ರಾಜಸ್ಥಾನದಲ್ಲಿ ಬಗೆಹರಿಯದ ನಾಯಕತ್ವ ಬಿಕ್ಕಟ್ಟು: ಕಾಂಗ್ರೆಸ್​ಗೆ​ ದುಸ್ವಪ್ನವಾಗಿ ಕಾಡುತ್ತಿರುವ ಪಂಜಾಬ್ ವೈಫಲ್ಯದ ನೆನಪು

ಚುನಾವಣೆ ಸಮೀಪದಲ್ಲಿರುವುದರಿಂದ ಈ ಹಂತದಲ್ಲಿ ನಾಯಕತ್ವ ಬದಲಾವಣೆ ಮಾಡಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ರಾಜಸ್ಥಾನದ ಸ್ಥಳೀಯ ಕಾಂಗ್ರೆಸ್ ನಾಯಕರು ಎಚ್ಚರಿಸಿದ್ದಾರೆ.

ರಾಜಸ್ಥಾನದಲ್ಲಿ ಬಗೆಹರಿಯದ ನಾಯಕತ್ವ ಬಿಕ್ಕಟ್ಟು: ಕಾಂಗ್ರೆಸ್​ಗೆ​ ದುಸ್ವಪ್ನವಾಗಿ ಕಾಡುತ್ತಿರುವ ಪಂಜಾಬ್ ವೈಫಲ್ಯದ ನೆನಪು
ರಾಸ್ಥಾನದ ಕಾಂಗ್ರೆಸ್ ನಾಯಕರಾದ ಸಚಿನ್ ಪೈಟಲ್ ಮತ್ತು ಅಶೋಕ್ ಗೆಹ್ಲೋಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 20, 2022 | 8:38 AM

ಜೈಪುರ: ಇಡೀ ದೇಶದಲ್ಲಿ ಈಗ ಚುನಾವಣೆಯ ವಾತಾವರಣ ನಿರ್ಮಾಣವಾಗುತ್ತಿದೆ. 2024ಕ್ಕೆ ಲೋಕಸಭೆ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮುಂದಿನ ವರ್ಷ (2023) ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ರಾಜಸ್ಥಾನವೂ ಒಂದು. ಕಾಂಗ್ರೆಸ್​ ಪಕ್ಷವು ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ನಾಯಕತ್ವ ಬಿಕ್ಕಟ್ಟು ದೊಡ್ಡ ಕಗ್ಗಂಟಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ಗಾದಿಯಲ್ಲಿರುವ ಅಶೋಕ್ ಗೆಹ್ಲೋಟ್ ಅವರನ್ನು ಬದಲಿಸುವ ಸಾಧ್ಯತೆಗಳೂ ಕಡಿಮೆಯಿವೆ. ಚುನಾವಣೆ ಸಮೀಪದಲ್ಲಿರುವುದರಿಂದ ಈ ಹಂತದಲ್ಲಿ ನಾಯಕತ್ವ ಬದಲಾವಣೆ ಮಾಡಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ರಾಜಸ್ಥಾನದ ಸ್ಥಳೀಯ ಕಾಂಗ್ರೆಸ್ ನಾಯಕರು ಎಚ್ಚರಿಸಿದ್ದಾರೆ.

ಚುನಾವಣೆ ಹತ್ತಿರದಲ್ಲಿರುವಾಗ ಪಂಜಾಬ್​​ನಲ್ಲಿ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಯನ್ನು ಬದಲಿಸಿದ್ದನ್ನು ಮತದಾರರು ಸ್ವೀಕರಿಸಲಿಲ್ಲ. ಪಂಜಾಬ್​​ನಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣವಾದ ಅಂಶಗಳ ಪೈಕಿ ಇದೂ ಸಹ ಒಂದು ಎಂದು ವಿಶ್ಲೇಷಿಸಲಾಗಿದೆ. ಪಂಜಾಬ್​ನಲ್ಲಿ ಚುನಾವಣೆಗೆ ಐದು ತಿಂಗಳು ಬಾಕಿಯಿದೆ ಎನ್ನುವಾಗ, ಸೆಪ್ಟೆಂಬರ್ 2011ರಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಬದಲಿಸಲಾಗಿತ್ತು. ಕಾಂಗ್ರೆಸ್​ ಹೈಕಮಾಂಡ್​ನಲ್ಲಿ ನಡೆಯುತ್ತಿರುವ ಚರ್ಚೆಗಳಲ್ಲಿ ಹಲವು ನಾಯಕರು ಚುನಾವಣೆ ಸಮೀಪದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆ ಸರಿಯಾಗಲಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಯುವ ನಾಯಕ ಸಚಿನ್ ಪೈಲಟ್ ನಡುವಣ ಭಿನ್ನಮತ ಕಾಂಗ್ರೆಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಶೋಕ್ ಗೆಹ್ಲೋಟ್ ಅವರಿಗೆ ಪಕ್ಷದ ಶಾಸಕರಲ್ಲಿ ವ್ಯಾಪಕ ಬೆಂಬಲವಿದೆ. ಈ ಹಿಂದೆ ಸೆ 25ರಂದು ಪಕ್ಷವು ಗೆಹ್ಲೋಟ್ ಅವರನ್ನು ಬದಲಿಸಿ, ಪೈಲಟ್ ಅವರನ್ನು ಮುಖ್ಯಮಂತ್ರಿಯಾಗಿಸುವ ಪ್ರಯತ್ನ ಮಾಡಿತ್ತು. ಆದರೆ ಶಾಸಕರ ವಿರೋಧದಿಂದ ಇದು ಕಾರ್ಯರೂಪಕ್ಕೆ ಬರಲಿಲ್ಲ. ಕಾಂಗ್ರೆಸ್ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯು ನಡೆಯದ ಕಾರಣ ಹೈಕಮಾಂಡ್ ಇರಿಸುಮುರಿಸು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಮೂರು ದಿನಗಳ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿದ್ದ ಸಚಿನ್ ಪೈಲಟ್ ಹಲವು ವಿಚಾರಗಳನ್ನು ಚರ್ಚಿಸಿದ್ದರು. ಆದರೆ ಪಕ್ಷದ ಶಾಸಕರ ಗೆಹ್ಲೋಟ್ ಪರವಾಗಿ ಬಲವಾಗಿ ನಿಂತಿರುವುದರಿಂದ ನಾಯಕತ್ವ ಬದಲಾವಣೆಯ ಯಾವುದೇ ಪ್ರಯತ್ನವು ಅಪಾಯಕಾರಿ ಎಂದು ವಿಶ್ಲೇಷಿಸಲಾಗಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ ಮೊದಲ ವಾರದಲ್ಲಿ ರಾಜಸ್ಥಾನ ಪ್ರವೇಶಿಸಲಿದೆ. ಅಷ್ಟರ ಒಳಗೆ ಪಕ್ಷದ ಉನ್ನತ ನಾಯಕತ್ವವು ತನ್ನ ನಿಲುವು ಸ್ಪಷ್ಟಪಡಿಸಬಹುದು. ಮುಖ್ಯ ಬದಲಾವಣೆ ಬಗ್ಗೆ ಹೈಕಮಾಂಡ್​ನಿಂದ ಸಂದೇಶ ಬರಬಹುದು ಎಂಬ ನಿರೀಕ್ಷೆಗಳು ವ್ಯಕ್ತವಾಗಿವೆ. ಭಾರತ್ ಜೋಡೋ ಯಾತ್ರೆಯು ಯಶಸ್ವಿಯಾಗಲು ರಾಜ್ಯ ಘಟಕದಿಂದ ಹಲವು ಹಂತಗಳಲ್ಲಿ ಸಾಕಷ್ಟು ಬೆಂಬಲ ಬೇಕಾಗುತ್ತದೆ. ಯಾತ್ರೆಯು ರಾಜಸ್ಥಾನ್ ಪ್ರವೇಶಿಸುವ ಮೊದಲು ನಾಯಕತ್ವ ಬದಲಾವಣೆಗೆ ಮುಂದಾಗುವುದು ಅಪಾಯಕಾರಿ ಎಂದು ಹೇಳಲಾಗುತ್ತಿದೆ.

ನಾಯಕತ್ವ ಬದಲಾವಣೆಯೇ ಕಾಂಗ್ರೆಸ್ ಪಕ್ಷದ ನಿಜವಾದ ಉದ್ದೇಶವಾಗಿದ್ದರೆ ಅದನ್ನು 2022ರ ಆರಂಭದಲ್ಲಿಯೇ ಮಾಡಬೇಕಿತ್ತು. ಹಾಗೆ ಮಾಡಿದ್ದ ಪೈಲಟ್ ಅವರಿಗೆ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಲು ಸಾಕಷ್ಟು ಸಮಯ ಸಿಗುತ್ತಿತ್ತು. ಆದರೆ ಅಮರಿಂದರ್ ಸಿಂಗ್​ ಅವರನ್ನು ಬದಲಿಸುವ ಪ್ರಯೋಗ ವಿಫಲವಾದ ನಂತರ ಕಾಂಗ್ರೆಸ್ ಪಕ್ಷವು ನಾಯಕತ್ವ ಬದಲಾವಣೆಗೆ ಮುಂದಾಗಲು ಹಿಂಜರಿಯುತ್ತಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಕಾಂಗ್ರೆಸ್ ಪಕ್ಷದ ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕೆನ್ ಸಹ ಇದೀಗ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಕಳೆದ ಸೆ 25ರಂದು ಕಾಂಗ್ರೆಸ್​ನ ರಾಷ್ಟ್ರೀಯ ವೀಕ್ಷಕರಿಗೆ ಸ್ಥಳೀಯ ಶಾಸಕರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬೆಳವಣಿಗೆಯ ನೈತಿಕ ಹೊಣೆ ಹೊತ್ತು ಅಧಿಕಾರದಿಂದ ಕೆಳಗಿಳಿಸಲು ಅವರು ನಿರ್ಧರಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಸ್ಪರ್ಧಿಸುವ ಮೊದಲು ಗೆಹ್ಲೋಟ್ ಅವರನ್ನೇ ಈ ಸ್ಥಾನಕ್ಕೆ ತರಲು ಸೋನಿಯಾ ಗಾಂಧಿ ನಿರ್ಧರಿಸಿದ್ದರು. ಆದರೆ ರಾಜಸ್ಥಾನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ಈ ನಿರ್ಧಾರವು ಕಾರ್ಯರೂಪಕ್ಕೆ ಬರಲಿಲ್ಲ. ಅಶೋಕ್ ಮಾಕೆನ್ ಅವರೊಂದಿಗೆ ರಾಜಸ್ಥಾನಕ್ಕೆ ಬಂದಿದ್ದ ಖರ್ಗೆ ಶಾಸಕರನ್ನು ಭೇಟಿಯಾಗದೇ ದೆಹಲಿಗೆ ಹಿಂದಿರುಗಬೇಕಾಯಿತು. ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಾರಣವಾದ ಅಂಶಗಳ ಪೈಕಿ ಇದು ಬಹಳ ಮುಖ್ಯ ಬೆಳವಣಿಗೆಯಾಗಿತ್ತು.

ರಾಜಸ್ಥಾನ ವಿಧಾನಸಭೆ ಬಲಾಬಲ

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 101 ಸದಸ್ಯರ ಬೆಂಬಲ ಬೇಕಿದೆ. ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದ್ದು 107 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್​ನ ಮಿತ್ರ ಪಕ್ಷಗಳಾದ ಆರ್​ಎಲ್​ಡಿ 1, ಸಿಪಿಐ (ಎಂ) 1 ಮತ್ತು ಪಕ್ಷೇತರರು 13 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಆಡಳಿತ ಪಕ್ಷದಲ್ಲಿ 122 ಸದಸ್ಯ ಬಲ ಇದೆ. 71 ಸದಸ್ಯ ಬಲದ ಬಿಜೆಪಿ ಪ್ರಮುಖ ಪ್ರತಿಪಕ್ಷವಾಗಿದೆ. ಉಳಿದಂತೆ ಆರ್​ಎಲ್​ಪಿ 3, ಬಿಟಿಪಿ 2 ಸ್ಥಾನಗಳನ್ನು ಪಡೆದಿದೆ. ಒಂದು ಕ್ಷೇತ್ರವು ಖಾಲಿ ಉಳಿದಿದೆ. ಸಿಪಿಎಂನ ಒಬ್ಬರು ಸದಸ್ಯರು ಕಾಂಗ್ರೆಸ್​ಗೆ ಬೆಂಬಲ ನೀಡಿಲ್ಲ.

Published On - 8:36 am, Sun, 20 November 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್