Punajb Elections 2022: ಆಪ್ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂ; ಪಂಜಾಬ್‌ನಲ್ಲಿ ಕೇಜ್ರಿವಾಲ್ ಭರವಸೆ
ಪಂಜಾಬ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1000 ರೂ., ದಿನದ 24 ಗಂಟೆಯೂ ಉಚಿತ ವಿದ್ಯುತ್ ನೀಡುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಮೊಹಾಲಿ: ಪಂಜಾಬ್ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 10 ಅಂಶಗಳ ‘ಪಂಜಾಬ್ ಮಾದರಿ’ಯನ್ನು ಮತದಾರರ ಮುಂದಿಟ್ಟಿದ್ದಾರೆ. ಮೊಹಾಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮುಂದಿನ ಐದು ವರ್ಷಗಳಲ್ಲಿ ಪಂಜಾಬ್ ರಾಜ್ಯವನ್ನು ಸಮೃದ್ಧಗೊಳಿಸುವುದಾಗಿ ಭರವಸೆ ನೀಡಿದರು. ಹಾಗೇ “ಉದ್ಯೋಗಕ್ಕಾಗಿ ಕೆನಡಾಗೆ ಹೋದ ಯುವಕರು ಮತ್ತೆ ಪಂಜಾಬ್ಗೆ ಹಿಂತಿರುಗುತ್ತಾರೆ” ಎಂದು ಭರವಸೆ ನೀಡಿದ್ದಾರೆ. ಹಾಗೇ, ಪಂಜಾಬ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1000 ರೂಪಾಯಿ ನೀಡುವುದಾಗಿ ಎಎಪಿ ಮುಖ್ಯಸ್ಥರು ಭರವಸೆ ನೀಡಿದ್ದಾರೆ.
ಪಂಜಾಬ್ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷವು ಎಲ್ಲರಿಗೂ ಉದ್ಯೋಗವನ್ನು ನೀಡುತ್ತದೆ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡುತ್ತದೆ ಎಂದು ಭರವಸೆ ನೀಡಿದ್ದಾರೆ. “ಶಾಂತಿಯುತ ಪಂಜಾಬ್” ಅನ್ನು ರಚಿಸುವುದಾಗಿ ಭರವಸೆ ನೀಡಿದ ಅವರು, ಆಮ್ ಆದ್ಮಿ ಪಾರ್ಟಿ ಸರ್ಕಾರವು ರೈತರ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಹೇಳಿದ್ದಾರೆ.
“ನಾವು ಅಧಿಕಾರಕ್ಕೆ ಬಂದರೆ, ನಾವು ಪಂಜಾಬ್‌ನಿಂದ ಡ್ರಗ್ ಸಿಂಡಿಕೇಟ್ ಅನ್ನು ಅಳಿಸಿ ಹಾಕುತ್ತೇವೆ ಎಲ್ಲಾ ತ್ಯಾಗದ ಪ್ರಕರಣಗಳಲ್ಲಿ ನ್ಯಾಯವನ್ನು ಖಚಿತಪಡಿಸುತ್ತೇವೆ ಮತ್ತು ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತೇವೆ. ನಾವು 16,000 ಮೊಹಲ್ಲಾ ಕ್ಲಿನಿಕ್‌ಗಳನ್ನು ಸ್ಥಾಪಿಸುತ್ತೇವೆ ಮತ್ತು ಪ್ರತಿ ಪಂಜಾಬಿಗೆ ಉಚಿತ ಚಿಕಿತ್ಸೆ ನೀಡುತ್ತೇವೆ. ದಿನದ 24 ಗಂಟೆಯೂ ಉಚಿತ ವಿದ್ಯುತ್ ನೀಡುತ್ತೇವೆ’’ ಎಂದು ಅರವಿಂದ್ ಕೇಜ್ರಿವಾಲ್ ಪ್ರತಿಜ್ಞೆ ಮಾಡಿದ್ದಾರೆ.
ಪಂಜಾಬ್‌ನಲ್ಲಿ ಬಲ್ಬೀರ್ ಸಿಂಗ್ ರಾಜೇವಾಲ್ ನೇತೃತ್ವದಲ್ಲಿ 22 ಕಿಸಾನ್ ಒಕ್ಕೂಟಗಳನ್ನು ಪ್ರತಿನಿಧಿಸುವ ರಾಜಕೀಯ ಗುಂಪು ಇತ್ತೀಚೆಗೆ ಹೊಸದಾಗಿ ರೂಪುಗೊಂಡ ಭಾರತೀಯ ಅರ್ಥಿಕ್ ಪಾರ್ಟಿ (ಬಿಎಪಿ)ಯೊಂದಿಗೆ ಕೈಜೋಡಿಸಿದೆ. ಕಾರ್ಯಕ್ರಮವೊಂದಕ್ಕೆ ತೆರಳುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿರುವುದರ ಕುರಿತು ನಡೆಯುತ್ತಿರುವ ಕೋಲಾಹಲವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಆಪ್ ನೇತೃತ್ವದ ಸರ್ಕಾರವು ಪ್ರಧಾನಿ ಮತ್ತು ಸಾಮಾನ್ಯ ಜನರಿಗೆ ಅಗತ್ಯ ಭದ್ರತೆಯನ್ನು ಒದಗಿಸುವುದನ್ನು ಖಚಿತಪಡಿಸುತ್ತದೆ ಎಂದು ಭರವಸೆ ನೀಡಿದ್ದಾರೆ.
“ಪ್ರಧಾನಿ ಭದ್ರತಾ ಲೋಪ ಗಂಭೀರ ವಿಷಯವಾಗಿದೆ. ಕಾಂಗ್ರೆಸ್ ಸರ್ಕಾರವು ಪ್ರಧಾನಿ ಮತ್ತು ಸಾಮಾನ್ಯ ಜನರಿಗೆ ಭದ್ರತೆ ಒದಗಿಸಲು ವಿಫಲವಾಗಿದೆ. ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸಿದರೆ, ನಾವು ಪ್ರಧಾನಿ ಮತ್ತು ಸಾಮಾನ್ಯ ಜನರಿಗೆ ಅಗತ್ಯ ಭದ್ರತೆಯನ್ನು ಒದಗಿಸುತ್ತೇವೆ. ಚಂಡೀಗಢದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಲಾಕ್ಡೌನ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ: ಅರವಿಂದ ಕೇಜ್ರಿವಾಲ್