ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು

ರಾಜ್ಯಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ ಬಿಜೆಪಿಯನ್ನು ಹೊರಗಿಡಲು​​ ಶತಾಯಗತಾಯ ಪ್ರಯತ್ನಿಸುತ್ತಿವೆ.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಮತ್ತು ಜೆಡಿಎಸ್​ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು
ಸಿದ್ದರಾಮಯ್ಯ ಕುಮಾರಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 08, 2022 | 2:50 PM

ಬೆಂಗಳೂರು: ರಾಜ್ಯಸಭೆ ಚುನಾವಣೆ (Rajyasbha Election) ಹತ್ತಿರವಾಗುತ್ತಿದಂತೆ ರಾಜಕೀಯದಲ್ಲಿ ಹೊಸ ಹೊಸ ಲೆಕ್ಕಾಚಾರಗಳು ಶುರುವಾಗಿದ್ದು, ರಾಜ್ಯಸಭೆ ಚುನಾವಣೇಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್​​ (JDS) ಬಿಜೆಪಿಯನ್ನು ಹೊರಗಿಡಲು  ಶತಾಯಗತಾಯ ಪ್ರಯತ್ನಿಸುತ್ತಿವೆ. ಈ ಮಧ್ಯೆ ನಿನ್ನೆ (ಮೇ 8)  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumarswamy) ಜೆಡಿಎಸ್​ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್​ಗೆ​ಕೇಳಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಯನ್ನು  ಮಣಿಸುವ  ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.

ಆದರೆ ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ (Siddaramaiah) ನಾವು ಯಾವಾಗಲೂ ಕೋಮುವಾದಿ ಬಿಜೆಪಿಯನ್ನು ವಿರೋಧಿಸುತ್ತೇವೆ. ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ. ನಾವೇ ಕೋಮುವಾದಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು. ಜೆಡಿಎಸ್​ಗಿಂತ ಮೊದಲೇ ನಾವು ಎರಡನೇ ಅಭ್ಯರ್ಥಿಯನ್ನು ಹಾಕಿದ್ದೆವು, ನಮ್ಮ ಅಭ್ಯರ್ಥಿ ಹಾಕಿದ ತಿಂಗಳ ಬಳಿಕ ಅಭ್ಯರ್ಥಿಯನ್ನು ಹಾಕಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನು ಓದಿ: ಕೋಮುವಾದಿ ಬಿಜೆಪಿಯನ್ನ ಸೋಲಿಸಲು ಜೆಡಿಎಸ್ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಕುಮಾರಸ್ವಾಮಿ ಹೊಸ ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಸೊಪ್ಪು ಹಾಕುತ್ತಿಲ್ಲ.  ಒಂದು ವೇಳೆ ಕಾಂಗ್ರೆಸ್​​ ಹೈಕಮಾಂಡ ಜೆಡಿಎಸ್​​ ಆಫರ್​ ಒಪ್ಪಿಕೊಂಡು  ಜೆಡಿಎಸ್​​ಗೆ ಬೆಂಬಲ ನೀಡಿದರೆ ಸಿದ್ದರಾಮಯ್ಯ ಬಣದ ಲೆಕ್ಕಾಚಾರ ಉಲ್ಟಾ ಆಗಲಿದೆ. ಪಂಚರಾಜ್ಯ ಮತ್ತು ಸತತವಾಗಿ ಸೋಲನ್ನೆ ಕಂಡಿರುವ ಕಾಂಗ್ರೆಸ್​ ಹೇಗಾದರು ಮಾಡಿ ಬಿಜೆಪಿಯನ್ನು ಹೊರಗಿಡಲು ಪ್ರಯತ್ನಿಸುತ್ತಿದೆ. ಈ ಸಂಬಂಧ ಜೆಡಿಎಸ್​ ಕೊಟ್ಟ ಆಫರ್​​ ಒಪ್ಪಿಕೊಂಡರು ಆಶ್ಚರ್ಯ ಪಡಬೇಕಾಗಿಲ್ಲ.

ಆದರೆ ಇಲ್ಲಿ ಸಿದ್ದರಾಮಯ್ಯನವರಿಗೆ ಸಂಕಷ್ಟ ಎದುರಾಗುವ ಸಾದ್ಯತೆ ಇದೆ.  ಅದೇನೆಂದರೆ  ಜೆಡಿಎಸ್​​ ಈಗ ಕಾಂಗ್ರೆಸ್​ಗೆ ಬೆಂಬಲ್​ ನೀಡಿದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜೆಡಿಎಸ್​​ ಬೆಂಬಲಿಸಲು ನಿರ್ಧರಿಸಿದೆ. ಒಂದು ವೇಳೆ ಹೀಗೆನಾದರು ಆದರೆ ಮುಂದಿನಗಳಲ್ಲಿ ಜೆಡಿಎಸ್ ಕಾಂಗ್ರೆಸ್​ ಮುಂದೆ ಷರತ್ತುಗಳನ್ನು ಇಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ರಹಿತಾದ ಸರ್ಕಾರದ ಷರತ್ತು ವಿಧಿಸುವ ಸಾಧ್ಯತೆ ಇದೆ.  ಬಿಜೆಪಿ ಹೊರಗಡಲು ಯಾವ ನಿರ್ಧಾರಕ್ಕೂ ಸೈ ಎನ್ನಬೇಕಾಗಿರುವ ಸ್ಥಿತಿಯಲ್ಲಿ ಕಾಂಗ್ರೆಸ್​ಗೆ ಇದೆ. ಸಿದ್ದರಾಮಯ್ಯ ರನ್ನ ತಟಸ್ಥ ಮಾಡಿದರೆ ಕೈ ಪಡೆಯಲ್ಲೇ ಸಂಕಷ್ಟ ಎದುರಾಗುತ್ತದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಚುನಾವಣೆಯಿಂದಲೇ ಸಿದ್ದರಾಮಯ್ಯ ದೂರಸರಿವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಕಾಂಗ್ರೆಸ್ ಗೆ ಹೆಚ್ಚಿನ ನಷ್ಟವಾಗುತ್ತದೆ.

ಇದನ್ನು ಓದಿ: ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ; ತಮಿಳುನಾಡು ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ

ಕಾಂಗ್ರೆಸ್ ಜೊತೆ ಮೈತ್ರಿ ಆಫರ್ ಇಟ್ಟಿರುವುದು ಸತ್ಯವಾಗಿದ್ದರು ಡಿ ಕೆ ಶಿವಕುಮಾರ್ ಹೆಸರು ಎಲ್ಲೂ ಉಲ್ಲೇಖ ಇಲ್ಲ.  ಈ ಹಿಂದೆ ಹುಬ್ಬಳ್ಳಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸಿ ಮುಂದೆ ಸಂದರ್ಭ ಬಂದಾಗ ನೋಡೋಣ ಎಂದು ಹೆಚ್ ಡಿ ಕೆ ಹೇಳಿದರು. ಚುನಾವಣೋತ್ತರ ಮೈತ್ರಿಯಾದರೆ ಅಳೆದು ತೂಗಿ ಸಿದ್ದರಾಮಯ್ಯ ರ ಮನವೊಲಿಸಬಹುದು ಎಂಬ ಲೆಕ್ಕಾಚಾರ ಮುಂದೆಬರಲಿದೆ. ಆದರೂ ಈ ಮೈತ್ರಿ ಮಾತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯದಲ್ಲಿ ಹೊಸ ಸಂಭಾವ್ಯತೆಯನ್ನ ಸೃಷ್ಠಿಸಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ