AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಬಂದ ಎರಡೇ ತಿಂಗಳಲ್ಲಿ ಭ್ರಷ್ಟಾಚಾರ ಆರೋಪ; ಕಾಂಗ್ರೆಸ್ ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

ಬಿಜೆಪಿ ವಿರುದ್ಧ ನಾವು ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬಂದರೆ ಹೇಗೆ? ನಾವು ಭ್ರಷ್ಟಾಚಾರದ ಆರೋಪವನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಸರ್ಕಾರ ಬಂದ ಎರಡೇ ತಿಂಗಳಲ್ಲಿ ಭ್ರಷ್ಟಾಚಾರ ಆರೋಪ; ಕಾಂಗ್ರೆಸ್ ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ
ರಾಹುಲ್ ಗಾಂಧಿImage Credit source: PTI
Pramod Shastri G
| Updated By: Ganapathi Sharma|

Updated on: Aug 02, 2023 | 10:15 PM

Share

ನವದೆಹಲಿ, ಆಗಸ್ಟ್ 2: ‘ಕರ್ನಾಟಕದಲ್ಲಿ (Karnataka) ಬಿಜೆಪಿ ವಿರುದ್ಧ 40% ಸರ್ಕಾರ ಎಂದು ಭ್ರಷ್ಟಾಚಾರದ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಆದರೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡೇ ತಿಂಗಳಲ್ಲಿ ಭ್ರಷ್ಟಾಚಾರ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ’ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ (Rahul Gandhi) ಖಂಡತುಂಡವಾಗಿ ಹೇಳಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (AICC) ಕರ್ನಾಟಕ ಕಾಂಗ್ರೆಸ್ ನಾಯಕರ ಜತೆ ದೆಹಲಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜ್ಯ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಬಿಜೆಪಿ ವಿರುದ್ಧ ನಾವು ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬಂದರೆ ಹೇಗೆ? ನಾವು ಭ್ರಷ್ಟಾಚಾರದ ಆರೋಪವನ್ನು ಸಹಿಸಲು ಸಾಧ್ಯವೇ ಇಲ್ಲ. ಭ್ರಷ್ಟಾಚಾರ ಆರೋಪವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ.

ಭ್ರಷ್ಟಾಚಾರದ ವಿಷಯದಲ್ಲಿ ಶೂನ್ಯ ಸಹಿಷ್ಣುತೆ ನಮ್ಮದು. ಅದೆಂತಹ ದೊಡ್ಡ ನಾಯಕರೇ ಇರಲಿ, ಭ್ರಷ್ಟಾಚಾರ ವಿಚಾರದಲ್ಲಿ ಸಹಿಸಿಕೊಳ್ಳಲ್ಲ. ನಾಯಕರು, ಕಾರ್ಯಕರ್ತರು ಪಕ್ಷದಿಂದ ಅಂತರ ಕಾಯ್ದುಕೊಳ್ಳಬಾರದು. ನನಗೆ ಪಕ್ಷದ ಕಾರ್ಯಕರ್ತರೇ ಮುಖ್ಯ. ನಾನು ಮತ್ತೊಬ್ಬರನ್ನು ಸಚಿವರನ್ನಾಗಿಸಬಹುದು. ಆದರೆ ಮತ್ತೊಬ್ಬ ಕಾರ್ಯಕರ್ತರನ್ನು ಕರೆತರಲಾರೆ. ಹೀಗಾಗಿ ಕಾರ್ಯಕರ್ತರನ್ನು ಸಹಿಸದ ಸಚಿವ ನಮಗೂ ಬೇಡ ಎಂದು ರಾಹುಲ್ ಗಾಂಧಿ ಹೇಳಿದರು.

ಭ್ರಷ್ಟಾಚಾರದ ಬಗ್ಗೆ ಎಚ್ಚರವಹಿಸಿ; ಮಲ್ಲಿಕಾರ್ಜುನ ಖರ್ಗೆ ಸೂಚನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದರು. ಭ್ರಷ್ಟಾಚಾರದ ವಿಚಾರ ಊಹಾಪೋಹವೋ, ಆರೋಪವೋ, ಕೆಲವೊಂದಿಷ್ಟು ಮಾಹಿತಿ ನಮ್ಮ ತನಕ ಬಂದಿದೆ. ಕೂಡಲೇ ಆ ಬಗ್ಗೆ ಎಚ್ಚರವಹಿಸಿ. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಖರ್ಗೆ ಎಚ್ಚರಿಕೆ ನೀಡಿದರು. ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬಂದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಗೆಲ್ಲಲು ಎಐಸಿಸಿ ಸೂತ್ರವೇನು? ಕಾಂಗ್ರೆಸ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ ಇಲ್ಲಿದೆ ಮಾಹಿತಿ

ಜಿಲ್ಲಾ ಉಸ್ತುವಾರಿ ಸಚಿವರಿಗೆ ಲೋಕಸಭೆ ಚುನಾವಣೆಯೇ ಟಾರ್ಗೆಟ್

ಜಿಲ್ಲಾ ಉಸ್ತುವಾರಿ ಸಚಿವರಿಗೆ ಲೋಕಸಭೆ ಚುನಾವಣೆಯೇ ಟಾರ್ಗೆಟ್ ಆಗಿದೆ. ಅವರವರ ಜಿಲ್ಲೆಯಲ್ಲಿ ಗೆಲುವೇ ಮಾನದಂಡವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದರು. ಕೆಲ ಸಚಿವರು ಕೆಪಿಸಿಸಿ ಕಚೇರಿಗೂ ಹೋಗಿಲ್ಲ. ವಾರಕ್ಕೊಮ್ಮೆ ಸಚಿವರು ಕಾಂಗ್ರೆಸ್ ಕಚೇರಿಗೆ ತೆರಳಲು ಸೂಚಿಸಿದ್ದೇವೆ. ಆದರೆ ಕೆಲ ಸಚಿವರು ಕೆಪಿಸಿಸಿ ಕಚೇರಿಯನ್ನೇ ಮರೆತು ಹೋಗಿದ್ದಾರೆ. ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಕಾಂಗ್ರೆಸ್ ಕಚೇರಿ ಆರಂಭಿಸಿ. ‘ಕೈ’ ಕಚೇರಿ ತೆರೆಯಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮಕೈಗೊಳ್ಳಿ. ಲೋಕಸಭೆ ಚುನಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಇನ್ನೋರ್ವ ಕಾಂಗ್ರೆಸ್ ನಾಯಕರಿಗೆ ಜವಾಬ್ದಾರಿ ನೀಡಲಾಗುತ್ತೆ. ಈಗಿನಿಂದಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಆರಂಭಿಸಿ ಎಂದು ವೇಣುಗೋಪಾಲ್ ರಾಜ್ಯ ನಾಯಕರಿಗೆ ಸೂಚನೆ ನೀಡಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ