AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಯೋಜನೆಯಲ್ಲಿ ನಡೆದ 2137.44 ಕೋಟಿ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಿ: ಆರ್ ಅಶೋಕ್​

ವಸತಿ ಯೋಜನೆಯಲ್ಲಿ 2137.44 ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಆರ್​ ಅಶೋಕ್​ ಆರೋಪ ಮಾಡಿದ್ದಾರೆ. ಸತ್ಯಾಂಶ ಬಯಲಾಗಲು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾವೇರಿ ಆರತಿಯ ಹೆಸರಿನಲ್ಲಿ ಹಣ ದುರುಪಯೋಗವಾಗುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.

ವಸತಿ ಯೋಜನೆಯಲ್ಲಿ ನಡೆದ 2137.44 ಕೋಟಿ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಿ: ಆರ್ ಅಶೋಕ್​
ವಿಪಕ್ಷ ನಾಯಕ ಆರ್​. ಅಶೋಕ್​
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on:Jun 22, 2025 | 5:27 PM

Share

ಮಂಡ್ಯ, ಜೂನ್​ 22: ವಸತಿ ಯೋಜನೆಯಲ್ಲಿ 2137.44 ಕೋಟಿ ಭ್ರಷ್ಟಾಚಾರ ನಡೆದಿದೆ. ಬಿಜೆಪಿ ಆಪಾದನೆ ಸುಳ್ಳಾದರೆ ಸಿಬಿಐಗೆ ವಹಿಸಿ ಸತ್ಯಾಂಶ ಬಯಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ್ (R Ashok) ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಡವರ ಮನೆಗೆ ಕನ್ನ ಹಾಕಿದ ಕಾಂಗ್ರೆಸ್​​ನವರು ಉತ್ತರ ಕೊಡಬೇಕು. ಸಿಎಂ ಸಿದ್ದರಾಮಯ್ಯ (Siddaramaiah) ಮೂಗನಾಗಬೇಡ, ಬಾಯ್ಬಿಡಪ್ಪ. ಬಡವರ ಹಣವನ್ನು ತಿಂದ ನಿಮಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ಮಾಡಿದರು.

ವೋಟ್​​ಗಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಕಾಂಗ್ರೆಸ್ ರಾಜ್ಯದಲ್ಲಿ ವಸತಿ ನೀಡುತ್ತಿದೆ. ನಾವು ಹೇಳುವುದು ಸುಳ್ಳಾದರೆ ತನಿಖೆಗೆ ಆದೇಶಿಸಲಿ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ‌ ಟಿಪ್ಪು ಸಿದ್ಧಾಂತದ ಸರ್ಕಾರ. ಈ‌ ಸರ್ಕಾರ ತನಿಖೆ ನಡೆಸುವ ನಂಬಿಕೆ ನಮಗಿಲ್ಲ. ಮಂಡ್ಯದಲ್ಲೂ ಅಕ್ರಮ ಬಾಂಗ್ಲಾದೇಶದ ವಲಸಿಗರು ಸೇರಿಕೊಂಡಿದ್ದಾರೆ. ಅವರಿಗೆಲ್ಲಾ ವಸತಿ ಮಾಡಿಕೊಟ್ಟು ವೋಟ್​ಬ್ಯಾಂಕ್ ಮಾಡಿಕೊಳ್ಳುತ್ತಿದ್ದಾರೆ. ಅಕ್ರಮ ವಲಸಿಗರು ಬಾಂಗ್ಲಾದೇಶ ಗಡಿ ಮೂಲಕ ಪಶ್ಚಿಮ ಬಂಗಾಳ ತಲುಪಿ ಅಲ್ಲಿಂದ ಬರುತ್ತಿದ್ದಾರೆ ಎಂದು ಹೇಳಿದರು.

ಮಂಡ್ಯದಲ್ಲಿ ಆಸ್ಪತ್ರೆ ಜಾಗದಲ್ಲಿರುವ ತಮಿಳರ ಮನೆಗಳಿಗೆ ನುಗ್ಗಿದ್ದಾರೆ ಮುಸ್ಲಿಮರು ನುಗ್ಗಿದ್ದಾರೆ. ಅವರೆಲ್ಲಾ ಹೇಗೆ ಸೇರಿಕೊಂಡ್ರು, ಅಧಿಕಾರಿಗಳೇನು ಕತ್ತೆ ಕಾಯ್ತಿದ್ರಾ? ಶಾಸಕರ ಕುಮ್ಮಕ್ಕಿನಿಂದ ಸ್ಲಂಬೋರ್ಡ್ ವಸತಿ ಸಂಕೀರ್ಣಕ್ಕೆ ನುಗ್ಗಿದ್ದಾರೆ. ಮುಸ್ಲಿಮರ ಓಲೈಕೆ ಮಾಡಬೇಡಿ, ಫಲಾನುಭವಿಗಳಿಗೆ ಮನೆ ಕಲ್ಪಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ
Image
ಅಲ್ಪಸಂಖ್ಯಾತರಿಗೆ ಮೀಸಲಾತಿ: ಸರ್ಕಾರದ ವಿರುದ್ಧ ಹಿಂದುಳಿದ ವರ್ಗದವರು ಗರಂ
Image
ಮನೆಗಳ ಹಂಚಿಕೆಗೆ ಲಂಚ: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ರಹಸ್ಯ
Image
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
Image
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್

ಇದನ್ನೂ ನೋಡಿ: ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

ಕೆಆರ್​​ಎಸ್​​ನಲ್ಲಿ ರಾಜ್ಯ ಸರ್ಕಾರದಿಂದ ಕಾವೇರಿ ಆರತಿ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ ಆರತಿ ಹೆಸರಲ್ಲಿ ಇವರು ಕೀರ್ತಿ ಪಡೆಯೋಕೆ ಹೋಗುತ್ತಿದ್ದಾರೆ. ಸರ್ಕಾರ ಅಲ್ಲಿನ ಜನರ ಜೀವನ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಅಲ್ಲಿ ಆರತಿಗೆ ನೂರು ಕೋಟಿ ಖರ್ಚು ಮಾಡ್ತಿರೋದು ಯಾಕೆ? ಇದರಲ್ಲಿ ಕಾಂಗ್ರೆಸ್​​ ಖರ್ಚು ಮಾಡುವುದು 30 ರಿಂದ 40 ಕೋಟಿ ರೂ. ಅಷ್ಟೇ. ಇನ್ನುಳಿದ ಹಣ ತಮ್ಮ ಜೇಬಿಗೆ ಹಾಕಿಕೊಳ್ಳುತ್ತಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜೊತೆಗೆ ಸದನದೊಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Sun, 22 June 25