Rajya Sabha Polls 2022: ರಾಜಸ್ಥಾನದಲ್ಲಿ ಆಪರೇಷನ್ ಕಮಲದ ಭೀತಿ; ಕಾಂಗ್ರೆಸ್‌ನ ಶಾಸಕರು ಇಂದು ರೆಸಾರ್ಟ್‌ಗೆ ಶಿಫ್ಟ್
Rajasthan Politics: ಜೂನ್ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಸ್ಥಾನದಲ್ಲಿರುವ ತನ್ನ ಶಾಸಕರನ್ನು ಉದಯಪುರದ ರೆಸಾರ್ಟ್‌ಗೆ ಸ್ಥಳಾಂತರಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಜೈಪುರ: ರಾಜಸ್ಥಾನದಲ್ಲಿ ಸದ್ಯದಲ್ಲೇ ರಾಜ್ಯಸಭೆ ಚುನಾವಣೆ (Rajya Sabha Election) ನಡೆಯಲಿರುವುದರಿಂದ ಕಾಂಗ್ರೆಸ್‌ಗೆ ಆಪರೇಷನ್ ಕಮಲದ (Operation Kamala) ಭೀತಿ ಎದುರಾಗಿದೆ. ಹೀಗಾಗಿ, ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಕಮಲದ ಭೀತಿ ಎದುರಾಗಿರುವುದರಿಂದ ಜೂನ್ 10ರಂದು ನಡೆಯುವ ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ನಿಂದ (Congress) ಉದಯಪುರದ ರೆಸಾರ್ಟ್ವೊಂದರಲ್ಲಿ 40 ರೂಮ್ಗಳನ್ನು ಬುಕಿಂಗ್ ಮಾಡಲಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಶಾಸಕರನ್ನು ಖರೀದಿಸುವ ಭೀತಿ ಇರುವುದರಿಂದ ರಾಜಸ್ಥಾನ (Rajasthan Politics) ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್ ಮಾಡುತ್ತಿದ್ದಾರೆ.
ಜೂನ್ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಸ್ಥಾನದಲ್ಲಿರುವ ತನ್ನ ಶಾಸಕರನ್ನು ಉದಯಪುರದ ರೆಸಾರ್ಟ್‌ಗೆ ಸ್ಥಳಾಂತರಿಸಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಶಾಸಕರನ್ನು ಉದಯಪುರದ ಅರಾವಳಿ ರೆಸಾರ್ಟ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಜೈಪುರದ ಕ್ಲಾರ್ಕ್ ಹೋಟೆಲ್‌ನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರ ಮುಗಿದ ನಂತರ ಅವರನ್ನು ಇಂದು ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗುವುದು. ಅಲ್ಲದೆ, ಸ್ವತಂತ್ರ ಶಾಸಕರು ಮತ್ತು ಇತರ ಪಕ್ಷಗಳಲ್ಲಿರುವ ಕಾಂಗ್ರೆಸ್ ಬೆಂಬಲಿಗ ಶಾಸಕರನ್ನು ಕೂಡ ಉದಯಪುರಕ್ಕೆ ಸ್ಥಳಾಂತರಿಸಲಾಗುವುದು.
ಇದನ್ನೂ ಓದಿ: ರಾಜಸ್ಥಾನ: ಬಿಜೆಪಿ ಬೆಂಬಲದೊಂದಿಗೆ ರಾಜ್ಯಸಭಾ ಚುನಾವಣೆ ಕಣಕ್ಕಿಳಿದ ಮಾಧ್ಯಮ ಉದ್ಯಮಿ ಸುಭಾಷ್ ಚಂದ್ರ
ಇದಕ್ಕಾಗಿ ಜೈಸಲ್ಮೇರ್‌ನ ಸೂರ್ಯಗಢದಲ್ಲಿ 40 ಕೊಠಡಿಗಳನ್ನು ಬುಕ್ ಮಾಡಲಾಗಿದೆ. ಹರಿಯಾಣ ಕಾಂಗ್ರೆಸ್ ಶಾಸಕರನ್ನೂ ಜೈಪುರಕ್ಕೆ ಕರೆದೊಯ್ಯುವ ಸಿದ್ಧತೆ ನಡೆಸಲಾಗುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಹರಿಯಾಣದಿಂದ ಸ್ಪರ್ಧಿಸುತ್ತಿದ್ದಾರೆ.
ರಾಜಸ್ಥಾನದಲ್ಲಿ ಚುನಾವಣಾ ಭೀತಿ: ರಾಜಸ್ಥಾನದ ವಿಧಾನಸಭೆಯಲ್ಲಿ 108 ಶಾಸಕರನ್ನು ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಜೂನ್ 10ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳಲ್ಲಿ ಎರಡನ್ನು ಗೆಲ್ಲಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 2 ದಿನಗಳ ಹಿಂದೆ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ರಾಜಸ್ಥಾನದ 13 ಸ್ವತಂತ್ರ ಶಾಸಕರ ಪೈಕಿ 10 ಮಂದಿಯೊಂದಿಗೆ ಸಭೆ ನಡೆಸಿದ್ದರು.
ಬಿಜೆಪಿ ಬೆಂಬಲಿತ ಮಾಧ್ಯಮ ಉದ್ಯಮಿ ಮತ್ತು ಎಸ್ಸೆಲ್ ಗ್ರೂಪ್ ಮುಖ್ಯಸ್ಥ ಸುಭಾಷ್ ಚಂದ್ರ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್‌ನ ಮೂರನೇ ಸ್ಥಾನವನ್ನು ಗೆಲ್ಲುವ ಅವಕಾಶವನ್ನು ಕಸಿದುಕೊಳ್ಳಬಹುದು ಮತ್ತು ನಾಲ್ಕನೇ ಸ್ಥಾನದಲ್ಲಿ ಸ್ಪರ್ಧೆಯನ್ನು ಸೃಷ್ಟಿಸಿದೆ. ಇಬ್ಬರು ಅಭ್ಯರ್ಥಿಗಳಿಗೆ ಮತ ಹಾಕಿದ ನಂತರ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್‌ಗೆ ಇನ್ನೂ 15 ಮತಗಳ ಅಗತ್ಯವಿದೆ. ರಾಜಸ್ಥಾನ ವಿಧಾನಸಭೆಯಲ್ಲಿ 13 ಸ್ವತಂತ್ರರು ಮತ್ತು 8 ಸಣ್ಣ ಪಕ್ಷಗಳ ಶಾಸಕರಿದ್ದಾರೆ. ಕಾಂಗ್ರೆಸ್ 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಹೊಂದಿದೆ. ಕಾಂಗ್ರೆಸ್‌ಗೆ ತನ್ನ ಮೂವರು ಅಭ್ಯರ್ಥಿಗಳು ರಾಜ್ಯಸಭೆಗೆ ಚುನಾಯಿತರಾಗುವುದನ್ನು ಖಚಿತಪಡಿಸಿಕೊಳ್ಳಲು ಸ್ವತಂತ್ರರು ಮತ್ತು ಇತರರ ಬೆಂಬಲದ ಅಗತ್ಯವಿದೆ.
ಕಾಂಗ್ರೆಸ್ ರಾಜಸ್ಥಾನದಿಂದ ಮುಕುಲ್ ವಾಸ್ನಿಕ್, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಪ್ರಮೋದ್ ತಿವಾರಿ ಅವರನ್ನು ಕಣಕ್ಕಿಳಿಸಿದೆ. ಆದರೆ, ಮಾಧ್ಯಮ ದೊರೆ ಸುಭಾಷ್‌ಚಂದ್ರ ಅವರ ಪ್ರವೇಶದಿಂದ ಸ್ಪರ್ಧೆ ಹೆಚ್ಚಾಗಿದೆ. ಅವರು ರಾಜಸ್ಥಾನದಿಂದ 4 ರಾಜ್ಯಸಭಾ ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ