AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ ಅಶೋಕಗೆ ಒಲಿದ ವಿಪಕ್ಷ ನಾಯಕ ಪಟ್ಟ; ನಡೆದು ಬಂದ ಹಾದಿ

ಜಾಲಹಳ್ಳಿ ರಾಮಯ್ಯ ಅಶೋಕ ಇವರ ಸಪೂರ್ಣ ಹೆಸರಾಗಿದ್ದು, ರಾಮಯ್ಯ-ಆಂಜಿನಮ್ಮ ದಂಪತಿ ಮಗನಾಗಿ 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ಜನಿಸುತ್ತಾರೆ. ಜಾಲಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ಆರ್​ ಅಶೋಕ್​, ಬಳಿಕ ವಿವಿಪುರಂ ನ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮಾಡುತ್ತಾರೆ. 10ನೇ ವಯಸ್ಸಿನಲ್ಲೇ ಆರ್​ಎಸ್​ಎಸ್​ ಸೇರ್ಪಡೆಯಾಗಿದ್ದ ಆರ್​ ಅಶೋಕ​ ಅವರು ನಡೆದು ಬಂದ ಹಾದಿ ಇಲ್ಲಿದೆ.

ಆರ್​ ಅಶೋಕಗೆ ಒಲಿದ ವಿಪಕ್ಷ ನಾಯಕ ಪಟ್ಟ; ನಡೆದು ಬಂದ ಹಾದಿ
ಆರ್​ ಅಶೋಕ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Nov 17, 2023 | 9:05 PM

ಬೆಂಗಳೂರು, ನ.17: ಕೊನೆಗೂ ಬಿಜೆಪಿ ವಿಧಾನಸಭೆ ವಿಪಕ್ಷ ನಾಯಕ(Opposition Leader)ನಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್.ಅಶೋಕ(R Ashoka) ಅವರನ್ನು ಆಯ್ಕೆ ಮಾಡಿದೆ. ಇಂದು(ನ.17) ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ವಿಪಕ್ಷ ನಾಯಕನ ಆಯ್ಕೆಗೋಸ್ಕರ ಬಿಜೆಪಿ ಹೈಕಮಾಂಡ್ ವೀಕ್ಷಕರನ್ನು ನೇಮಿಸಿದ್ದು,  ಬಹುದಿನಗಳ ಬಳಿಕ ವಿಪಕ್ಷ ನಾಯಕನ ಸ್ಥಾನವನ್ನು ಭರ್ತಿ ಮಾಡಿದೆ.

ಆರ್​.ಅಶೋಕ್​ ನಡೆದು ಬಂದ ಹಾದಿ

ಜಾಲಹಳ್ಳಿ ರಾಮಯ್ಯ ಅಶೋಕ ಇವರ ಸಪೂರ್ಣ ಹೆಸರಾಗಿದ್ದು, ರಾಮಯ್ಯ-ಆಂಜಿನಮ್ಮ ದಂಪತಿ ಮಗನಾಗಿ 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ಜನಿಸುತ್ತಾರೆ. ಜಾಲಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ಆರ್​ ಅಶೋಕ್​, ಬಳಿಕ ವಿವಿಪುರಂ ನ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಮಾಡುತ್ತಾರೆ.

ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ 1 ತಿಂಗಳ ಕಾಲ ಜೈಲುವಾಸ

10ನೇ ವಯಸ್ಸಿನಲ್ಲೇ ಆರ್​ಎಸ್​ಎಸ್​ ಸೇರ್ಪಡೆಯಾಗಿದ್ದ ಆರ್​ ಅಶೋಕ​ ಅವರು,  1975-77 ರಲ್ಲಿ ಅಂದಿನ ಪ್ರಧಾನ ಮಂತ್ರಿಯಾಗಿದ್ದಇಂದಿರಾ ಗಾಂಧಿ ಅವರು ವಿಧಿಸಿದ್ದ ತುರ್ತು ಪರಿಸ್ಥಿತಿಯಲ್ಲಿ ಎಲ್ ಕೆ ಅಡ್ವಾಣಿ ಅವರ ಜೊತೆ 1 ತಿಂಗಳ ಕಾಲ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಸೆರೆ ವಾಸ ಅನುಭವಿಸುತ್ತಾರೆ. ಆಗ ಜೈಲು ಸೇರಿದ್ದ ಆರ್. ಅಶೋಕ್, 1995ರಲ್ಲಿ ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷರಾಗಿ ಅಂದಿನ ಸರ್ಕಾರದ ವಿರುದ್ದ ಹೋರಾಟ ಮಾಡುತ್ತಾರೆ.

ಇದನ್ನೂ ಓದಿ:ಆರ್ ಅಶೋಕ ಪ್ರತಿಪಕ್ಷ ನಾಯಕ: ಒಕ್ಕಲಿಗ ನಾಯಕನಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್

1997ರ ಉಪ ಚುನಾವಣೆಯಲ್ಲಿ ಮೊದಲ ಗೆಲುವು

1997 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಗೆದ್ದು ಶಾಸಕರಾಗುತ್ತಾರೆ.ಬಳಿಕ 1999 ಮತ್ತು 2004ರಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಶಾಸಕರಾಗಿ ಆಯ್ಕೆಯಾಗುತ್ತಾರೆ. ಕ್ಷೇತ್ರ ಪುನರ್ ವಿಂಗಡನೆಯ ನಂತರ ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಇವರು 2008, 2018, 2023 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸುವ ಮೂಲಕ 7ನೇ ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2006-2007ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ

2006-2007 ರಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಾರೆ. 2008-2010ರಲ್ಲಿ ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ  ಆರ್​ ಅಶೋಕ್​, ಇದರ ಜೊತೆಗೆ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ವ್ಯವಹಾರ ಖಾತೆಯ ನಿರ್ವಹಣೆಯನ್ನು ಮಾಡುತ್ತಾರೆ. 2010-2012 ರಲ್ಲಿ ಸಾರಿಗೆ ಸಚಿವ ಮತ್ತು ಗೃಹ ಸಚಿವರಾಗಿ ಕರ್ತವ್ಯ ನಿರ್ವಹಿಸಿದ ನಂತರ, 2012-2013ರಲ್ಲಿ ಜಗದೀಶ್ ಶೆಟ್ಟರ್ ಸರ್ಕಾರದಲ್ಲಿ ಡಿಸಿಎಂ, ಸಾರಿಗೆ, ಗೃಹ ಸಚಿವರಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

2010 ಮತ್ತು 2015 ನಲ್ಲಿ ನಡೆದ BBMP ಚುನಾವಣೆಯಲ್ಲಿ ಪ್ರಮುಖ ಪಾತ್ರ

ಇನ್ನು ಆರ್​.ಅಶೋಕ್​ 2010 ಮತ್ತು 2015 ರಲ್ಲಿ ನಡೆದ BBMP ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿ, ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಶ್ರಮವಹಿಸುತ್ತಾರೆ. 2019ರಲ್ಲಿ ಬಿಎಸ್ ಯಡಿಯೂರಪ್ಪ ಸರ್ಕಾರ ಮತ್ತು 2021ರಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಕಂದಾಯ ಸಚಿವ ಹುದ್ದೆ ನಿಭಾಯಿಸಿದ್ದ ಆರ್. ಅಶೋಕ್, ಬಿಎಸ್ವೈ, ಬೊಮ್ಮಾಯಿ ಸರ್ಕಾರದಲ್ಲಿ ವಿಪತ್ತು ನಿರ್ವಹಣೆ ಉಪಧ್ಯಾಕ್ಷರಾಗಿಯು ಕೆಲಸ ಮಾಡಿದ್ದಾರೆ.

2023 ರಲ್ಲಿ 50 ಸಾವಿರ ಅಧಿಕ ಮತಗಳ ಅಂತರದಿಂದ ಗೆಲುವು

2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 55,175 ಬಾರಿ ಮತಗಳ ಅಂತರದಿಂದ ವಿಜಯದ ನಗೆ ಬೀರಿದ್ದರು. ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್, ಸತತ 7ನೇ ಬಾರಿ ಒಂದೇ ಪಕ್ಷದಲ್ಲಿ ಗೆದ್ದು ಬೀರಿರುವ ಒಕ್ಕಲಿಗ ಸಮುದಾಯದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಮಾರು 45 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ಮಾಡಿದ ಹೆಗ್ಗಳಿಕೆಯೂ ಆರ್​ ಅಶೋಕ್​ ಅವರಿಗೆ ಸಲ್ಲುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 pm, Fri, 17 November 23

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ