ಆರ್ ಅಶೋಕ ಪ್ರತಿಪಕ್ಷ ನಾಯಕ: ಒಕ್ಕಲಿಗ ನಾಯಕನಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್

| Updated By: Ganapathi Sharma

Updated on: Nov 17, 2023 | 9:55 PM

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಆರ್ ಅಶೋಕ ಪ್ರತಿಪಕ್ಷ ನಾಯಕ: ಒಕ್ಕಲಿಗ ನಾಯಕನಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್
ಆರ್ ಅಶೋಕ
Follow us on

ಬೆಂಗಳೂರು, ನವೆಂಬರ್ 17: ವಿಧಾನಸಭೆ ಚುನಾವಣೆ ನಡೆದು ಬರೋಬ್ಬರಿ ಆರು ತಿಂಗಳಿಗೂ ಹೆಚ್ಚು ಸಮಯ ಕಳೆದ ನಂತರ ಪ್ರತಿಪಕ್ಷ ಬಿಜೆಪಿ ವಿಧಾನಸಭೆ ವಿಪಕ್ಷ ನಾಯಕನ (Opposition Leader) ಆಯ್ಕೆ ಮಾಡಿದೆ. ಒಕ್ಕಲಿಗ ಸಮುದಾಯದ ನಾಯಕ, ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್​ ಅಶೋಕ (R Ashoka) ಅವರಿಗೆ ಪ್ರತಿಪಕ್ಷ ನಾಯಕನ ಜವಾಬ್ದಾರಿ ವಹಿಸಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಶಾಸಕರನ್ನು ಉದ್ದೇಶಿಸಿ ಭಾಷಣದ ವೇಳೆ ವಿಪಕ್ಷ ನಾಯಕರ ವಿಚಾರವಾಗಿ ಹೈಕಮಾಂಡ್ ಸೂಚನೆಯನ್ನು ಸೂಚ್ಯವಾಗಿ ದುಶ್ಯಂತ್ ಕುಮಾರ್ ಗೌತಮ್ ಮತ್ತು ಬಿ.ಎಸ್‌. ಯಡಿಯೂರಪ್ಪ ಪ್ರಸ್ತಾಪಿಸಿದರು. ಅಶೋಕ್ ಹೆಸರು ಘೋಷಣೆಗೆ ಮಾಜಿ ಸಿಎ ಬಸವರಾಜ ಬೊಮ್ಮಾಯಿ ಸೂಚಿಸಿದರೆ, ಮಾಜಿ ಸಚಿವ ಸುನೀಲ್ ಕುಮಾರ್ ಅನುಮೋದನೆ ಮಾಡಿದರು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಐವರು ಶಾಸಕರು ಗೈರಾಗಿದ್ದಾರೆ. ಒಟ್ಟು 66 ಶಾಸಕರ ಪೈಕಿ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಗೈರಾಗಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಸ್ಫೋಟ

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರು ಪ್ರಮುಖರ ಜೊತೆ ಸಭೆ ನಡೆಸಿದ್ದರು. ವರಿಷ್ಠರ ನಿರ್ಧಾರ ಬಗ್ಗೆ ಆಕಾಂಕ್ಷಿಗಳ ಗಮನಕ್ಕೆ ತಂದಿದ್ದರು. ಇದೇ ವೇಳೆ ಆರ್​ ಅಶೋಕ್ ನೇಮಕ ಕುರಿತು ತಿಳಿಸಿದಾಗ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹೈಕಮಾಂಡ್ ತೀರ್ಮಾನ ಒಪ್ಪದೆ ಸಭೆಯಿಂದ ತೆರಳಿದ್ದಾರೆ. ಬಿಎಲ್​ಪಿ ಸಭೆ ಸಭೆಗೂ ಮುನ್ನವೇ ಹೊರನಡೆದಿದ್ದಾರೆ.

ಯಾರಿಗೂ ಬೇಸರವಾಗಿಲ್ಲ, ಸಭೆ ಬಹಿಷ್ಕರಿಸಿಲ್ಲವೆಂದ ಬೆಲ್ಲದ

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಅಸಮಾಧಾನ ಸ್ಫೋಟಗೊಂಡ ಬಗ್ಗೆ ಪ್ರತಿಕ್ರಿಯಸಿದ ಅರವಿದ ಬೆಲ್ಲದ, ಯಾರಿಗೂ ಬೇಸರ ಆಗಿಲ್ಲ, ಬಿಎಲ್​ಪಿ ಸಭೆ ಬಹಿಷ್ಕರಿಸಿಲ್ಲವೆಂದಿದ್ದಾರೆ,​​ ವೀಕ್ಷಕರು ಒನ್​ ಟು ಒನ್​ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದ ಶಾಸಕರೇ ಹೆಚ್ಚು ಇದ್ದಾರೆ ಎಂದು ಅವರು ಹೇಳಿದ್ದಾರೆ.

ಉಳಿದಂತೆ, ಶಾಸಕಾಂಗ ಪಕ್ಷದ ಸಭೆಗೆ ಬೆಂಗಳೂರಿನ ಯಶವಂತಪುರ ಕ್ಷೇತ್ರದ ಶಾಸಕ ಎಸ್​​ಟಿ ಸೋಮಶೇಖರ್ ಗೈರಾಗಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

ಸಭೆಗೆ ಹಾಜರಾದ ಶಾಸಕರು ಯಾರೆಲ್ಲ?

ಗೋಪಾಲಯ್ಯ, ಸುರೇಶ್ ಕುಮಾರ್, ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ, ಸಿಮೆಂಟ್ ಮಂಜು, ಹರೀಶ್ ಪೂಂಜ, ಎಸ್. ಮುನಿರಾಜು, ಸುರೇಶ್ ಗೌಡ, ಬಸವರಾಜ್ ಬೊಮ್ಮಾಯಿ, ಶೈಲೇಂದ್ರ ಬೆಳ್ದಾಳೆ, ಜ್ಯೋತಿ ಗಣೇಶ್, ಬಸವರಾಜ್ ಮತ್ತಿಮೂಡ್, ಅರವಿಂದ್ ಬೆಲ್ಲದ್, ದೊಡ್ಡನಗೌಡ ಪಾಟೀಲ್, ಅಭಯ್ ಪಾಟೀಲ್, ಮಂಜುಳ ಲಿಂಬಾವಳಿ, ಸಿ.ಸಿ. ಪಾಟೀಲ್, ಚನ್ನಬಸಪ್ಪಮ ಎಂ. ಕೃಷ್ಣಪ್ಪ, ಸುನಿಲ್ ಕುಮಾರ್, ಚಂದ್ರಪ್ಪ, ಮುನಿರತ್ನ, ಸಿದ್ದು ಸವದಿ, ಭಾಗೀರಥಿ ಮುರುಳ್ಯ

ಸಭೆಗೆ ಹಾಜರಾದ ವಿಧಾನ ಪರಿಷತ್ ಸದಸ್ಯರು ಯಾರೆಲ್ಲ?

ಎಂ.ಕೆ. ಪ್ರಾಣೇಶ್, ಸುಜಾ ಕುಶಾಲಪ್ಪ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಕೇಶವ ಪ್ರಸಾದ್, ಗಣಪತಿ ಉಳ್ವೇಕರ್, ತುಳಸಿ ಮುನಿರಾಜು ಗೌಡ, ಶಶೀಲ್ ನಮೋಶಿ, ಅ. ದೇವೇಗೌಡ, ವೈ.ಎ. ನಾರಾಯಣಸ್ವಾಮಿ, ಪ್ರತಾಪ್ ಸಿಂಹ ನಾಯಕ್, ರುದ್ರೇಗೌಡ, ರಘುನಾಥ್ ರಾವ್ ಮಲ್ಕಾಪುರೆ

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Fri, 17 November 23