Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಕಾಂಗ್ರೆಸ್‌ ಶಾಸಕರು ರಾಜೀನಾಮೆ

ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ.

Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಕಾಂಗ್ರೆಸ್‌ ಶಾಸಕರು ರಾಜೀನಾಮೆ
ಅಶೋಕ್ ಗೆಹ್ಲೋಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 26, 2022 | 10:16 AM

ಜೈಪುರ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ರಾಜಕೀಯ ಬಿಕ್ಕಟ್ಟು (Rajasthan Political Crisis) ಎದುರಾಗಿದ್ದು, ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಬಣದ 90 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿನ್ ಪೈಲಟ್ (Sachin Pilot) ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿರುವ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ಅಶೋಕ್ ಗೆಹ್ಲೋಟ್ ಬಣದ ಶಾಸಕರು ನಿರಾಕರಿಸಿದ್ದಾರೆ. ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ, ಅಜಯ್ ಮಾಕೇನ್ ದೆಹಲಿಗೆ ವಾಪಸಾಗಿದ್ದಾರೆ. ಈ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಣದ ಸುಮಾರು 90 ಶಾಸಕರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಅವರಿಗೆ ಬಂಡಾಯ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಕಾಂಗ್ರೆಸ್​ಗೆ ದೊಡ್ಡ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ತಡರಾತ್ರಿ ತಮ್ಮ ಪಕ್ಷದ ಶಾಸಕರ ಸಭೆ ಕರೆದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್; ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಪೂರ್ವ ಸಿದ್ಧತೆ?

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪಾಳಯದ 90ಕ್ಕೂ ಹೆಚ್ಚು ಶಾಸಕರು ತಮ್ಮ ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಅವರಿಗೆ ಭಾನುವಾರ ರಾತ್ರಿ ಅವರ ನಿವಾಸದಲ್ಲಿ ಸಲ್ಲಿಸಿದ್ದಾರೆ. ಇದರಿಂದ ರಾಜಸ್ಥಾನ ಕಾಂಗ್ರೆಸ್ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿವೆ. ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೆ ಸಚಿನ್ ಪೈಲಟ್ ರಾಜಸ್ಥಾನದ ಮುಂದಿನ ಸಿಎಂ ಆಗಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಗೆಹ್ಲೋಟ್ ಬಣದ ಶಾಸಕರು ರಾಜೀನಾಮೆ ನೀಡಿದ್ದಾರೆ.

ಶಾಸಕಾಂಗ ಪಕ್ಷದ ಸಭೆಗೆ ಮುಂಚಿತವಾಗಿ ಅಶೋಕ್ ಗೆಹ್ಲೋಟ್‌ಗೆ ನಿಷ್ಠರಾಗಿರುವ ಕಾಂಗ್ರೆಸ್ ಶಾಸಕರು ರಾಜ್ಯ ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಜಸ್ಥಾನದಲ್ಲಿ ಹೈಡ್ರಾಮಾ ಶುರುವಾಗಿದೆ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರು ಸಿಎಲ್‌ಪಿ ಸಭೆಗಾಗಿ ಶಾಸಕರಿಗಾಗಿ ಕಾಯುತ್ತಿದ್ದರು. ಕಾಂಗ್ರೆಸ್ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಕೂಡ ಸಿಎಂ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾದು ಕುಳಿತಿದ್ದರು. ಆದರೆ ಸಭೆ ನಡೆಯಲಿಲ್ಲ. ರಾಜೀನಾಮೆ ನೀಡಿದ ಬಳಿಕ ಶಾಸಕರು ಮಧ್ಯರಾತ್ರಿ ಮನೆಗೆ ಮರಳಿದ್ದರು.

ಶಾಸಕರ ಅಸಮಾಧಾನಕ್ಕೆ ಕಾರಣವೇನು?: ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೆ ಬಂಡಾಯವೆದ್ದ ಸಚಿನ್ ಪೈಲಟ್ ಅವರು ರಾಜಸ್ಥಾನದ ಮುಖ್ಯಮಂತ್ರಿಯಾಗಬಹುದು ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಹಿಂದೆ ಅಶೋಕ್ ಗೆಹ್ಲೋಟ್ ಕೈವಾಡವಿದೆಯೇ? ಎಂದು ಚರ್ಚೆಗಳೂ ನಡೆಯುತ್ತಿವೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ನಂತರವೇ ರಾಜಸ್ಥಾನದ ಮುಖ್ಯಮಂತ್ರಿಯ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ. ನಿಷ್ಠಾವಂತರು, ಶಾಸಕರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ: Congress President Poll: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

2020ರ ಕಾಂಗ್ರೆಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಕೆಲವು ಅಶೋಕ್ ಗೆಹ್ಲೋಟ್ ನಿಷ್ಠಾವಂತರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಚಿನ್ ಪೈಲಟ್ ಅವರ ವಿರುದ್ಧ ಇದು ಬಂಡಾಯದ ಕರೆಯಾಗಿದೆ. ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಎರಡೂ ಪಾತ್ರಗಳನ್ನು ನಿಭಾಯಿಸಬಲ್ಲರು. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಉಳಿಯದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗೆಲ್ಲುವಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವ ಗೋವಿಂದ್ ರಾಮ್ ಮೇಘವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Mon, 26 September 22