AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಮತ್ತೆ ಕ್ಷೇತ್ರ ಗೊಂದಲ; ಕೋಲಾರದಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ?

ರಾಹುಲ್ ಗಾಂಧಿ ಸಲಹೆ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಹೈಕಮಾಂಡ್​ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯಗೆ ಮತ್ತೆ ಕ್ಷೇತ್ರ ಗೊಂದಲ; ಕೋಲಾರದಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ?
ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Mar 18, 2023 | 12:43 PM

Share

ದೆಹಲಿ: ಕರ್ನಾಟಕ ರಾಜ್ಯ ಚುನಾವಣಾ(Karnataka Assembly Elections 2023) ಕಣ ರಂಗೇರುತ್ತಿದೆ. ಎಲೆಕ್ಷನ್ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ರಾಜಕೀಯ ಪಕ್ಷಗಳು ಮತದಾರರ ಮನ ಗೆಲ್ಲಲು ಭರ್ಜರಿ ತಯಾರಿ ಮಾಡುತ್ತಿವೆ. ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯನವರ(Siddaramaiah) ಕ್ಷೇತ್ರ ಗೊಂದಲ ಮುಂದುವರೆದಿದೆ. ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ(Rahul Gandhi) ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ(ಮಾರ್ಚ್ 17) ನಡೆದ ಸಿಇಸಿ ಸಭೆಯಲ್ಲಿ ರಾಹುಲ್​ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಹಾಗೂ ಕೋಲಾರದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ರಾಹುಲ್ ಗಾಂಧಿ ಸಲಹೆ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಹೈಕಮಾಂಡ್​ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ನಂಜನಗೂಡು ಕ್ಷೇತ್ರದಲ್ಲಿ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಾನು ಆರ್​​.ಧ್ರುವನಾರಾಯಣ ಪುತ್ರ ದರ್ಶನ್​​ ಪರ ಇದ್ದೇನೆ. ನಂಜನಗೂಡು ಕ್ಷೇತ್ರದಲ್ಲಿ ಸ್ಪರ್ಧಿಸಲ್ಲವೆಂದು ಮಹದೇವಪ್ಪ ಹೇಳಿದ್ದಾರೆ. ಮಹದೇವಪ್ಪ ಸ್ಪರ್ಧಿಸಲ್ಲ ಎಂದ ಮೇಲೆ ದರ್ಶನ್​ಗೆ ಟಿಕೆಟ್​ ಕೊಡ್ತೀವಿ ಎಂದರು.

ಇದನ್ನೂ ಓದಿ: Bengaluru: ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು

ಯುಗಾದಿ ಹಬ್ಬದಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಇನ್ನು ಇದೇ ವೇಳೆ ಮಾತನಾಡಿದ ಅವರು, ಮಾ.22ರ ಬೆಳಗ್ಗೆ ಅಂದ್ರೆ ಯುಗಾದಿ ಹಬ್ಬದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ಸಿದ್ದರಾಮಯ್ಯ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದ ರಾಹುಲ್

ನಿನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯರ ಜೊತೆ ಪ್ರಿಯಾಂಕಾ ಗಾಂಧಿ ಚೇಂಬರ್ ನಲ್ಲಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೋಲಾರ ವಿಷಯ ಹಾಗೂ ಇತರ ಟಿಕೆಟ್ ಬಗ್ಗೆ ಮಾತುಕತೆ ನಡೆದಿದೆ. ಈ ಧರ್ಮಾಧಾರೀತಿ ಬಿಜೆಪಿ ತಂತ್ರಗಳಿಗೆ ಪ್ರತಿಕ್ರಿಯಿಸಬೇಡಿ ಎಂದು ಸಲಹೆ ನೀಡಿದ್ದಾರೆ. ‘ಕೋಲಾರ ಕ್ಷೇತ್ರದ ವರದಿಗಳು ನಿಮಗೆ ಸೂಕ್ತ ಎನಿಸುತ್ತಿಲ್ಲ’ ಇನ್ನೊಮ್ಮೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ.

ಸಿದ್ದರಾಮಯ್ಯ ನಿವಾಸದಲ್ಲಿಂದು ಕೋಲಾರ ‘ಕೈ’ ನಾಯಕರ ಸಭೆ

ರಾಹುಲ್ ಗಾಂಧಿ ಸಲಹೆ ಬೆನ್ನಲ್ಲೆ ಸಿದ್ದರಾಮಯ್ಯ ನಿವಾಸದಲ್ಲಿಂದು ಕೋಲಾರ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ನಾಳೆ ಸಿದ್ದರಾಮಯ್ಯ ಕೋಲಾರಕ್ಕೆ ತೆರಳಲಿದ್ದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಚುನಾವಣಾ ತಯಾರಿ ಕುರಿತು ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಕೋಲಾರ ಕಾರ್ಯಕ್ರಮದ ಮಾಹಿತಿ ಪಡೆಯಲಿದ್ದಾರೆ. ಹಾಗೂ ಕೆಲ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ. ಬೆಳಗಾವಿ ರಾಹುಲ್ ಕಾರ್ಯಕ್ರಮದ ಬಳಿಕ ಮತ್ತೊಮ್ಮೆ ಸಿದ್ದರಾಮಯ್ಯ ಕೋಲಾರಕ್ಕೆ ತೆರಳಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:23 am, Sat, 18 March 23

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ