PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ

| Updated By: ರಮೇಶ್ ಬಿ. ಜವಳಗೇರಾ

Updated on: Oct 05, 2022 | 3:37 PM

ಅಮೃತ್ ಪೌಲ್ ಹರಕೆಯ ಕುರಿ. PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ ಎಂದು ಕಾಂಗ್ರೆಸ್​ ನಾಯಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಪಿಎಸ್​ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು  ಹಲವು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣ ರಾಜ್ಯ ರಾಜಕೀಯಕ್ಕೂ ಥಳಕು ಹಾಕಿಕೊಂಡಿದೆ.

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದು, ಈಗ ಅದು ಕಾಂಗ್ರೆಸ್ ಗೆ ಅಸ್ತ್ರ ಸಿಕ್ಕಂತಾಗಿದೆ. ಇದನ್ನೇ ಅಸ್ತ್ರವನ್ನಾಗಿಟ್ಟುಕೊಂಡು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿ. ಈ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿದ್ದಾರೆ.

ಇದನ್ನೂ ಓದಿ: ಪರೇಶ್ ಮೇಸ್ತಾ ಪ್ರಕರಣದ ಸಿಬಿಐ ವರದಿ: ಸಮರ್ಥಿಸಿಕೊಳ್ಳಲು ಬಿಜೆಪಿಯಿಂದ ಹೊಸ ವರಸೆ

ಈ ಬ್ಗಗೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ (PSI) ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ (Amrit Paul) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ (CBI) ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.


ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಈ ಹಗರಣದ ತನಿಖೆಯನ್ನು ಈಗಾಗಲೇ ಸಿಐಡಿ ನಡೆಸುತ್ತಿದೆ. ಯತ್ನಾಳ್‍ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ.? ಎಂದು ಪ್ರಶ್ನಿಸಿದ್ದಾರೆ.

ಕಳೆದ ಅಧಿವೇಶನದಲ್ಲಿ ಪಿಎಸ್‍ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‍ಪಿನ್ ಎಕ್ಸ್ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ ತನಿಖೆಯಾಗಬೇಕು. ಪಿಎಸ್‍ಐ ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್‍ವೈ ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್‍ವೈ ಪುತ್ರನ (ಬಿವೈ ವಿಜಯೇಂದ್ರ) ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಎಂದಿದ್ದಾರೆ.

ಪಿಎಸ್‍ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Wed, 5 October 22