Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ; ಕಮಲನಾಥ್ ಅಚ್ಚರಿಯ ಹೇಳಿಕೆ

2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ. ಅವರು ಪ್ರಧಾನಿ ಅಭ್ಯರ್ಥಿಯೂ ಆಗಿರುತ್ತಾರೆ ಎಂದು ಕಮಲನಾಥ್ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ; ಕಮಲನಾಥ್ ಅಚ್ಚರಿಯ ಹೇಳಿಕೆ
ರಾಹುಲ್ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 31, 2022 | 8:26 AM

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ (Loksabha Elections 2024) ರಾಹುಲ್ ಗಾಂಧಿ (Rahul Gandhi) ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ (Kamalnath) ಭವಿಷ್ಯ ನುಡಿದಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ಮುನ್ನಡೆಸಿದ್ದಕ್ಕಾಗಿ ಕಮಲನಾಥ್ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಅವರು ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ. ಅವರು ಪ್ರಧಾನಿ ಅಭ್ಯರ್ಥಿಯೂ ಆಗಿರುತ್ತಾರೆ ಎಂದು ಕಮಲನಾಥ್ ಹೇಳಿದ್ದಾರೆ. ಜಗತ್ತಿನ ಇತಿಹಾಸದಲ್ಲಿ ಯಾರೂ ಇಷ್ಟು ಸುದೀರ್ಘ ‘ಪಾದಯಾತ್ರೆ’ಯನ್ನು ಕೈಗೊಂಡಿಲ್ಲ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆ ಯಾವ ಕುಟುಂಬವೂ ದೇಶಕ್ಕಾಗಿ ಇಷ್ಟೊಂದು ತ್ಯಾಗ, ಬಲಿದಾನ ಮಾಡಿಲ್ಲ ಎಂದು ಕಾಂಗ್ರೆಸ್ ನಾಯಕ ಕಮಲನಾಥ್ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ನನ್ನ ಹೆಂಡತಿಯಾಗುವವಳು ಹೇಗಿರಬೇಕೆಂದರೆ…; ಜೀವನ ಸಂಗಾತಿ ಬಗ್ಗೆ ಮಾತಾಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುವುದಿಲ್ಲ. ಯಾರನ್ನು ಬೇಕಾದರೂ ಅಧಿಕಾರದಲ್ಲಿ ಕೂರಿಸುವ ಸಾಮರ್ಥ್ಯವಿರುವ ದೇಶದ ಜನರಿಗಾಗಿ ಅವರು ರಾಜಕೀಯ ಮಾಡುತ್ತಾರೆ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ ಕಾಂಗ್ರೆಸ್​ನ ಏಕೈಕ ನಾಯಕ ಕಮಲನಾಥ್.

ಮಧ್ಯಪ್ರದೇಶದ 76 ವರ್ಷದ ಕಾಂಗ್ರೆಸ್ ನಾಯಕ ಕಮಲನಾಥ್, ಸಂಘಟನೆಗೆ ದ್ರೋಹ ಮಾಡಿದ ನಂತರ ಪಕ್ಷದಲ್ಲಿ ದೇಶದ್ರೋಹಿಗಳಿಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳುವ ಯಾವುದೇ ಅವಕಾಶವಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಕಮಲನಾಥ್, ನಾನು ಯಾವುದೇ ವ್ಯಕ್ತಿಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಪಕ್ಷಕ್ಕೆ ದ್ರೋಹ ಬಗೆದ ಮತ್ತು ಕಾರ್ಯಕರ್ತರ ನಂಬಿಕೆಯನ್ನು ಮುರಿದ ‘ದ್ರೋಹಿಗಳಿಗೆ’ ನಮ್ಮ ಪಕ್ಷದಲ್ಲಿ ಸ್ಥಾನವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ಸಿದ್ಧತೆ: ಸಮಾವೇಶದಲ್ಲಿ 1 ಲಕ್ಷ ಮಂದಿ ಭಾಗಿ ಸಾಧ್ಯತೆ, ಕಾಂಗ್ರೆಸ್​ ಗುರಿಯಾಗಿಸಿ ರಣತಂತ್ರ ಹೆಣೆದ ಬಿಜೆಪಿ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಮಧ್ಯಪ್ರದೇಶದಲ್ಲಿ ಸಂಘಟನಾ ಬದಲಾವಣೆಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಂದಿನ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲು ಕಾಂಗ್ರೆಸ್ ಕಣ್ಣಿಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 am, Sat, 31 December 22

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!