ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ

ಖಾತೆ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಹೆಚ್ಚುವರಿ ಖಾತೆ ನೀಡಲಾಗಿದೆ. ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಮುನಿಸಿಕೊಂಡಿದ್ದ ನೂತನ ಸಚಿವ ರಾಮಲಿಂಗಾರೆಡ್ಡಿ ಮೊದಲ ಪ್ರತಿಕ್ರಿಯೆ
ರಾಮಲಿಂಗಾರೆಡ್ಡಿ
Follow us
|

Updated on:May 29, 2023 | 10:22 AM

ಬೆಂಗಳೂರು: ಸಾರಿಗೆ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಸಚಿವ ರಾಮಲಿಂಗಾರೆಡ್ಡಿ(ramalinga reddy) ಅವರನ್ನು ಮನವೊಲಿಸುವಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಇನ್ನು ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆ ಮುಜರಾಯಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.  ಈ ಬಗ್ಗೆ ಮಾಧ್ಯಮಗಳಿಗೆ ಸ್ವತಃ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ಸಮಾಧಾನ,ಅಸಮಾಧಾನ ಪ್ರಶ್ನೆ ಇಲ್ಲ. ಯಾವ ಖಾತೆ ಕೊಟ್ಟರು ಕೆಲಸ ಮಾಡಬೇಕು. ಸಚಿವ ಸ್ಥಾನ, ಖಾತೆ ಎನ್ನುವುದು ಶಾಶ್ವತ ಅಲ್ಲ. ಮಂತ್ರಿಗಳು ಕೂಡ ಬದಲಾಗುತ್ತಾರೆ. ಖಾತೆ ಕೂಡ ಬದಲಾಗುತ್ತೆ. ಸಚಿವ ಸ್ಥಾನಕ್ಕೆ ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಬೇಕಿದ್ರೆ ಸಿದ್ದರಾಮಯ್ಯರವರನ್ನೇ ಕೇಳಿ. ಈ ಹಿಂದೆ ನಾಲ್ಕು ತಿಂಗಳು ಸಾರಿಗೆ ಇಲಾಖೆಯ ಸಚಿವನಾಗಿದ್ದೆ. ಹಲವು ಪ್ರಶಸ್ತಿ ನಮ್ಮ ಸಂಸ್ಥೆಗೆ ಬಂದಿದ್ದವು ಎಂದು ಹೇಳಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ, ಮುನಿಸಿಕೊಂಡ ರಾಮಲಿಂಗಾರೆಡ್ಡಿ ಮನವೊಲಿಕೆಗೆ ಡಿಕೆ ಬ್ರದರ್ಸ್ ಕಸರತ್ತು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ತೀರ್ಮಾನಿಸಲಾಗಿದೆ. ಎಷ್ಟು ಜನ ಪ್ರಯಾಣ ಮಾಡುತ್ತಾರೆ ಎನ್ನುವುದಕ್ಕೆ ಸರ್ಕಾರ ಕೆಆರ್​ಟಿ‌ಸಿಗೆ ಹಣ ಕೊಡಬೇಕು. ಸೋಮವಾರ ಸಭೆ ಇದ್ದು, ಎಲ್ಲಾ ತೀರ್ಮಾನಿಸಲಾಗುತ್ತೆ/ ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನಿಂದ ಐದು ಗ್ಯಾರಂಟಿ ಜಾರಿ ಬಗ್ಗೆ ಮಾತನಾಡಿ, ಮಂತ್ರಿಮಂಡಲದಲ್ಲಿ ಏನು ತೀರ್ಮಾನ ಆಗತ್ತೋ ಅದೇ ಫೈನಲ್. ಗೃಹಿಣಿಯರಿಗೆ 2 ಸಾವಿರ ಕೊಡೋದಾಗಿ ಹೇಳಿದ್ದಾರೆ. ಕೆಲವರು ಅಕೌಂಟ್ ಹೊಂದಿದ್ದರೆ. ಇನ್ನೂ ಅಕೌಂಟ್ ಇಲ್ಲದವರಿಗೆ ಅಕೌಂಟ್ ಮಾಡಿಸಬೇಕು. ವಿರೋಧ ಪಕ್ಷದವರಿಗೆ ಹೊಟ್ಟೆ ಉರಿ. ಅದಕ್ಕಾಗಿ ಹೀಗೆ ಮಾಡ್ತಿದ್ದಾರೆ. ಬಿಜೆಪಿ ಅನ್ನೋದು ಬುರುಡೆ ಪಕ್ಷ. 2018 ರಲ್ಲಿ 600 ಆಶ್ವಾಸನೆ ಕೊಟ್ಟಿದ್ದರು. ಆದರೆ ಅದನ್ನ ಈಡೇರಿಸಲು ಸಾಧ್ಯವಾಗಿಲ್ಲ. ವಿರೋಧ ಪಕ್ಷದವರು ಕಷ್ಟ ಪಡೋದು ಬೇಕಿಲ್ಲ. ನಾವು ನಮ್ಮ ಗ್ಯಾರಂಟಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ದರು. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಮೊದಲು ಅದನ್ನ ಈಡೇರಿಸಲಿ ಎಂದು ರಾಮಲಿಂಗಾರೆಡ್ಡಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Published On - 9:29 am, Mon, 29 May 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ