Rajya Sabha Election Result: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ತಲಾ 1 ಸ್ಥಾನ ಪಡೆದ ಮೈತ್ರಿಕೂಟ

Maharashtra Rajya Sabha Election: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಮೂವರು ರಾಜ್ಯಸಭಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದರಿಂದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

Rajya Sabha Election Result: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭರ್ಜರಿ ಜಯ; ತಲಾ 1 ಸ್ಥಾನ ಪಡೆದ ಮೈತ್ರಿಕೂಟ
ಮಹಾರಾಷ್ಟ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ರಾಜ್ಯಸಭಾ ಅಭ್ಯರ್ಥಿಗಳೊಂದಿಗೆ ದೇವೇಂದ್ರ ಫಡ್ನವಿಸ್Image Credit source: Hindustan Times
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 11, 2022 | 9:05 AM

ಮುಂಬೈ: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ವಿಶೇಷವಾಗಿ ಶಿವಸೇನೆ, ಎಸ್​ಸಿಪಿ, ಕಾಂಗ್ರೆಸ್​ ಮೈತ್ರಿ ಸರ್ಕಾರವಿರುವ ಮಹಾರಾಷ್ಟ್ರದಲ್ಲಿ (Maharashtra Rajya Sabha Result) ಬಿಜೆಪಿಯ ಮೂವರು ರಾಜ್ಯಸಭಾ ಅಭ್ಯರ್ಥಿಗಳು ಗೆದ್ದಿದ್ದಾರೆ. ಚುನಾವಣಾ ನಿಯಮ ಉಲ್ಲಂಘನೆಯಾಗಿದೆ ಎಂದು ದೂರುಗಳು ಬಂದಿದ್ದರಿಂದ ಮಹಾರಾಷ್ಟ್ರ, ಹರಿಯಾಣದಲ್ಲಿ ಶುಕ್ರವಾರ ಮತ ಎಣಿಕೆ ವಿಳಂಬವಾಗಿತ್ತು. ನಿನ್ನೆ ಮಧ್ಯರಾತ್ರಿ ಮತ ಎಣಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು. ರಾತ್ರಿಯ ಹೈಡ್ರಾಮಾದ ನಂತರ ಕೇಂದ್ರ ಸಚಿವ ಪಿಯೂಷ್ ಗೋಯಲ್, ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಶಿವಸೇನೆಯ ಸಂಜಯ್ ರಾವತ್, ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್‌ಗರ್ಹಿ, ಬಿಜೆಪಿಯ ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ 3 ಸ್ಥಾನವನ್ನು ಗೆದ್ದಿದ್ದು, ಮೈತ್ರಿಕೂಟ 3 ಸ್ಥಾನಗಳನ್ನು ಪಡೆದಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಮೂವರು ರಾಜ್ಯಸಭಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದರಿಂದ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದ್ದು, ಶಿವಸೇನೆ ವಿರುದ್ಧ ನೇರ ಹಣಾಹಣಿಯಲ್ಲಿ ಬಿಜೆಪಿ ಮೂರು ಸ್ಥಾನವನ್ನು ಗೆದ್ದುಕೊಂಡಿದೆ. ಇದರೊಂದಿಗೆ, ರಾಜ್ಯದಲ್ಲಿನ ಆರು ರಾಜ್ಯಸಭಾ ಸ್ಥಾನಗಳಲ್ಲಿ ಬಿಜೆಪಿ ಮತ್ತು ಶಿವಸೇನೆ, ಕಾಂಗ್ರೆಸ್, ಎನ್​ಸಿಪಿ ಮೈತ್ರಿಕೂಟವು ತಲಾ ಮೂರು ಸ್ಥಾನಗಳನ್ನು ಗೆದ್ದುಕೊಂಡಿವೆ.

ಇದನ್ನೂ ಓದಿ
Image
ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು
Image
Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
Image
Rajya Sabha Elections 2022 : ಅವಿರೋಧವಾಗಿ ಗೆದ್ದಿದ್ದರಿಂದ 41 ಸ್ಥಾನಗಳು ಭರ್ತಿ

ಮಹಾರಾಷ್ಟ್ರದ ರಾಜ್ಯಸಭಾ ಚುನಾವಣೆಯ ಈ ಫಲಿತಾಂಶವು ರಾಜ್ಯದಲ್ಲಿ ಮುಂಬರುವ MLC ಮತ್ತು ನಾಗರಿಕ ಚುನಾವಣೆಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆಯಿದೆ. “ಚುನಾವಣೆಗಳು ಕೇವಲ ಹೋರಾಟಕ್ಕಾಗಿ ಅಲ್ಲ. ಗೆಲುವಿಗಾಗಿ ನಾವು ಸ್ಪರ್ಧಿಸುತ್ತೇವೆ. ಜೈ ಮಹಾರಾಷ್ಟ್ರ,” ಎಂದು ಬಿಜೆಪಿಯ ದೇವೇಂದ್ರ ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ರಾಜ್ಯಸಭೆಗೆ ಒಮ್ಮತದ ಅಭ್ಯರ್ಥಿಗಳನ್ನು ಹೊಂದಲು ನಿರಾಕರಿಸಿದ್ದರಿಂದ 23 ವರ್ಷಗಳ ನಂತರ ಮಹಾರಾಷ್ಟ್ರ ರಾಜ್ಯದಲ್ಲಿ ಚುನಾವಣೆ ನಡೆಸಲಾಯಿತು. ಬಂಧಿತ ಸಚಿವ ನವಾಬ್ ಮಲಿಕ್ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಮತದಾನಕ್ಕಾಗಿ ನ್ಯಾಯಾಲಯದಿಂದ ಜಾಮೀನು ಸಿಗದ ಕಾರಣ ಮೈತ್ರಿಕೂಡ ಆರಂಭದಲ್ಲಿ ಹಿನ್ನಡೆ ಅನುಭವಿಸಿತ್ತು. ಬಿಜೆಪಿ ಮತ್ತು ಆಡಳಿತಾರೂಢ ಮೈತ್ರಿಕೂಟದ ಅಡ್ಡ ಮತದಾನ ಮತ್ತು ನಿಯಮಗಳ ಉಲ್ಲಂಘನೆಯ ದೂರುಗಳ ನಡುವೆಯೇ ಮಹಾರಾಷ್ಟ್ರದಲ್ಲಿ 8 ಗಂಟೆ ತಡವಾಗಿ ಮತ ಎಣಿಕೆ ಪ್ರಾರಂಭವಾಯಿತು.

ನಿನ್ನೆ ನಡೆದ ವಿವಿಧ ರಾಜ್ಯಗಳ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. 15 ರಾಜ್ಯಗಳ 57 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಬೇಕಿತ್ತು. ಆದರೆ 11 ರಾಜ್ಯಗಳ ಒಟ್ಟು 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಹೀಗಾಗಿ, ಉಳಿದ 16 ಸ್ಥಾನಗಳಿಗೆ ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಚುನಾವಣೆ ನಡೆಸಲಾಯಿತು. ಶುಕ್ರವಾರ ನಡೆದ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 3, ಕಾಂಗ್ರೆಸ್ 1 ಸ್ಥಾನ ಗೆದ್ದಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗಳಿಸಿದೆ. ಹರಿಯಾಣದಲ್ಲಿ ಬಿಜೆಪಿ ಮತ್ತು ಪಕ್ಷೇತರ ತಲಾ 1 ಸ್ಥಾನ ಪಡೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 3 ಸ್ಥಾನ, ಎನ್​ಸಿಪಿ, ಶಿವಸೇನಾ ಮತ್ತು ಕಾಂಗ್ರೆಸ್ ತಲಾ 1 ಸ್ಥಾನ ಗೆದ್ದಿವೆ. ಈ ಮೂಲಕ 16 ಸ್ಥಾನಗಳಲ್ಲಿ ಬಿಜೆಪಿ 8 ಸ್ಥಾನಗಳಲ್ಲಿ ಜಯಿಸಿ ಮೇಲುಗೈ ಸಾಧಿಸಿದೆ.  ಈ ಮೂಲಕ ರಾಜ್ಯಸಭೆಯ ಒಟ್ಟು 57 ಸ್ಥಾನಗಳ ಪೈಕಿ ಬಿಜೆಪಿ 25 ಸ್ಥಾನ ಪಡೆದು ಮುನ್ನಡೆ ಸಾಧಿಸಿದೆ. ಕಾಂಗ್ರೆಸ್​ 15 ಸ್ಥಾನ ಹಾಗೂ ಇತರೆ 17 ಸ್ಥಾನ ಗಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 am, Sat, 11 June 22

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ