ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ (School textbook revise) ಮುಂದಾಗಿದೆ. ಇದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಕೂಡ ಮಾಡಲಾಗಿತ್ತು. ಬಳಿಕ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದರು. ಇವೆಲ್ಲದರ ಮಧ್ಯೆ ಶಿಕ್ಷಣ ತಜ್ಞ ಪ್ರೊ. ಎಂ.ಆರ್ ದೊರೆಸ್ವಾಮಿ ಅವರು ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ. ಶಾಲಾ ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ವಿಚಾರ ಬಗ್ಗೆ ಚರ್ಚೆ ಮಾಡಲಾಗಿದೆ.
ಸಿಎಂ ಭೇಟಿ ಬಳಿಕ ಶಿಕ್ಷಣ ತಜ್ಞ ದೊರೆಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಮ್ಮ ಎರುಡೂವರೆ ವರ್ಷಗಳ ಕಾರ್ಯಕ್ರಮಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಮುಖ್ಯವಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸರ್ಕಾರಕ್ಕೆ 18 ಸಲಹೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Textbooks Revision: ಈ ವರ್ಷವೇ ಪಠ್ಯ ಪರಿಷ್ಕರಣೆ: ಎಲ್ಲಾ ಗೊಂದಗಳಿಗೆ ತೆರೆ ಎಳೆದ ಸಚಿವ ಮಧು ಬಂಗಾರಪ್ಪ
ಇದಲ್ಲದೇ 35 ವಿಶ್ವವಿದ್ಯಾಲಯಗಳು ತಲಾ 10 ಶಾಲೆಗಳ ಅಭಿವೃದ್ಧಿಯ ಹೊಣೆ ಹೊತ್ತಿದ್ದೇವು. ನಮ್ಮ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 30 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹೀಗಾಗಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವಂತೆ ಸಲಹೆ ನೀಡಲಾಗಿದೆ. ಇದಕ್ಕೆ ಮಧ್ಯಂತರ ವರದಿಯಲ್ಲಿ ಪರಿಹಾರವನ್ನೂ ತಿಳಿಸಲಾಗಿದೆ ಎಂದರು.
2020-21ನೇ ಸಾಲಿನ ಬಜೆಟ್ನಲ್ಲಿ ಪ್ರತಿಯೊಬ್ಬ ಶಾಸಕರೂ 3 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸುವ ಕಾರ್ಯಕ್ರಮವಿತ್ತು. ಅದರಂತೆ ಕೆಲ ಶಾಸಕರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಧ್ಯಂತರ ವರದಿ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ಓದಿದ ಬಳಿಕ ಮತ್ತೊಮ್ಮೆ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನಿಡಿದ್ದಾರೆ.
ಇದನ್ನೂ ಓದಿ: SSLC Supplementary Exam: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC
ಈ ವರ್ಷವೇ ಪಠ್ಯ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ಈ ಕ್ಷಣದಲ್ಲೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ ಎಂದು ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:12 pm, Thu, 8 June 23