AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಈ ತೀರ್ಪಿನಿಂದ ಗೊಂದಲಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 24, 2024 | 2:53 PM

Share

ಬೆಂಗಳೂರು, ಸೆಪ್ಟೆಂಬರ್​​ 24: ಮುಡಾದಲ್ಲಿ (Muda) ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಸಿಕ್ಯೂಷನ್​ ಅನ್ನು ಕರ್ನಾಟಕ ಹೈಕೋರ್ಟ್ (High Court)​ ಎತ್ತಿ ಹಿಡಿದಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನೆಡೆಯಾಗಿದೆ. ಇದರಿಂದ ಸಿಎಂ ಸಿದ್ದಾರಾಮಯ್ಯ ಟೆನ್ಷನ್ ಆಗಿದ್ದು​, ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಗುರುವಾರ ಸಚಿವ ಸಂಪುಟ ಸಭೆ

ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಸಿಎಂ ನಿವಾಸಕ್ಕೆ ಸಚಿವರ ದೌಡು

ಹೈಕೋರ್ಟ್​ ತೀರ್ಪು ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸಚಿವರು ದೌಡಾಯಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಚಿವರಾದ ಶಿವರಾಜ್ ತಂಗಡಗಿ, ಕೃಷ್ಣಭೈರೇಗೌಡ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರಳಿದ್ದಾರೆ.

ಇದನ್ನೂ ಓದಿ: ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ರಾಜ್ಯಕ್ಕೆ ಸುರ್ಜೆವಾಲಾ ಆಗಮನ

ಹೈಕೋರ್ಟ್​ ತೀರ್ಪು ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ, ಮುಖಂಡರೊಂದಿಗೆ ಸಭೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿದ್ದರಾಮಯ್ಯ ಕೇರಳ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇರಳಕ್ಕೆ ತೆರಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಳೆ (ಸೆ.25) ಮಧ್ಯಾಹ್ನ ಕೇರಳದ ಮಲಪ್ಪುರಂ ಜಿಲ್ಲೆಗೆ ತೆರಳಲಿದ್ದು, ಇಲ್ಲಿ ನಡೆಯುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:17 pm, Tue, 24 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ