Kannada News Politics Rajya Sabha Election result Congress Wins 3 Seats in Rajasthan Zee's Subhash Chandra Loses
ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಎಂಎಲ್ಸಿ ಲೆಹರ್ ಸಿಂಗ್ ಸಿರೋಯಾ ಗೆದ್ದಿದ್ದಾರೆ.
ರಾಜ್ಯಸಭಾ ಚುನಾವಣೆ
Follow us on
ದೆಹಲಿ: ಬಿಜೆಪಿ (BJP) ಸದಸ್ಯರ ಅಡ್ಡ ಮತದಾನದಿಂದ ರಾಜಸ್ಥಾನದ (Rajasthan) ನಾಲ್ಕು ರಾಜ್ಯಸಭಾ (Rajya Sabha) ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನುಕಾಂಗ್ರೆಸ್ ಗೆದ್ದಿದೆ. ಒಂದು ಸ್ಥಾನ ಬಿಜೆಪಿ ಪಾಲಾಗಿದೆ. ನಾಲ್ಕು ರಾಜ್ಯಗಳಲ್ಲಿ 16 ಸೀಟುಗಳಿಗೆ ಶುಕ್ರವಾರ ಮತದಾನ ನಡೆದಿದೆ. ಕರ್ನಾಟಕದಿಂದ (Karnataka) ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಮತ್ತು ಎಂಎಲ್ಸಿ ಲೆಹರ್ ಸಿಂಗ್ ಸಿರೋಯಾ ಗೆದ್ದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಂದು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು ಜೆಡಿಎಸ್ ಪರಾಭವಗೊಂಡಿದೆ. ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು ವಿಪ್ ಹೊರತಾಗಿಯೂ ತಿವಾರಿಗೆ ಮತ ಹಾಕಿದ್ದಾರೆ. ಹಾಗಾಗಿ ಬಿಜೆಪಿ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಬಿಜೆಪಿ ತನ್ನ ಧೋಲ್‌ಪುರ ಶಾಸಕಿ ಶೋಭಾ ರಾಣಿ ಕುಶ್ವಾಹಾ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಮುಕುಲ್ ವಾಸ್ನಿಕ್ ಮತ್ತು ರಣದೀಪ್ ಸುರ್ಜೇವಾಲಾ ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ತಿವಾರಿ ಅವರಿಗೂ ಹೆಚ್ಚಿನ ಮತಗಳು ಸಿಕ್ಕಿವೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಝೀ ಸಂಸ್ಥೆಯ ಸುಭಾಷ್ ಚಂದ್ರ ಸೋತಿದ್ದಾರೆ.
ರಾಜ್ಯಸಭಾ ಚುನಾವಣೆ: ಇತ್ತೀಚಿನ ಬೆಳವಣಿಗೆಗಳು
ಕರ್ನಾಟಕದಲ್ಲಿ ಜೆಡಿಎಸ್ ಶಾಸಕ ಕೆ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ಹೇಳಿದ್ದಾರೆ. “ಕುದುರೆ ವ್ಯಾಪಾರ” ಎಂದು ಆರೋಪಿಸಿದ ಕುಮಾರಸ್ವಾಮಿ, “32 ರಲ್ಲಿ 30 ಮಂದಿ ನಮ್ಮ ಪರವಾಗಿ ನಿಂತಿದ್ದಾರೆ” ಎಂದು ಹೇಳಿದರು.
ಹರ್ಯಾಣದಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ತನ್ನ ಒಂದು ಶಾಸಕನ ಮತವನ್ನು ಅಸಿಂಧು ಎಂದು ಘೋಷಿಸಿದೆ. ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ಮತ ಹಾಕಿದ್ದಾರೆ.
ಇದನ್ನೂ ಓದಿ
ಬಿಜೆಪಿಯ ಕ್ರಿಶನ್ ಲಾಲ್ ಪನ್ವಾರ್ ಮತ್ತು ಕಾಂಗ್ರೆಸ್‌ನ ಅಜಯ್ ಮಾಕನ್ ವಿರುದ್ಧ ಹರ್ಯಾಣದಲ್ಲಿ ಎರಡು ಸ್ಥಾನಗಳಲ್ಲಿ ಒಂದರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಧ್ಯಮ ದೊರೆ ಕಾರ್ತಿಕೇಯ ಶರ್ಮಾ ಇಬ್ಬರು ಅಭ್ಯರ್ಥಿಗಳ ಮತಗಳನ್ನು ಅಸಿಂಧುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತ ಸಮ್ಮಿಶ್ರವು ಹಿನ್ನಡೆ ಅನುಭವಿಸಿದ್ದು, ಬಂಧಿತ ಸಚಿವ ನವಾಬ್ ಮಲಿಕ್ ಅವರಿಗೆ ಬಾಂಬೆ ಹೈಕೋರ್ಟ್ ಮತದಾನಕ್ಕೆ ಅವಕಾಶ ನೀಡಲಿಲ್ಲ.
15 ರಾಜ್ಯಗಳಲ್ಲಿ ಖಾಲಿ ಇರುವ 57 ಸ್ಥಾನಗಳನ್ನು ಭರ್ತಿ ಮಾಡಲು ಚುನಾವಣೆ ನಡೆಸಲಾಯಿತು. ಈ ಪೈಕಿ ಬಿಜೆಪಿ 23 ಸ್ಥಾನಗಳನ್ನು ಹೊಂದಿದ್ದು, ಎಂಟು ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ.
ಗರಿಷ್ಠ 11 ಸ್ಥಾನಗಳು ಉತ್ತರ ಪ್ರದೇಶದಲ್ಲಿವೆ. ಇದರ ನಂತರ ಮಹಾರಾಷ್ಟ್ರ ಮತ್ತು ತಮಿಳುನಾಡು ತಲಾ ಆರು ಸ್ಥಾನಗಳನ್ನು ಪಡೆದಿವೆ. ಬಿಹಾರದಿಂದ ಐದು ಸ್ಥಾನಗಳು, ಕರ್ನಾಟಕ, ರಾಜಸ್ಥಾನ ಮತ್ತು ಆಂಧ್ರಪ್ರದೇಶದಿಂದ ತಲಾ ನಾಲ್ಕು, ಮಧ್ಯಪ್ರದೇಶ ಮತ್ತು ಒಡಿಶಾದಿಂದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಅಲ್ಲದೆ ಪಂಜಾಬ್, ಜಾರ್ಖಂಡ್, ಹರಿಯಾಣ, ಛತ್ತೀಸ್‌ಗಢ ಮತ್ತು ತೆಲಂಗಾಣದಿಂದ ತಲಾ ಎರಡು ಸ್ಥಾನಗಳು ಮತ್ತು ಉತ್ತರಾಖಂಡದಿಂದ ಒಂದು ಸ್ಥಾನ ಖಾಲಿ ಇದೆ.