Rajasthan Crisis: ನಾನು ದೆಹಲಿಗೆ ಹೋಗಿ ಯಾರನ್ನೂ ಭೇಟಿಯಾಗುವುದಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ; ಸಚಿನ್ ಪೈಲಟ್ ಸ್ಪಷ್ಟನೆ
ಮೂಲಗಳ ಪ್ರಕಾರ ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಕಾಂಗ್ರೆಸ್ ನಾಯಕತ್ವದ ಮುಂದಿನ ಸಿಎಂ ಆಯ್ಕೆಯಾಗಿದ್ದಾರೆ. ಅವರನ್ನು ಜೈಪುರದಲ್ಲೇ ಇರುವಂತೆ ಕೇಳಿಕೊಳ್ಳಲಾಗಿದೆ.
ಜೈಪುರ: ರಾಜಸ್ಥಾನದ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದಾಗಿ (Rajasthan Crisis) ಕಾಂಗ್ರೆಸ್ ಸಂದಿಗ್ಧತೆಗೆ ಸಿಲುಕಿದೆ. ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಸಚಿನ್ ಪೈಲಟ್ (Sachin Pilot) ಬಣದ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಇದೀಗ ಸ್ಫೋಟಗೊಂಡಿದ್ದು, ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದರೆ ಸಚಿನ್ ಪೈಲಟ್ ಅವರನ್ನು ರಾಜಸ್ಥಾನದ ಸಿಎಂ ಆಗಿ ಮಾಡುವ ಕಾಂಗ್ರೆಸ್ (Congress) ಹೈಕಮಾಂಡ್ ಅಭಿಪ್ರಾಯಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಬಣದ 90 ಕಾಂಗ್ರೆಸ್ ಶಾಸಕರು ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿನ್ ಪೈಲಟ್, ನಾನು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳುವುದಿಲ್ಲ, ಜೈಪುರದಲ್ಲಿಯೇ ಇರಲಿದ್ದೇನೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.
ಕೇರಳದಲ್ಲಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಸ್ಥಾನದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಪಕ್ಷದ ನಾಯಕ ಕೆ.ಸಿ. ವೇಣುಗೋಪಾಲ್ ಅವರನ್ನು ಕೇರಳದಿಂದ ದೆಹಲಿಗೆ ಕಳುಹಿಸಿದ್ದಾರೆ. ಇಂದು ಸಂಜೆ ವೇಳೆಗೆ ವೇಣುಗೋಪಾಲ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಕಾಂಗ್ರೆಸ್ ಶಾಸಕರು ರಾಜೀನಾಮೆ
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವೀಕ್ಷಕ ಅಜಯ್ ಮಾಕನ್, ”ರಾಜಸ್ಥಾನದಲ್ಲಿ ನಡೆದಿರುವ ಬೆಳವಣಿಗೆ ಅಶಿಸ್ತಿನದ್ದಾಗಿದೆ. ಒಂದು ಸಿಎಲ್ಪಿ ಸಭೆ ಕರೆದರೆ, ಅದೇ ಸಮಯದಲ್ಲಿ ಮತ್ತೊಂದು ಸಭೆ ಕರೆಯಲಾಯಿತು. ಶಾಸಕರೆಲ್ಲರೂ ರಾಜೀನಾಮೆ ನೀಡಿದ್ದಾರೆ. 90 ಜನ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಯಾರೆಲ್ಲಾ ರಾಜೀನಾಮೆ ನೀಡಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಮಾತನಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವೆಲ್ಲರೂ ಸಭೆಯಲ್ಲಿ ಶಾಸಕರಿಗಾಗಿ ಕಾಯುತ್ತಿದ್ದೆವು, ಅವರು ಬರಲಿಲ್ಲ. ಹೀಗಾಗಿ, ನಾವು ವಾಪಾಸ್ ಬಂದಿದ್ದೇವೆ. ನಾವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಈ ಬಗ್ಗೆ ವರದಿ ನೀಡುತ್ತೇವೆ ಎಂದಿದ್ದಾರೆ.
The events unfolding in #Rajasthan are deeply disappointing, unfortunate & unnecessary. Senior leaders in the state must be prepared to sacrifice personal ambition & take their cue from @RahulGandhi who has shown what the Congress needs the most right now is selfless service.
— Margaret Alva (@alva_margaret) September 26, 2022
ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಅಜಯ್ ಮಾಕನ್, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಅಶೋಕ್ ಗೆಹ್ಲೋಟ್ ಕ್ಯಾಂಪ್‌ನ ಬಹುತೇಕ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸುತ್ತಿದ್ದಂತೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರನ್ನು ರಾಜಸ್ಥಾನದ ಶಾಸಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹರಿಸಲು ಸೂಚಿಸಿದ್ದಾರೆ.
ಮೂಲಗಳ ಪ್ರಕಾರ ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಕಾಂಗ್ರೆಸ್ ನಾಯಕತ್ವದ ಮುಂದಿನ ಸಿಎಂ ಆಯ್ಕೆಯಾಗಿದ್ದಾರೆ. ಅವರನ್ನು ಜೈಪುರದಲ್ಲೇ ಇರುವಂತೆ ಕೇಳಿಕೊಳ್ಳಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ನಿನ್ನೆ ಸಂಜೆ ಸಚಿನ್ ಪೈಲಟ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.
#RajasthanCongressCrisis | Neither did I talk to CM Ashok Gehlot today, nor did he call me, things will be sorted out soon: Congress leader KC Venugopal pic.twitter.com/uDIGbA55jc
— ANI (@ANI) September 25, 2022
ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿವೆ. ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೆ ಸಚಿನ್ ಪೈಲಟ್ ರಾಜಸ್ಥಾನದ ಮುಂದಿನ ಸಿಎಂ ಆಗಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಗೆಹ್ಲೋಟ್ ಬಣದ ಶಾಸಕರು ರಾಜೀನಾಮೆ ನೀಡಿದ್ದಾರೆ. ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೆ ಸಚಿನ್ ಪೈಲಟ್ ಅವರು ರಾಜಸ್ಥಾನದ ಮುಖ್ಯಮಂತ್ರಿಯಾಗಬಹುದು ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಹಿಂದೆ ಅಶೋಕ್ ಗೆಹ್ಲೋಟ್ ಕೈವಾಡವಿದೆಯೇ? ಎಂದು ಚರ್ಚೆಗಳೂ ನಡೆಯುತ್ತಿವೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯ ನಂತರವೇ ರಾಜಸ್ಥಾನದ ಮುಖ್ಯಮಂತ್ರಿಯ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ. ನಿಷ್ಠಾವಂತರು, ಶಾಸಕರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದಿದ್ದಾರೆ.
Rajasthan political crisis: Congress observers to return to Delhi today, submit report to top leadership
Read @ANI Story | https://t.co/BtbdiCWSC5#RajasthanPoliticalCrisis #Rajasthan #AshokGehlot #SachinPilot #Congress pic.twitter.com/r5agLJB8iN
— ANI Digital (@ani_digital) September 26, 2022
2020ರ ಕಾಂಗ್ರೆಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಕೆಲವು ಅಶೋಕ್ ಗೆಹ್ಲೋಟ್ ನಿಷ್ಠಾವಂತರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಚಿನ್ ಪೈಲಟ್ ಅವರ ವಿರುದ್ಧ ಇದು ಬಂಡಾಯದ ಕರೆಯಾಗಿದೆ. ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಎರಡೂ ಪಾತ್ರಗಳನ್ನು ನಿಭಾಯಿಸಬಲ್ಲರು. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಉಳಿಯದಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗೆಲ್ಲುವಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವ ಗೋವಿಂದ್ ರಾಮ್ ಮೇಘವಾಲ್ ಹೇಳಿದ್ದಾರೆ.