ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜತೆ ಊಟ ಸೇವಿಸಿದ ರಾಜನಾಥ್‌ ಸಿಂಗ್

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್​ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜೊತೆ ಊಟ ಮಾಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜತೆ ಊಟ ಸೇವಿಸಿದ ರಾಜನಾಥ್‌ ಸಿಂಗ್
ರಾಜನಾಥ್‌ ಸಿಂಗ್ ಭೋಜನ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 02, 2023 | 5:24 PM

ಬೆಳಗಾವಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ದ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್​​ (Rajnath Singh) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಬಿ.ಇನಾಮ್‌ದಾರ್‌ ಜೊತೆ ಊಟ ಮಾಡಿದ್ದಾರೆ. ಜಿಲ್ಲೆಯ ಕಿತ್ತೂರು ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಭೋಜನ ಮಾಡಿದ್ದಾರೆ. ಡಿ.ಬಿ ಇನಾಮದಾರ್​ ಕಿತ್ತೂರು ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಹಾಗೂ ಪ್ರಲ್ಹಾದ್ ಜೋಶಿ ಸಾಥ್​ ನೀಡಿದರು.

ಇಂದು ಬಿಜೆಪಿಗೆ ಶುಭ ದಿನ: ರಾಜನಾಥ್ ಸಿಂಗ್

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಎರಡನೇ ರಥಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಚಾಲನೆ ನೀಡಿದರು. ಬಳಿಕ ಭಾಷಣ ಮಾಡಿದ ಅವರು, ಕರ್ನಾಟಕದ ಎಲ್ಲ ಜನರಿಗೆ ನಮಸ್ಕಾರ ಎಂದು ಕನ್ನಡಲ್ಲೇ ಮಾತು ಆರಂಭಿಸಿದರು. ಇಂದು ಬಿಜೆಪಿಗೆ ಶುಭ ದಿನ ಆಗಿದೆ. ತ್ರಿಪುರಾ, ನಾಗಾಲ್ಯಾಂಡ್​​ನಲ್ಲಿ ಬಿಜೆಪಿ ಗೆದ್ದು ಸರ್ಕಾರ ರಚನೆ ಮಾಡಲಿದೆ. ಮೇಘಾಲಯದಲ್ಲಿ ಈಗಾಗಲೇ ಹೆಚ್ಚು ಸ್ಥಾನ ದೊರೆತಿವೆ ಎಂದರು.

ಇದನ್ನೂ ಓದಿ: Belagavi: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಾಜನಾಥ್ ಸಿಂಗ್​ರಿಂದ ಬಿಎಸ್​ವೈ ಗುಣಗಾನ

ಬಸವಣ್ಣ, ರನ್ನ ಪೊನ್ನ, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣಯನ್ನು ಅವರನ್ನು ಸ್ಮರಿಸಿದ ಸಿಂಗ್, ರಾಯಣ್ಣ ಪ್ರತಿಮೆ, ಸಮಾಧಿಗೆ ಮಾಲಾರ್ಪಣೆ ಮಾಡಿ ನಾನು ಧನ್ಯನಾಗಿದ್ದೇನೆ ಎಂದರು. ಜತೆಗೆ ಯೋಧ ಹಣಮಂತಪ್ಪನ ಅವರ ಶೌರ್ಯವನ್ನೂ ಸ್ಮರಿಸಿದರು.

ಕರ್ನಾಟಕ ದಕ್ಷಿಣ ಭಾರತದ ನಂಬರ್ ಒನ್ ರಾಜ್ಯ

ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ದಕ್ಷಿಣ ಭಾರತದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲಿದ್ದೇವೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಸುಂದರ ಏರ್ಪೋರ್ಟ್ ಉದ್ಘಾಟನೆ ಮಾಡಿದ್ದಾರೆ. ಅಷ್ಟೇ ಅಲ್ಲ ರಸ್ತೆ ಸಂಪರ್ಕ ವಿಚಾರದಲ್ಲಿಯೂ ನಮ್ಮ ಸರ್ಕಾರ ಅದ್ಭುತ ಕೆಲಸ ಮಾಡಿದೆ. 50 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು 9 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಚುನಾವಣೆ ಘೋಷಣೆ ಬಳಿಕ ಪ್ರಿಯಾಂಕಾ, ರಾಹುಲ್​ರಿಂದ ರಾಜ್ಯದಲ್ಲಿ ಪ್ರಚಾರ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ ಹೆಲಿಕ್ಯಾಪ್ಟರ್ ಸಿದ್ಧಪಡಿಸುವ ಕಾರ್ಖಾನೆ ಆರಂಭವಾಗಿದೆ. ಇಂಡಸ್ಟ್ರೀಸ್ ಕಾರಿಡಾರ್ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಕರ್ನಾಟಕದಲ್ಲಿ ಮೂರು ಇಂಡಸ್ಟ್ರೀಸ್ ಕಾರಿಡಾರ್ ಮಾಡಲಾಗಿದೆ. ಮನೆ, ಜಮೀನಿಗೆ ನೀರು ಕೊಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:24 pm, Thu, 2 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್