ಡೆಹ್ರಾಡೂನ್: ಚಂಪಾವತ್ ವಿಧಾನಸಭಾ ಕ್ಷೇತ್ರಕ್ಕೆ (Champawat Bypolls) ಇಂದು ನಡೆದ ಉಪಚುನಾವಣೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) 55,000ಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದಾರೆ. ಈ ದಾಖಲೆಯ ಗೆಲುವಿಗಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ. ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ ಅವರು ಕಾಂಗ್ರೆಸ್‌ನ ನಿರ್ಮಲಾ ಗಹ್ಟೋರಿ ಅವರನ್ನು 55,025 ಮತಗಳಿಂದ ಸೋಲಿಸಿದ್ದಾರೆ ಎಂದು ಚಂಪಾವತ್‌ನಲ್ಲಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರು ಉತ್ತರಾಖಂಡದ ವಿಧಾನಸಭೆಯ ಸದಸ್ಯರಾಗಲು ಚಂಪಾವತ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿತ್ತು. ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳೊಳಗೆ ಅವರು ಶಾಸಕರಾಗಿ ಆಯ್ಕೆಯಾಗಲೇ ಬೇಕಾಗಿತ್ತು. ಇಲ್ಲದಿದ್ದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಸಾಧ್ಯವಿರಲಿಲ್ಲ.
Congratulations to Uttarakhand’s dynamic CM @pushkardhami for the record win from Champawat. I am confident he will work even harder for the progress of Uttarakhand. I thank the people of Champawat for placing their faith in BJP and laud our Karyakartas for their hardwork.
— Narendra Modi (@narendramodi) June 3, 2022
ಈ ವರ್ಷದ ಫೆಬ್ರವರಿಯಲ್ಲಿ ನಡೆದ ಉತ್ತರಾಖಂಡದ ಖತಿಮಾದಿಂದ ಪುಷ್ಕರ್ ಧಾಮಿ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರು. ಚಂಪಾವತ್ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ: Pushkar Dhami: 2ನೇ ಅವಧಿಗೆ ಉತ್ತರಾಖಂಡದ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ; ಪ್ರಧಾನಿ ಮೋದಿ ಭಾಗಿ
ಚಂಪಾವತ್‌ನಿಂದ ದಾಖಲೆಯ ಗೆಲುವಿಗಾಗಿ ಉತ್ತರಾಖಂಡದ ಡೈನಾಮಿಕ್ ಸಿಎಂ ಪುಷ್ಕರ್ ಧಾಮಿ ಅವರಿಗೆ ಅಭಿನಂದನೆಗಳು. ಅವರು ಉತ್ತರಾಖಂಡದ ಪ್ರಗತಿಗೆ ಇನ್ನಷ್ಟು ಶ್ರಮಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಬಿಜೆಪಿಯಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಚಂಪಾವತ್‌ನ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ ಮತ್ತು ನಮ್ಮ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸುತ್ತೇನೆ ಎಂದು ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Fri, 3 June 22