ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್​

ಮುಡಾ ಹಗರಣದ ಪ್ರಾಸಿಕ್ಯೂಷನ್​ಗೆ ಸಂಬಂಧಿಸಿದಂತೆ​ ಹೈಕೋರ್ಟ್​ ನೀಡಿದ ತೀರ್ಪು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಕರ್ನಾಟಕ ಬಿಜೆಪಿ ಒತ್ತಾಯಿಸಿದೆ.

ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್​
ವಿಜಯೇಂದ್ರ, ಅಶೋಕ್​
Follow us
ವಿವೇಕ ಬಿರಾದಾರ
|

Updated on:Sep 24, 2024 | 2:59 PM

ಬೆಂಗಳೂರು, ಸೆಪ್ಟೆಂಬರ್​ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ (Prosecution)​​​ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ (High Court)​ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್​ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿಪಕ್ಷ ನಾಯಕ ಆರ್​ ಅಶೋಕ್​ ಮಾತನಾಡಿ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್​ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಸತ್ಯಮೇವ ಜಯತೆ ಎಂದು ಬಿಜೆಪಿ

“ಇದು ಸತ್ಯಕ್ಕೆ ಸಂದ ಜಯ. ಜಯತೆ, ಜಯತೆ, ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​​ ಹಾಕಿದೆ.

“ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದು ಬಿಜೆಪಿ ಹೇಳಿದೆ.

“ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ” ಎಂದಿದೆ.

ವಿಜಯೇಂದ್ರ ಟ್ವೀಟ್​

ಇದನ್ನೂ ಓದಿ: ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

“ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದೆ.

ರಾಜಿನಾಮೆಗಾಗಿ ಪಾದಯಾತ್ರೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿವೆ. ಅಲ್ಲದೇ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕೆಂದು ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್​ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Tue, 24 September 24