AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಮರೀಂದರ್ ಸಿಂಗ್ ಬಳಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ನವಜೋತ್ ಸಿಂಗ್ ಸಿಧು ಬಣದಿಂದ ಸ್ಪಷ್ಟ ಸಂದೇಶ

Punjab Political Crisis: ತಮ್ಮ ವಿರುದ್ಧ ಮಾಡಲಾದ ಟ್ವೀಟ್​ಗೆ ಬಹಿರಂಗ ಕ್ಷಮಾಪಣೆ ಕೇಳುವವರೆಗೂ ನವಜೋತ್ ಸಿಂಗ್ ಸಿಧು ಅವರನ್ನು ಭೇಟಿಯಾಗುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದರು.

ಸಿಎಂ ಅಮರೀಂದರ್ ಸಿಂಗ್ ಬಳಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ; ನವಜೋತ್ ಸಿಂಗ್ ಸಿಧು ಬಣದಿಂದ ಸ್ಪಷ್ಟ ಸಂದೇಶ
ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಧು
TV9 Web
| Edited By: |

Updated on:Jul 21, 2021 | 3:40 PM

Share

ಅಮೃತಸರ: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ (CM Amarinder Singh) ನಡುವಿನ ವೈರತ್ವ ಪಂಜಾಬ್ ಕಾಂಗ್ರೆಸ್ ರಾಜಕಾರಣದ (Punjab Politics) ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿವೆ. ಕ್ಯಾಪ್ಟನ್ ಅಮರೀಂದರ್ ಸಿಂಗ್ ತೀವ್ರ ವಿರೋಧದ ನಡುವೆಯೂ ನವಜೋತ್ ಸಿಂಗ್ ಸಿಧುಗೆ ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನ ನೀಡಿರುವ ಹೈಕಮಾಂಡ್ ವಿರುದ್ಧ ಪಂಜಾಬ್ ಸಿಎಂ ಮುನಿಸಿಕೊಂಡಿದ್ದಾರೆ. ಅಮರೀಂದರ್ ಸಿಂಗ್ ಬಳಿ ಸಿಧು ಕ್ಷಮಾಪಣೆ ಕೇಳುವವರೆಗೂ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ನವಜೋತ್ ಸಿಂಗ್ (Navjot Singh Sidhu) ಅವರನ್ನು ಭೇಟಿ ಮಾಡುವುದಿಲ್ಲ ಎಂದು ಅಮರೀಂದರ್ ಸಿಂಗ್ ಬಣದವರು ಘೋಷಿಸಿದ್ದರು. ಇದಕ್ಕೆ ಪ್ರತಿಸವಾಲು ಹಾಕಿರುವ ಸಿಧು ಬಣದವರು ಸಿಎಂ ಅಮರೀಂದರ್ ಸಿಂಗ್ ಬಳಿ ನವಜೋತ್ ಸಿಂಗ್ ಸಿಧು ಕ್ಷಮಾಪಣೆ ಕೇಳಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಈ ಮೂಲಕ ಪಂಜಾಬ್​ ರಾಜ್ಯದ ಕಾಂಗ್ರೆಸ್ ಪಕ್ಷದೊಳಗೆ ಮತ್ತೆ ಅಸಮಾಧಾನ ಹೊಗೆಯಾಡುತ್ತಿದೆ. ನವಜೋತ್ ಸಿಂಗ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಅವರ ಅಸಮಾಧಾನ ಕಡಿಮೆಯಾಗಿ, ಸಿಎಂ ಅಮರೀಂದರ್ ಸಿಂಗ್ ಜೊತೆ ಸೌಹಾರ್ದಯುತ ಸಂಬಂಧ ಏರ್ಪಡಬಹುದು ಎಂಬ ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ ತಲೆಕೆಳಗಾಗಿದೆ. ನವಜೋತ್ ಸಿಂಗ್ ಪಂಜಾಬ್​ನ ಸಿಎಂ ಅಮರೀಂದರ್ ಸಿಂಗ್ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದರು. ‘ಆ ಟ್ವೀಟ್​ಗೆ ಸಾರ್ವಜನಿಕವಾಗಿ ಕ್ಷಮಾಪಣೆ ಕೇಳುವವರೆಗೂ ನಾನು ಸಿಧು ಅವರನ್ನು ಭೇಟಿಯಾಗುವುದಿಲ್ಲ’ ಎಂದು ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಳೆದ ವಾರ ನಡೆದ ಪಕ್ಷದ ಸಭೆಯಲ್ಲಿ ಹೇಳಿದ್ದರು. ಆದರೆ, ಕ್ಷಮಾಪಣೆ ಕೇಳುವ ಮಾತೇ ಇಲ್ಲ ಎಂದು ಸಿಧು ಬಣದವರು ಇಂದು ಖಚಿತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ಪಂಜಾಬ್​ನ ಕಾಂಗ್ರೆಸ್ ಪಕ್ಷದ 77 ಶಾಸಕರನ್ನು ಇಂದು ಅಮೃತಸರದ ಗೋಲ್ಡನ್ ಟೆಂಪಲ್​ಗೆ ತನ್ನೊಡನೆ ಬರಲು ಪಂಜಾಬ್ ನೂತನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ಕೋರಿದ್ದರು. ಅವರಲ್ಲಿ 62 ಶಾಸಕರು ಇಂದು ಸಿಧು ಜೊತೆ ಅಮೃತಸರಕ್ಕೆ ತೆರಳುವ ಮೂಲಕ ಅಮರೀಂದರ್ ಸಿಂಗ್​ಗೆ ಶಾಕ್ ಕೊಟ್ಟಿದ್ದಾರೆ. ಹೀಗಾಗಿ, ಸದ್ಯಕ್ಕಂತೂ ಪಂಜಾಬ್​ನಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ತನ್ನ ಪ್ರಾಬಲ್ಯ ತೋರಿಸಲು ನಿರ್ಧರಿಸಿದ್ದ ಸಿಧು ಪಂಜಾಬ್​ನ ಕಾಂಗ್ರೆಸ್ ಪಕ್ಷದ ಎಲ್ಲ 77 ಶಾಸಕರನ್ನೂ ಅಮೃತಸರದ ಗೋಲ್ಡನ್ ಟೆಂಪಲ್​ಗೆ ಬರಲು ಸೂಚಿಸಿದ್ದರು. ಆದರೆ, ಅವರಲ್ಲಿ 62 ಶಾಸಕರು ನವಜೋತ್ ಸಿಂಗ್ ಅವರ ಬಣದಲ್ಲಿ ಗುರುತಿಸಿಕೊಂಡಿದ್ದು, ಉಳಿದ 15 ಶಾಸಕರು ಸಿಎಂ ಅಮರೀಂದರ್ ಸಿಂಗ್ ಬಣದಲ್ಲಿದ್ದಾರೆ. ಈ ಮೂಲಕ ತಮ್ಮ ನಾಯಕತ್ವವನ್ನು ಒಪ್ಪಿಕೊಂಡ ಶಾಸಕರ ಸಂಖ್ಯೆ ಹೆಚ್ಚಾಗಿದೆ ಎಂಬ ಸಂದೇಶವನ್ನು ತಮ್ಮ ಎದುರಾಳಿ ಬಣಕ್ಕೆ ನವಜೋತ್ ಸಿಂಗ್ ಸಿಧು ತಲುಪಿಸಿದ್ದಾರೆ.

ಈ ಬಾರಿಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಬೆಂಬಲಿಗರಾದ ವಿಜಯೇಂದರ್ ಸಿಂಗ್ ಸಿಂಗ್ಲಾ, ಮನೀಷ್ ತಿವಾರಿ, ಸಂತೋಷ್ ಚೌಧರಿ, ಡಾ. ರಾಜ್​ಕುಮಾರ್ ವರ್ಕ ಅವರನ್ನು ಶಿಫಾರಸು ಮಾಡಿದ್ದರು. ಆದರೆ, ಅವರ್ಯಾರಿಗೂ ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನ ನೀಡದಿರುವುದು ಕ್ಯಾಪ್ಟನ್ ಅಸಮಾಧಾನಕ್ಕೆ ಕಾರಣವಾಗಿದೆ.

ತಮ್ಮ ಪರವಾಗಿರುವ 62 ಕಾಂಗ್ರೆಸ್ ಶಾಸಕರೊಂದಿಗೆ ಅಮೃತಸರದ ಗೋಲ್ಡನ್ ಟೆಂಪಲ್​ಗೆ ಭೇಟಿ ನೀಡಿರುವ ನವಜೋತ್ ಸಿಂಗ್ ಸಿಧು ಫೋಟೋಗಳು ವೈರಲ್ ಆಗಿವೆ. ‘ಆಟ ಶುರುವಾಗಿದೆ. ನವಜೋತ್ ಸಿಂಗ್ ಸಿಧು 62, ಕ್ಯಾಪ್ಟನ್ ಅಮರೀಂದರ್ ಸಿಂಗ್ 15 ರನ್ ಪಡೆದಿದ್ದಾರೆ’ ಎಂದು ಬಿಜೆಪಿ ನಾಯಕ ಆರ್​ಪಿ ಸಿಂಗ್ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Navjot Singh Sidhu: ಅಮೃತಸರದಲ್ಲಿ 62 ಶಾಸಕರ ಪ್ರಾಬಲ್ಯ ಪ್ರದರ್ಶಿಸಿದ ನೂತನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು

(Punjab Congress Chief Navjot Singh Sidhu camp says he wont apologize to Punjab CM Amarinder Singh)

Published On - 3:39 pm, Wed, 21 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ