Rajasthan Politics: ಭ್ರಷ್ಟಾಚಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ; ಕಾಂಗ್ರೆಸ್​ಗೆ ಹೊಸ ತಲೆನೋವು

Sachin Pilot vs Ashok Gehlot: ಹಿಂದಿನ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗೆಹ್ಲೋಟ್ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಸಚಿನ್ ಪೈಲಟ್ ಹೇಳಿದ್ದು ಅವರನ್ನು ಬೆಂಬಲಿಸುವ ಶಾಸಕರು ತಮ್ಮೊಂದಿಗೆ ಸೇರಿಕೊಳ್ಳದಂತೆ ವಿನಂತಿಸಿದ್ದಾರೆ.

Rajasthan Politics: ಭ್ರಷ್ಟಾಚಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ; ಕಾಂಗ್ರೆಸ್​ಗೆ ಹೊಸ ತಲೆನೋವು
ಸಚಿನ್ ಪೈಲಟ್- ಅಶೋಕ್ ಗೆಹ್ಲೋಟ್
Follow us
|

Updated on:Apr 10, 2023 | 5:52 PM

ಜೈಪುರ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜಸ್ಥಾನ (Rajasthan) ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್‌ನಲ್ಲಿ ಸಚಿನ್ ಪೈಲಟ್ (Sachin Pilot) ಅವರ ಚಟುವಟಿಕೆಗಳು ಆತಂಕವನ್ನು ಹೆಚ್ಚಿಸುತ್ತಿವೆ. ಮಂಗಳವಾರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​​ನ ಒಂದು ದಿನದ ಉಪವಾಸವು ಆಂತರಿಕ ಪ್ರತಿಸ್ಪರ್ಧಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​​ಗೆ (Ashok Gehlot) ಸವಾಲಾಗಿದೆ. ಹಿಂದಿನ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗೆಹ್ಲೋಟ್ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಸಚಿನ್ ಪೈಲಟ್ ಹೇಳಿದ್ದು ಅವರನ್ನು ಬೆಂಬಲಿಸುವ ಶಾಸಕರು ತಮ್ಮೊಂದಿಗೆ ಸೇರಿಕೊಳ್ಳದಂತೆ ವಿನಂತಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಅವರು ಮುಖ್ಯಮಂತ್ರಿ ಮತ್ತು ಬಿಜೆಪಿಯ ವಸುಂಧರಾ ರಾಜೇ ಅವರ ವಿರುದ್ಧ ಏಕಾಂಗಿ ಹೋರಾಟಕ್ಕೆ ಮುಂದಾಗಿದ್ದಾರೆ ಎಂದು ಮೂಲಗಳು ಹೇಳಿವೆ.  ಇತ್ತ ಗೆಹ್ಲೋಟ್ ಕಡೆಗೆ ಹೆಚ್ಚು ಒಲವು ತೋರುವ ಎಚ್ಚರಿಕೆಯ ಮಾತುಗಳ ಹೇಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರವು ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದು ಜನರ ಮೇಲೆ ಗಾಢವಾಗಿ ಪ್ರಭಾವ ಬೀರುವ ಅನೇಕ ಹೊಸ ಉಪಕ್ರಮಗಳನ್ನು ಕೈಗೊಂಡಿದೆ. ಇದು ನಮ್ಮ ದೇಶದಲ್ಲಿ ಆಡಳಿತದಲ್ಲಿ ರಾಜ್ಯಕ್ಕೆ ನಾಯಕತ್ವ ಸ್ಥಾನವನ್ನು ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ಹೇಳಿದ್ದಾರೆ. ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನೂ ಉಲ್ಲೇಖಿಸಿದ್ದಾರೆ.

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯು ರಾಜ್ಯದಲ್ಲಿ ಪಕ್ಷದ ಸಂಘಟನೆಯ ಸಮರ್ಪಣೆ ಮತ್ತು ಸಂಕಲ್ಪದಿಂದ ಅದ್ಭುತವಾದ ಯಶಸ್ಸನ್ನು ಸಾಧಿಸಿದೆ. ವರ್ಷದ ನಂತರ, ಈ ಮಹತ್ವದ ಸಾಧನೆಗಳು ಮತ್ತು ನಮ್ಮ ಸಂಘಟನೆಯ ಸಾಮೂಹಿಕ ಪ್ರಯತ್ನಗಳ ಬಲದ ಮೇಲೆ ಕಾಂಗ್ರೆಸ್ ಜನರಿಂದ ಹೊಸ ಜನಾದೇಶವನ್ನು ಬಯಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಆದರೆ ರಾಜಸ್ಥಾನ ಚುನಾವಣೆಗೆ ಎಂಟು ತಿಂಗಳು ಬಾಕಿ ಇದ್ದು, ಶೀಘ್ರದಲ್ಲೇ ಕಠಿಣ ನಿರ್ಧಾರಗಳನ್ನು ಪಕ್ಷ ಎದುರಿಸಬಹುದು. ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಹೇಳಿದ್ದಾರೆ.

ಸದ್ಯಕ್ಕೆ  ಗೆಹ್ಲೋಟ್‌ಗೆ ನಾಯಕತ್ವವು ಬೆಂಬಲ ನೀಡುತ್ತಿರುವಂತೆ ಕಂಡು ಬರುತ್ತಿದ್ದು, ಸಚಿನ್ ಪೈಲಟ್ ಕಾಂಗ್ರೆಸ್‌ನಿಂದ ಹೊರಬರಲು ತಯಾರಿ ನಡೆಸುತ್ತಿದ್ದಾರೆ ಎಂದು ಪಕ್ಷದ ಅನೇಕರು ಭಯಪಡುತ್ತಿದ್ದಾರೆ.

ಇದನ್ನೂ ಓದಿ: ಬ್ರಿಟನ್ ಜತೆ ವ್ಯಾಪಾರ ಮಾತುಕತೆ ನಿಲ್ಲಿಸಲಾಗಿದೆ ಎಂಬ ವರದಿ ಆಧಾರರಹಿತ: ಭಾರತ ಸರ್ಕಾರ

ಎರಡು ದಿನಗಳ ಹಿಂದೆ ದೆಹಲಿಯಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯೊಂದು ತೃತೀಯ ರಂಗದ ಸಂಚಲನ ಮೂಡಿಸಿದೆ.ಆದಾಗ್ಯೂ ಪೈಲಟ್ ನಾಯಕತ್ವದ ಬದಲಾವಣೆಗೆ ಆದ್ಯತೆ ನೀಡುತ್ತಿದ್ದಾರೆಯೇ ಅಥವಾ ಹೆಚ್ಚಿನದನ್ನು ಮಾಡುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 10 April 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ