ಕಾಂಗ್ರೆಸ್ನವರು ಸುಳ್ಳು ಹೇಳುತ್ತಿದ್ದಾರೆ; ದಿನೇಶ್ ಗುಂಡೂರಾವ್ ವಿರುದ್ಧ ರಾಜೀವ್ ಚಂದ್ರಶೇಖರ್ ಕಿಡಿ
ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು ಆರ್ಎಸ್ಎಸ್ ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು ಎಂಬ ದಿನೇಶ್ ಗುಂಡೂರಾವ್ ಹೇಳಿಕೆಗೆ ರಾಜೀವ್ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ರಾಜ್ಯದ ನೂರಾರು ಎಕರೆ ಸರ್ಕಾರಿ ಜಾಗವನ್ನು ಆರ್ಎಸ್ಎಸ್ (RSS) ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು. ಆ ನಿರ್ಧಾರಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಕರ್ನಾಟಕದ ಸಚಿವ ದಿನೇಶ್ ಗುಂಡೂರಾವ್ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುಂಡೂರಾವ್ ಹೇಳಿಕೆ ಬಗ್ಗೆ ನಾನು ಚರ್ಚೆಗೆ ಬರಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಜೊತೆ ವಿರಳವಾಗಿ ಚರ್ಚೆಗೆ ಬರುತ್ತೇನೆ. ಏಕೆಂದರೆ ಅವರು ಸುಳ್ಳುಗಳನ್ನಷ್ಟೇ ಹೇಳುತ್ತಾರೆ ಅಥವಾ ಅವರ ಹೇಳಿಕೆಗಳಿಗೆ ಅರ್ಥವಿರುವುದಿಲ್ಲ. ದಿನೇಶಗ ಗುಂಡೂರಾವ್ ಕೂಡ ಅದೇ ವರ್ಗಕ್ಕೆ ಸೇರಿದವರು ಎಂದು ಅವರು ಹೇಳಿದ್ದಾರೆ.
ಸಂಘಪರಿವಾರಕ್ಕೆ ಸೇರಿದ ಅನೇಕ ಸಂಸ್ಥೆಗಳಿಗೆ ಸಾಕಷ್ಟು ಸರ್ಕಾರಿ ಆಸ್ತಿಗಳನ್ನು ಹಸ್ತಾಂತರಿಸಲಾಗಿದೆ. ಆದ್ದರಿಂದ, ನಾವು ಎಲ್ಲಾ ವಿಷಯಗಳನ್ನು ಪರಿಶೀಲಿಸಬೇಕಾಗಿದೆ. ಅವುಗಳನ್ನು ಸರಿಯಾಗಿ, ಕಾನೂನುಬದ್ಧವಾಗಿ ಮಾಡಲಾಗಿದೆಯೇ ಎಂದು ನೋಡಬೇಕಿದೆ. ಆ ವಿಷಯಗಳ ಬಗ್ಗೆ ನಾವು ಏನು ಮಾಡಬಹುದು ಎಂಬುದನ್ನು ಯೋಚಿಸಲಿದ್ದೇವೆ. ಆದರೆ, ಆರೆಸ್ಸೆಸ್ ಮತ್ತು ಬಿಜೆಪಿಗೆ ನಿಕಟ ಸಂಪರ್ಕ ಹೊಂದಿರುವ ಸಂಸ್ಥೆಗಳಿಗೆ ಸಾಕಷ್ಟು ರಾಜ್ಯ ಸರ್ಕಾರದ ಆಸ್ತಿಗಳನ್ನು ನೀಡಿರುವುದಂತೂ ಸ್ಪಷ್ಟ ಎಂದು ಗುಂಡೂರಾವ್ ಆರೋಪಿಸಿದ್ದರು.
ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪ್ರತಿಸ್ಪರ್ಧಿ ಸಪ್ತಗಿರಿ ಗೌಡ ಅವರ ವಿರುದ್ಧ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಗಾಂಧಿ ನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಈ ಹಿಂದೆಯೂ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು.
ಇದನ್ನೂ ಓದಿ: ಬಿಜೆಪಿಯವರು RSS ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ; ಸಚಿವ ದಿನೇಶ್ ಗುಂಡೂರಾವ್ ಆರೋಪ
ಕರ್ನಾಟಕದಲ್ಲಿ ಚುನಾವಣೆಗೆ ಮುನ್ನ ಮೋದಿ ವಿರುದ್ಧ ಟೀಕಿಸಿದ್ದ ಅವರು, ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಬಿಜೆಪಿಗೆ ಮತ ಕೇಳಲು ಪ್ರಧಾನಿಯವರು ಕರ್ನಾಟಕದ ಬೀದಿ ಬೀದಿ ಅಲೆಯುತ್ತಿದ್ದಾರೆ. ಮೋದಿ ಪದೇ ಪದೇ ರಾಜ್ಯಕ್ಕೆ ಏಕೆ ಬರುತ್ತಿದ್ದಾರೆ ಎಂದು ಸಾರ್ವಜನಿಕರೂ ಕೇಳಲಾರಂಭಿಸಿದ್ದಾರೆ. ಅವರು ಆಗಾಗ್ಗೆ ಭೇಟಿ ನೀಡುವುದರಿಂದ ಕಾಂಗ್ರೆಸ್‌ಗೆ ಲಾಭವಾಗಿದೆ ಎಂದು ಹೇಳಿದ್ದರು.
ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:42 am, Sat, 10 June 23