚರ್ಚೆ ಮಾಡಲಾಗಿದೆ.

ಸರ್ಕಾರಕ್ಕೆ 18 ಸಲಹೆಗಳು

ಸಿಎಂ ಭೇಟಿ ಬಳಿಕ ಶಿಕ್ಷಣ ತಜ್ಞ ದೊರೆಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ಎರುಡೂವರೆ ವರ್ಷಗಳ ಕಾರ್ಯಕ್ರಮಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಮುಖ್ಯವಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸರ್ಕಾರಕ್ಕೆ 18 ಸಲಹೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Textbooks Revision: ಈ ವರ್ಷವೇ ಪಠ್ಯ ಪರಿಷ್ಕರಣೆ: ಎಲ್ಲಾ ಗೊಂದಗಳಿಗೆ ತೆರೆ ಎಳೆದ ಸಚಿವ ಮಧು ಬಂಗಾರಪ್ಪ

ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನಿಡುವಂತೆ ಸಲಹೆ

ಇದಲ್ಲದೇ 35 ವಿಶ್ವವಿದ್ಯಾಲಯಗಳು ತಲಾ 10 ಶಾಲೆಗಳ ಅಭಿವೃದ್ಧಿಯ ಹೊಣೆ ಹೊತ್ತಿದ್ದೇವು. ನಮ್ಮ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 30 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹೀಗಾಗಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತೆ ಸಲಹೆ ನೀಡಲಾಗಿದೆ. ಇದಕ್ಕೆ ಮಧ್ಯಂತರ ವರದಿಯಲ್ಲಿ ಪರಿಹಾರವನ್ನೂ ತಿಳಿಸಲಾಗಿದೆ ಎಂದರು.

ಸಿಎಂ ರಿಂದ ಸಕಾರಾತ್ಮಕ ಸ್ಪಂದನೆ 

2020-21ನೇ ಸಾಲಿನ ಬಜೆಟ್​​ನಲ್ಲಿ ಪ್ರತಿಯೊಬ್ಬ ಶಾಸಕರೂ 3 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸುವ ಕಾರ್ಯಕ್ರಮವಿತ್ತು. ಅದರಂತೆ ಕೆಲ ಶಾಸಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಧ್ಯಂತರ ವರದಿ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ಓದಿದ ಬಳಿಕ ಮತ್ತೊಮ್ಮೆ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನಿಡಿದ್ದಾರೆ.

ಇದನ್ನೂ ಓದಿ: SSLC Supplementary Exam: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC

ಈ ವರ್ಷವೇ ಪಠ್ಯ ಪರಿಷ್ಕರಣೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ಈ ಕ್ಷಣದಲ್ಲೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 pm, Thu, 8 June 23

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ