AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆಯ ಕಾವು ಏರತೊಡಗಿದೆ. ಮಂಗಳವಾರ ಮತದಾನ ನಡೆಯಲಿದ್ದು ಆಡಳಿತ ರೂಢ ಕಾಂಗ್ರೆಸ್​ಗೆ ಅಡ್ಡ ಮತದಾನದ ಭೀತಿ ಎದುರಾಗಿದೆ. ಹೀಗಾಗಿ ತನ್ನೆಲ್ಲ ಶಾಸಕರನ್ನು ಇಂದು ( ಸೋಮವಾರ ಸಂಜೆ) ರೆಸಾರ್ಟಿಗೆ ಶಿಫ್ಟ್ ಮಾಡುತ್ತಿದೆ. ಅತ್ತ, ಬಿಜೆಪಿ ಜೆಡಿಎಸ್ ಮೈತ್ರಿ ಕೂಡ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ತಂತ್ರಗಾರಿಕೆ ಹೆಣೆಯುತ್ತಿವೆ.

Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Feb 26, 2024 | 7:05 AM

Share

ಬೆಂಗಳೂರು, ಫೆಬ್ರವರಿ 26: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ (Congress, BJP, JDS) ಈ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಅಖಾಡವಾಗಿರುವ, ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ (Rajya Sabha Election) ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.

ಅಡ್ಡ ಮತದಾನ ಭೀತಿ: ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ರಾಜ್ಯಸಭೆ ಕಣ ರಂಗೇರಲು ಕಾರಣ 5ನೇ ಅಭ್ಯರ್ಥಿ ಸ್ಪರ್ಧೆಯಲ್ಲಿರುವುದು. ಇದು ಸಹಜವಾಗಿಯೇ ಆಡಳಿತಾರೂಢ ಕಾಂಗ್ರೆಸ್‌ಗೆ ಕುದುರೆ ವ್ಯಾಪಾರದ ಭೀತಿ ತಂದಿಟ್ಟಿದೆ. ಹೀಗಾಗಿ ಸಂಖ್ಯಾಬಲದಲ್ಲಿ ಯಾವುದೇ ಕಡಿಮೆಯಾಗದಂತೆ ಶಾಸಕರನ್ನು ಹಿಡಿಟ್ಟುಕೊಳ್ಳಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ.

ಶಾಸಕ ರಾಜಾವೆಂಕಟಪ್ಪ ನಾಯಕ ನಿಧನ: ಕಾಂಗ್ರೆಸ್​ಗೆ 1 ಮತ ಕೊರತೆ

ಕಾಂಗ್ರೆಸ್ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಈ ಮೂಲಕ ಕಾಂಗ್ರೆಸ್​​ ಒಂದು ಮತ ಕಳೆದುಕೊಂಡಂತಾಗಿದೆ. ಈ ಹಿನ್ನೆಲೆಯಲ್ಲಿ ಮೊದಲೇ ಅಡ್ಡಮತದಾನದ ಭೀತಿಯಲ್ಲಿದ್ದ ಕಾಂಗ್ರೆಸ್​​ಗೆ ಮತ್ತೊಂದು ಆಘಾತವಾಗಿದೆ.

ಕಾಂಗ್ರೆಸ್​​ಗೆ ಆತಂಕವೇಕೆ?

ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‌ನ ಎಲ್ಲ 135 ಶಾಸಕರ ಮತದಿಂದ 3 ಸ್ಥಾನ ಗೆಲ್ಲಬಹುದಿತ್ತು. ಶಾಸಕ ರಾಜವೆಂಕಟಪ್ಪ ನಾಯಕ ನಿಧನದಿಂದ ಒಂದು ಮತ ಕೊರತೆ ಎದುರಾಗಿದೆ. ಹೀಗಾಗಿ 3ನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಕಾಂಗ್ರೆಸ್‌ ಕಸರತ್ತು ಶುರುಮಾಡಿದೆ. ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣ್ಣಯ್ಯ ಸೆಳೆಯಲು ‘ಕೈ’ ತಂತ್ರ ಹೂಡುತ್ತಿದೆ.

ಕಾಂಗ್ರೆಸ್ ಶಾಸಕರು ಇಂದೇ ಹೋಟೆಲ್‌ಗೆ ಶಿಫ್ಟ್!

ಕಾಂಗ್ರೆಸ್‌ ತನ್ನೆಲ್ಲಾ ಶಾಸಕರಿಗೂ ಮಾನ್ಯತಾ ಟೆರ್ಕ್‌ಪಾರ್ಕ್‌ನಲ್ಲಿರೋ ಹಿಲ್ಟನ್ ಹೋಟೆಲ್‌ಗೆ ಇಂದೇ ಬಂದು ವಾಸ್ತವ್ಯ ಹೂಡುವಂತೆ ಸೂಚಿಸಿದೆ. ಮಧ್ಯಾಹ್ನ 3 ಗಂಟೆಗೆ ಹೋಟೆಲ್‌ನಲ್ಲೇ ಶಾಸಕಾಂಗ ಸಭೆ ನಡೆಯಲಿದ್ದು ಈ ವೇಳೆ ಎಲ್ಲಾ ಶಾಸಕರು ಹಾಜರಿರಬೇಕೆಂದು ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆ ಹೋಟೆಲ್‌ನಿಂದ ಸೀದಾ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲು ಸೂಚಿಸಲಾಗಿದೆ.

ಬಿಜೆಪಿ-ಜೆಡಿಎಸ್‌ ದೋಸ್ತಿಗಳಿಂದಲೂ ತಂತ್ರಗಾರಿಕೆ ಚುರುಕು

5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲುವಿಗೆ ಜೆಡಿಎಸ್, ಬಿಜೆಪಿ ರಣತಂತ್ರ ಹೆಣೆದಿವೆ. ಬಿಜೆಪಿ ಸದ್ಯಕ್ಕೆ ತನ್ನ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡುತ್ತಿಲ್ಲ. ಬದಲಾಗಿ ನಾಳೆ ಬೆಳಗ್ಗೆ 8ಗಂಟೆಗೆ ವಿಧಾನಸೌಧಕ್ಕೆ ಬರಲು ಸೂಚಿಸಲಾಗಿದೆ. ಅಲ್ಲೇ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಗೆ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕೈಗೊಡುವ ಭೀತಿಯಿದೆ. ಜೆಡಿಎಸ್‌ಗೆ ಶಾಸಕ ಶರಣಗೌಡ ಕುಂದಕೂರ, ದೇವದುರ್ಗ ಶಾಸಕಿ ಕರೆಮ್ಮ ಕೈಗೊಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಬಲಿಗರ ಸಭೆ: ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದಿಷ್ಟು

ಈ ಮಧ್ಯೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಅಡ್ಡಮತದಾನ ಭೀತಿಯಿಂದ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡ್ತಿದೆ ಎಂದಿದ್ದಾರೆ. ಆದ್ರೆ ಸಚಿವ ಎಂ.ಬಿ.ಪಾಟೀಲ್ ಮಾತ್ರ ಅಡ್ಡಮತದಾನ ಮಾಡಲು ತಾಕತ್ತು ಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.

ಒಟ್ಟಿನಲ್ಲಿ ರಾಜ್ಯಸಭೆ ಚುನಾವಣೆ ಕೌತುಕದ ಘಟ್ಟಕ್ಕೆ ತಲುಪಿದೆ. ಯಾರು ಅಡ್ಡಮತದಾನ ಮಾಡಲಿದ್ದಾರೆ? ಮೂರು ಪಕ್ಷಗಳ ಲೆಕ್ಕಾಚಾರ ಏನಾಗಲಿದೆ ಎಂಬುದು ನಾಳೆ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 am, Mon, 26 February 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು