AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushkar Dhami: ಉತ್ತರಾಖಂಡ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಮುಖ್ಯಮಂತ್ರಿ ಸ್ಥಾನ ಉಳಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ

Uttarakhand Bypolls: ದಾಖಲೆಯ ಗೆಲುವಿಗಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ ಕಾಂಗ್ರೆಸ್‌ನ ನಿರ್ಮಲಾ ಗಹ್ಟೋರಿ ಅವರನ್ನು 55,025 ಮತಗಳಿಂದ ಸೋಲಿಸಿದ್ದಾರೆ.

Pushkar Dhami: ಉತ್ತರಾಖಂಡ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಮುಖ್ಯಮಂತ್ರಿ ಸ್ಥಾನ ಉಳಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ
ಪುಷ್ಕರ್ ಸಿಂಗ್ ಧಾಮಿImage Credit source: ANI
TV9 Web
| Edited By: |

Updated on:Jun 03, 2022 | 12:40 PM

Share

ಡೆಹ್ರಾಡೂನ್: ಚಂಪಾವತ್ ವಿಧಾನಸಭಾ ಕ್ಷೇತ್ರಕ್ಕೆ (Champawat Bypolls) ಇಂದು ನಡೆದ ಉಪಚುನಾವಣೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) 55,000ಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದಾರೆ. ಈ ದಾಖಲೆಯ ಗೆಲುವಿಗಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ. ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ ಅವರು ಕಾಂಗ್ರೆಸ್‌ನ ನಿರ್ಮಲಾ ಗಹ್ಟೋರಿ ಅವರನ್ನು 55,025 ಮತಗಳಿಂದ ಸೋಲಿಸಿದ್ದಾರೆ ಎಂದು ಚಂಪಾವತ್‌ನಲ್ಲಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಉತ್ತರಾಖಂಡದ ವಿಧಾನಸಭೆಯ ಸದಸ್ಯರಾಗಲು ಚಂಪಾವತ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿತ್ತು. ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳೊಳಗೆ ಅವರು ಶಾಸಕರಾಗಿ ಆಯ್ಕೆಯಾಗಲೇ ಬೇಕಾಗಿತ್ತು. ಇಲ್ಲದಿದ್ದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಸಾಧ್ಯವಿರಲಿಲ್ಲ.

ಈ ವರ್ಷದ ಫೆಬ್ರವರಿಯಲ್ಲಿ ನಡೆದ ಉತ್ತರಾಖಂಡದ ಖತಿಮಾದಿಂದ ಪುಷ್ಕರ್ ಧಾಮಿ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರು. ಚಂಪಾವತ್ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: Pushkar Dhami: 2ನೇ ಅವಧಿಗೆ ಉತ್ತರಾಖಂಡದ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ; ಪ್ರಧಾನಿ ಮೋದಿ ಭಾಗಿ

ಚಂಪಾವತ್‌ನಿಂದ ದಾಖಲೆಯ ಗೆಲುವಿಗಾಗಿ ಉತ್ತರಾಖಂಡದ ಡೈನಾಮಿಕ್ ಸಿಎಂ ಪುಷ್ಕರ್​ ಧಾಮಿ ಅವರಿಗೆ ಅಭಿನಂದನೆಗಳು. ಅವರು ಉತ್ತರಾಖಂಡದ ಪ್ರಗತಿಗೆ ಇನ್ನಷ್ಟು ಶ್ರಮಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಚಂಪಾವತ್‌ನ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ ಮತ್ತು ನಮ್ಮ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸುತ್ತೇನೆ ಎಂದು ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Fri, 3 June 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ