ರಾಜ್ಯಸಭಾ ಚುನಾವಣೆ: ನಾನು ಕಾಂಗ್ರೆಸ್​​ಗೆ ವೋಟ್ ಮಾಡಿದ್ದು, ಐ ಲವ್​​ ಇಟ್​​ ಎಂದ ಜೆಡಿಎಸ್ ನಾಯಕ ಶ್ರೀನಿವಾಸಗೌಡ

Rajya Sabha Election ಜೆಡಿಎಸ್ ಶಾಸಕರು ತಮ್ಮ ಪಕ್ಷಕ್ಕೆ ಮತ ಹಾಕದೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿಯವರ ಟೀಕೆಗಳ ನಡುವೆಯೇ ಜೆಡಿಎಸ್ ಶಾಸಕ ತಾನು ಕಾಂಗ್ರೆಸ್​​ಗೆ ವೋಟ್ ಹಾಕಿರುವುದಾಗಿ ಸುದ್ದಿಗಾರರ ಮುಂದೆ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆ: ನಾನು ಕಾಂಗ್ರೆಸ್​​ಗೆ ವೋಟ್ ಮಾಡಿದ್ದು, ಐ ಲವ್​​ ಇಟ್​​ ಎಂದ ಜೆಡಿಎಸ್ ನಾಯಕ ಶ್ರೀನಿವಾಸಗೌಡ
ಶ್ರೀನಿವಾಸಗೌಡ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 10, 2022 | 4:45 PM

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ(Rajya Sabha polls) ಕಾಂಗ್ರೆಸ್ (Congress) ಪಕ್ಷಕ್ಕೆ ಮತ ಹಾಕಿದ್ದೇನೆ ಎಂದು ಕೋಲಾರದ ಜೆಡಿಎಸ್ ಶಾಸಕ ಕೆ ಶ್ರೀನಿವಾಸಗೌಡ (K Srinivasa Gowda) ಹೇಳಿದ್ದಾರೆ. ಜೆಡಿಎಸ್ ಶಾಸಕರು ತಮ್ಮ ಪಕ್ಷಕ್ಕೆ ಮತ ಹಾಕದೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿಯವರ (H D Kumaraswamy)ಟೀಕೆಗಳ ನಡುವೆಯೇ ಜೆಡಿಎಸ್ ಶಾಸಕ ತಾನು ಕಾಂಗ್ರೆಸ್​​ಗೆ ವೋಟ್ ಹಾಕಿರುವುದಾಗಿ ಸುದ್ದಿಗಾರರ ಮುಂದೆ ಹೇಳಿದ್ದಾರೆ. ನಾನು ಕಾಂಗ್ರೆಸ್ ಗೆ ಮತಹಾಕಿದೆ.ಯಾಕೆಂದರೆ ನನಗದು ಇಷ್ಟ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ. ಇವರ ಜತೆಗೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಕೂಡಾ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. 224 ಸ್ಥಾನಗಳನ್ನು ಹೊಂದಿರುವ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 70 ಶಾಸಕರನ್ನು ಹೊಂದಿದೆ. ಬಿಜೆಪಿ 121 ಸ್ಥಾನಗಳನ್ನು  ಮತ್ತು ಜೆಡಿಎಸ್ (ಎಸ್) 32 ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ 4 ಸ್ಥಾನಗಳಲ್ಲಿ ಎರಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಲು ಸಜ್ಜಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಇದು ನಿರ್ಣಾಯಕವಾಗಲಿದೆ. ಕಾಂಗ್ರೆಸ್ ಮಾಜಿ ಪರಿಸರ ಸಚಿವ ಜೈರಾಮ್ ರಮೇಶ್ ಮತ್ತು ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಕರ್ನಾಟಕದ ಎಂಎಲ್ ಲೆಹರ್ ಸಿಂಗ್ ಸಿರೊಯ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್​​ನಿಂದ ಡಿ.ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

ಗುರುವಾರ ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ಪತ್ರವೊಂದನ್ನು ಹಂಚಿಕೊಂಡಿದ್ದು, ಜೆಡಿಎಸ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೋರಿದ್ದಾರೆ. ಅದೇ ವೇಳೆ ಕುಮಾರಸ್ವಾಮಿ ಅವರು ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಬೇಕು ಎಂದು ಟ್ವೀಟ್ ಮಾಡಿದ್ದರು.

ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಸಿದ್ದರಾಮಯ್ಯನವರು ‘ಕುದುರೆ ವ್ಯಾಪಾರ’ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. “ಇಂದು, ಅವರು (ಸಿದ್ದರಾಮಯ್ಯ) ಅವರು ನನ್ನ ಶಾಸಕರಿಗೆ ಪತ್ರ ಬರೆದಿಲ್ಲ ಎಂದು ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಿಂದ ಪತ್ರವನ್ನು ಟ್ವೀಟ್ ಮಾಡಿದ್ದಾರೆ. ಈಗ, ಅವರು ನಿನ್ನೆ ಹೇಳಿದ್ದನ್ನು ನಿರಾಕರಿಸುತ್ತಿದ್ದಾರೆ. ಇದು ಅವರ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ರಾಜ್ಯದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 10 June 22

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ