Punjab CM: ಅಮರೀಂದರ್ ಸಿಂಗ್ ರಾಜೀನಾಮೆ ಹಿನ್ನೆಲೆ; ಪಂಜಾಬ್ ನೂತನ ಸಿಎಂ ರೇಸ್​ನಲ್ಲಿದ್ದಾರೆ ಈ ಕಾಂಗ್ರೆಸ್ ನಾಯಕರು

ಪಂಜಾಬ್ ಮುಖ್ಯಮಂತ್ರಿ ರೇಸ್​ನಲ್ಲಿರುವವರ ಪೈಕಿ ಪಂಜಾಬ್​ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಖಾರ್ ಹೆಸರು ಮೊದಲಿದೆ. ಜಖಾರ್ ಪಂಜಾಬ್ ಮುಖ್ಯಮಂತ್ರಿಯಾದರೆ ಪಂಜಾಬ್​ನಲ್ಲಿ ಹಿಂದು ಮುಖ್ಯಮಂತ್ರಿ ಮತ್ತು ಜಾಟ್ ಸಿಖ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದಂತಾಗುತ್ತದೆ.

Punjab CM: ಅಮರೀಂದರ್ ಸಿಂಗ್ ರಾಜೀನಾಮೆ ಹಿನ್ನೆಲೆ; ಪಂಜಾಬ್ ನೂತನ ಸಿಎಂ ರೇಸ್​ನಲ್ಲಿದ್ದಾರೆ ಈ ಕಾಂಗ್ರೆಸ್ ನಾಯಕರು
ಸುನಿಲ್ ಜಖಾರ್
Follow us
| Updated By: ಸುಷ್ಮಾ ಚಕ್ರೆ

Updated on: Sep 19, 2021 | 8:53 AM

ಪಂಜಾಬ್: ಪಂಜಾಬ್​ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಆ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಂಜಾಬ್​ನ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ಮತ್ತು ಜವಾಬ್ದಾರಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಹಿಸಲಾಗಿದೆ. ಆದರೆ, ಸದ್ಯಕ್ಕೆ ಅಮರೀಂದರ್ ಸಿಂಗ್ ಅವರಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಕಾಂಗ್ರೆಸ್ ನಾಯಕರು ರೇಸ್​ನಲ್ಲಿದ್ದಾರೆ.

ಅಮರೀಂದರ್ ಸಿಂಗ್ ನೀಡಿರುವ ರಾಜೀನಾಮೆಯನ್ನು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸ್ವೀಕರಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಯ ಆಯ್ಕೆಯಾಗುವವರೆಗೂ ಸಿಎಂ ಹಾಗೂ ಸಚಿವರಿಗೆ ಕಚೇರಿಯಲ್ಲಿ ಕೆಲಸದ ಉಸ್ತುವಾರಿ ನೋಡಿಕೊಳ್ಳುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಸರ್ಕಾರಿ ಕೆಲಸಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ಆದೇಶ ನೀಡಲಾಗಿದೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಪಂಜಾಬ್ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್​ಗೆ ನೀಡಲು ನಿರ್ಧರಿಸಲಾಗಿದೆ. ಹೀಗಾಗಿ, ಪಂಜಾಬ್​ ನೂತನ ಸರ್ಕಾರದ ಸಂಪೂರ್ಣ ಜವಾಬ್ದಾರಿ ಸೋನಿಯಾ ಗಾಂಧಿ ಹೆಗಲ ಮೇಲಿದೆ.

ಪಂಜಾಬ್ ಮುಖ್ಯಮಂತ್ರಿ ರೇಸ್​ನಲ್ಲಿರುವವರ ಪೈಕಿ ಪಂಜಾಬ್​ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಖಾರ್ ಹೆಸರು ಮೊದಲಿದೆ. ಜಖಾರ್ ಪಂಜಾಬ್ ಮುಖ್ಯಮಂತ್ರಿಯಾದರೆ ಪಂಜಾಬ್​ನಲ್ಲಿ ಹಿಂದು ಮುಖ್ಯಮಂತ್ರಿ ಮತ್ತು ಜಾಟ್ ಸಿಖ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದಂತಾಗುತ್ತದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರವಿದೆ. ಆದರೆ, ಸುನಿಲ್ ಜಖಾರ್ ಶಾಸಕರಲ್ಲದೆ ಇರುವುದು ಅವರಿಗೆ ಸಿಎಂ ಆಗಲು ಅಡ್ಡಿಯಾಗಬಹುದು.

ಹಾಗೇ, ಪಂಜಾಬ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧು ಕೂಡ ತಾವೇ ಮುಂದಿನ ಮುಖ್ಯಮಂತ್ರಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಇದಕ್ಕೆ ಅಮರೀಂದರ್ ಸಿಂಗ್ ಬಣದವರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಾಧ್ಯತೆ ಇರುವುದರಿಂದ ನವಜೋತ್ ಸಿಂಗ್ ಸಿಧು ಅವರನ್ನು ಸದ್ಯಕ್ಕೆ ಸಿಎಂ ರೇಸ್​ನಿಂದ ಹೊರಗಿಡಲಾಗಿದೆ ಎನ್ನಲಾಗುತ್ತಿದೆ.

ಇದರ ಜೊತೆಗೆ ಪಿಸಿಸಿ ಪ್ರತಾಪ್ ಬಾಜ್ವಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ, ಪಂಜಾಬ್ ಸಚಿವರಾಗಿದ್ದ ಸುಖ್ಜಿಂದರ್ ರಾಂಧವ, ಸುಖ್ಬಿಂದರ್ ಸಿಂಗ್ ಸರ್ಕಾರಿ ಬ್ರಹ್ಮ ಮೊಹಿಂದ್ರ, ವಿಜಯ್ ಇಂದರ್ ಸಿಂಗ್ಲಾ, ಕುಲ್ಜಿತ್ ಸಿಂಗ್ ನಾಗ್ರಾ ಹಾಗೂ ತೃಪ್ತ್ ರಾಜೀಂದರ್ ಬಾಜ್ವಾ ಅವರ ಹೆಸರು ಕೂಡ ಮುಖ್ಯಮಂತ್ರಿ ಪಟ್ಟಿಯಲ್ಲಿದೆ.

ಪಂಜಾಬ್​ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ಕೂಡ ಕರ್ನಾಟಕ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿತ್ತು. ಗುಜರಾತ್​ ಮತ್ತು ಕರ್ನಾಟಕದಲ್ಲಿ ಸುಮಾರು 20 ತಿಂಗಳ ಅಧಿಕಾರಾವಧಿ ಬಾಕಿ ಇದೆ. ಆದರೆ, ಪಂಜಾಬಿನಲ್ಲಿ ಬರೀ ಐದು ತಿಂಗಳು ಇದೆ.

ಇನ್ನು, ಪಂಜಾಬ್​ನಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಅಕಾಲಿ ದಳದ ಸುಖಬೀರ್​ ಸಿಂಗ್​ ಬಾದಲ್​ ತಂಡ ಬಹಳ ಪ್ರಯತ್ನ ಪಡುತ್ತಿದೆ. ಆಮ್​ ಆದ್ಮಿ ಪಕ್ಷ ಈಗಲೇ ತನ್ನ ಪ್ರಚಾರ ಕಾರ್ಯ ಶುರು ಮಾಡಿದೆ. ಈ ಬಾರಿ ಹೇಗಾದರೂ ಮಾಡಿ ಪಂಜಾಬಿನಲ್ಲಿ ಅಧಿಕಾರಕ್ಕೆ ಬರಲೇಬೇಕೆಂಬುದು ಆ ಪಕ್ಷದ ನಾಯಕರ ತಂತ್ರ. ಬಿಜೆಪಿ ಈಗ ಕ್ಯಾಪ್ಟನ್ ಅಮರೀಂದರ್​ ಸಿಂಗ್​ ಅವರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುವುದು ಖಂಡಿತ.

ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ್ದ ಕ್ಯಾ. ಅಮರೀಂದರ್ ಸಿಂಗ್, ನನ್ನ ರಾಜೀನಾಮೆ ಬಗ್ಗೆ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾರಿಗೆ ಮಾಹಿತಿ ನೀಡಿದ್ದೆ. ನನಗೆ ಮಾಹಿತಿ ನೀಡದೆ 2 ಸಲ ಸಿಎಲ್‌ಪಿ ಸಭೆ ನಡೆಸಿದ್ದರು. ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ನನಗೆ ಅವಮಾನವಾಗಿತ್ತು. ನನಗೆ 3 ಸಲ ಅವಮಾನ ಮಾಡಲಾಗಿತ್ತು. ಹೀಗಾಗಿ, ನನ್ನ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಈಗ ಕಾಂಗ್ರೆಸ್​ನಲ್ಲಿ ಇದ್ದೇನೆ, ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನಗೆ ಸಹಕರಿಸಿದ ಬೆಂಬಲಿಗರು, ಕಾರ್ಯಕರ್ತರಿಗೆ ಧನ್ಯವಾದ ಎಂದು ಹೇಳಿದ್ದರು.

ಇದನ್ನೂ ಓದಿ: Punjab Congress Crisis: ಪಂಜಾಬ್ ಹೊಸ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಸೋನಿಯಾ ಗಾಂಧಿ ಹೆಗಲಿಗೆ

Amarinder Singh: ರಾಜೀವ್ ಗಾಂಧಿಯ ಗೆಳೆಯನಾಗಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೇನೆ ಬಿಟ್ಟು ರಾಜಕೀಯಕ್ಕೆ ಬಂದಿದ್ದೇಕೆ?

(Punjab Political Crisis After Amarinder Singh Resign these Congress leaders are in race to become Punjab Chief Minister)

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​