ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಎಂಎಲ್​​​ಸಿ ಲೆಹರ್ ಸಿಂಗ್ ಸಿರೋಯಾ ಗೆದ್ದಿದ್ದಾರೆ.

ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು
ರಾಜ್ಯಸಭಾ ಚುನಾವಣೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jun 10, 2022 | 9:44 PM

ದೆಹಲಿ: ಬಿಜೆಪಿ (BJP) ಸದಸ್ಯರ ಅಡ್ಡ ಮತದಾನದಿಂದ ರಾಜಸ್ಥಾನದ (Rajasthan) ನಾಲ್ಕು ರಾಜ್ಯಸಭಾ (Rajya Sabha) ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನುಕಾಂಗ್ರೆಸ್ ಗೆದ್ದಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಿದೆ. ನಾಲ್ಕು ರಾಜ್ಯಗಳಲ್ಲಿ 16 ಸೀಟುಗಳಿಗೆ ಶುಕ್ರವಾರ ಮತದಾನ ನಡೆದಿದೆ. ಕರ್ನಾಟಕದಿಂದ (Karnataka) ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಎಂಎಲ್​​​ಸಿ ಲೆಹರ್ ಸಿಂಗ್ ಸಿರೋಯಾ ಗೆದ್ದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಂದು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು ಜೆಡಿಎಸ್​​ ಪರಾಭವಗೊಂಡಿದೆ. ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು ವಿಪ್ ಹೊರತಾಗಿಯೂ ತಿವಾರಿಗೆ ಮತ ಹಾಕಿದ್ದಾರೆ. ಹಾಗಾಗಿ ಬಿಜೆಪಿ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಬಿಜೆಪಿ ತನ್ನ ಧೋಲ್‌ಪುರ ಶಾಸಕಿ ಶೋಭಾ ರಾಣಿ ಕುಶ್ವಾಹಾ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.  ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮುಕುಲ್ ವಾಸ್ನಿಕ್ ಮತ್ತು ರಣದೀಪ್ ಸುರ್ಜೇವಾಲಾ ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ತಿವಾರಿ ಅವರಿಗೂ ಹೆಚ್ಚಿನ ಮತಗಳು ಸಿಕ್ಕಿವೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಝೀ ಸಂಸ್ಥೆಯ ಸುಭಾಷ್ ಚಂದ್ರ ಸೋತಿದ್ದಾರೆ.

ರಾಜ್ಯಸಭಾ ಚುನಾವಣೆ: ಇತ್ತೀಚಿನ ಬೆಳವಣಿಗೆಗಳು

  1. ಕರ್ನಾಟಕದಲ್ಲಿ ಜೆಡಿಎಸ್ ಶಾಸಕ ಕೆ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ಹೇಳಿದ್ದಾರೆ. “ಕುದುರೆ ವ್ಯಾಪಾರ” ಎಂದು ಆರೋಪಿಸಿದ ಕುಮಾರಸ್ವಾಮಿ, “32 ರಲ್ಲಿ 30 ಮಂದಿ ನಮ್ಮ ಪರವಾಗಿ ನಿಂತಿದ್ದಾರೆ” ಎಂದು ಹೇಳಿದರು.
  2. ಹರ್ಯಾಣದಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ತನ್ನ ಒಂದು ಶಾಸಕನ ಮತವನ್ನು ಅಸಿಂಧು ಎಂದು ಘೋಷಿಸಿದೆ. ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ಮತ ಹಾಕಿದ್ದಾರೆ.
  3. ಇದನ್ನೂ ಓದಿ
    Image
    Rajya Sabha Election Result: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್​ ಸಿಂಗ್, ಜೈರಾಮ್ ರಮೇಶ್​ಗೆ ಗೆಲುವು
    Image
    Rajya Sabha Election: ಬಿಜೆಪಿಯ ಲೆಹರ್​ ಸಿಂಗ್​ಗೆ ಮತ ಹಾಕಿದ ಜೆಡಿಎಸ್ ಶಾಸಕ ಎಸ್​ಆರ್ ಶ್ರೀನಿವಾಸ್
    Image
    ರಾಜ್ಯಸಭಾ ಚುನಾವಣೆ: ನಾನು ಕಾಂಗ್ರೆಸ್​​ಗೆ ವೋಟ್ ಮಾಡಿದ್ದು, ಐ ಲವ್​​ ಇಟ್​​ ಎಂದ ಜೆಡಿಎಸ್ ನಾಯಕ ಶ್ರೀನಿವಾಸಗೌಡ
  4. ಬಿಜೆಪಿಯ ಕ್ರಿಶನ್ ಲಾಲ್ ಪನ್ವಾರ್ ಮತ್ತು ಕಾಂಗ್ರೆಸ್‌ನ ಅಜಯ್ ಮಾಕನ್ ವಿರುದ್ಧ ಹರ್ಯಾಣದಲ್ಲಿ ಎರಡು ಸ್ಥಾನಗಳಲ್ಲಿ ಒಂದರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಧ್ಯಮ ದೊರೆ ಕಾರ್ತಿಕೇಯ ಶರ್ಮಾ ಇಬ್ಬರು ಅಭ್ಯರ್ಥಿಗಳ ಮತಗಳನ್ನು ಅಸಿಂಧುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
  5. ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತ ಸಮ್ಮಿಶ್ರವು ಹಿನ್ನಡೆ ಅನುಭವಿಸಿದ್ದು, ಬಂಧಿತ ಸಚಿವ ನವಾಬ್ ಮಲಿಕ್ ಅವರಿಗೆ ಬಾಂಬೆ ಹೈಕೋರ್ಟ್ ಮತದಾನಕ್ಕೆ ಅವಕಾಶ ನೀಡಲಿಲ್ಲ.
  6. 15 ರಾಜ್ಯಗಳಲ್ಲಿ ಖಾಲಿ ಇರುವ 57 ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಯಿತು. ಈ ಪೈಕಿ ಬಿಜೆಪಿ 23 ಸ್ಥಾನಗಳನ್ನು ಹೊಂದಿದ್ದು, ಎಂಟು ಸ್ಥಾನಗಳು ಕಾಂಗ್ರೆಸ್‌ ಪಾಲಾಗಿದೆ.
  7. ಗರಿಷ್ಠ 11 ಸ್ಥಾನಗಳು ಉತ್ತರ ಪ್ರದೇಶದಲ್ಲಿವೆ. ಇದರ ನಂತರ ಮಹಾರಾಷ್ಟ್ರ ಮತ್ತು ತಮಿಳುನಾಡು ತಲಾ ಆರು ಸ್ಥಾನಗಳನ್ನು ಪಡೆದಿವೆ. ಬಿಹಾರದಿಂದ ಐದು ಸ್ಥಾನಗಳು, ಕರ್ನಾಟಕ, ರಾಜಸ್ಥಾನ ಮತ್ತು ಆಂಧ್ರಪ್ರದೇಶದಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ಒಡಿಶಾದಿಂದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಅಲ್ಲದೆ ಪಂಜಾಬ್, ಜಾರ್ಖಂಡ್, ಹರಿಯಾಣ, ಛತ್ತೀಸ್‌ಗಢ ಮತ್ತು ತೆಲಂಗಾಣದಿಂದ ತಲಾ ಎರಡು ಸ್ಥಾನಗಳು ಮತ್ತು ಉತ್ತರಾಖಂಡದಿಂದ ಒಂದು ಸ್ಥಾನ ಖಾಲಿ ಇದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:04 pm, Fri, 10 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್