ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ

ಕರ್ನಾಟಕ ಬಿಜೆಪಿಯಲ್ಲಿನ ಬಣದ ಜಗಳ ಮುಂದುವರೆದಿದ್ದು, ಯತ್ನಾಳ್ ಮತ್ತು ವಿಜಯೇಂದ್ರ ತಂಡದ ಭಿನ್ನಾಭಿಪ್ರಾಯವು ಪಕ್ಷದಲ್ಲಿ ಭಿನ್ನಮತವನ್ನು ಉಂಟುಮಾಡಿದೆ. ಸದ್ಯ ಈ ವಿಚಾರವಾಗಿ ಹೆಚ್‌.ಡಿ. ಕುಮಾರಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಒಲ್ಲೆ ಎಂದು ಹೇಳಿದ್ದಾರೆ. ಆ ಮೂಲಕ ಆಂತರಿಕ ಜಗಳಕ್ಕೆ ಕೈಹಾಕೋದು ಬೇಡವೆಂದಿದ್ದಾರೆ.

ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಹೆಚ್​ಡಿಕೆ
ದೆಹಲಿಯಲ್ಲಿ ಕುಮಾರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ: ಬಿಜೆಪಿ ಭಿನ್ನಮತ ಚರ್ಚೆಗೆ ಒಲ್ಲೆ ಎಂದ ಕುಮಾರಸ್ವಾಮಿ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jan 11, 2025 | 3:10 PM

ಬೆಂಗಳೂರು, ಜನವರಿ 11: ಬಿಜೆಪಿಯಲ್ಲಿನ (BJP) ಬಣ ಬಡಿದಾಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿಚಾರ ಹೈಕಮಾಂಡ್​ ಅಂಗಳಕ್ಕೂ ಹೋಗಿತ್ತು. ಆದರೂ ಇದು ಮುಂದುವರೆದಿದೆ. ಮೇಲಿಂದ ಎಲ್ಲವೂ ಸರಿ ಇದೆ ಅಂತಾ ಕಾಣಿಸಿದರೆ, ನಾಯಕರ ಹೇಳಿಕೆಗಳು, ನಡೆ ಮತ್ತೆ ಬಣದ ಬಡಿದಾಟಕ್ಕೆ ಕಾರಣವಾಗುತ್ತಿದೆ. ಶಾಸಕ ಯತ್ನಾಳ್​ ಮತ್ತು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಣ ಬಡಿದಾಟದಿಂದ ಪಕ್ಷದಲ್ಲಿ ಭಿನ್ನಮತ ಉಂಟಾಗಿದೆ. ಹೀಗಾಗಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಈ ಭಿನ್ನಮತ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಯನ್ನು ಶಾಸಕ ರಮೇಶ್ ಜಾರಕಿಹೊಳಿ ಮತ್ತು ತಂಡ ಭೇಟಿ ಮಾಡಿದ್ದು, ಈ ವೇಳೆ ರಾಜ್ಯ ಬಿಜೆಪಿ ಭಿನ್ನಮತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಭಿನ್ನಮತ ವಿಚಾರದ ಬಗ್ಗೆ ಬಿಜೆಪಿ ಹೈಕಮಾಂಡ್​ ಜೊತೆ ಮಾತಾಡುವಂತೆ ಮನವಿ ಮಾಡಿದ್ದಾರೆ. ಆದರೆ ರಾಜ್ಯ ಬಿಜೆಪಿ ಭಿನ್ನಮತದ ಚರ್ಚೆ ನಡೆಸಲು ಹೆಚ್​ಡಿ ಕುಮಾರಸ್ವಾಮಿ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು

ಸಲಹೆ ನೀಡಬೇಕಿದ್ದರೆ ಪಕ್ಷದ ಅಧ್ಯಕ್ಷ ವಿಜಯೇಂದ್ರಗೆ ಹೇಳೋಣ ಅಥವಾ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸೋಣ, ಆದರೆ ಆಂತರಿಕ ಜಗಳದ ಬಗ್ಗೆ ಚರ್ಚೆ ಬೇಡ ಎಂದಿದ್ದಾರೆ. ಆ ಮೂಲಕ ಬಿಜೆಪಿ ಆಂತರಿಕ ಜಗಳಕ್ಕೆ ಕೈಹಾಕೋದು ಬೇಡವೆಂದು ಹೆಚ್​​ಡಿ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

ಸದ್ಯ ಬಿಜೆಪಿಯಲ್ಲಿ ಬಣ ಕಿಚ್ಚು ಬೂದಿ ಮುಚ್ಚಿದ ಕೆಂಡವಾಗಿದೆ. ಎದುರಾಳಿಗೆ ಡೋಂಟ್‌ಕೇರ್ ಎಂದಿರುವ ಬಿ.ವೈ ವಿಜಯೇಂದ್ರ, ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ಸಭೆ ನಡೆಸಿದ ಬಿ.ವೈ ವಿಜಯೇಂದ್ರ ಸೋತವರ ವಿಶ್ವಾಸಗಳಿಸುವ ಪ್ರಯತ್ನ ಮಾಡಿದ್ದಾರೆ. ಇದೇ ಸಭೆಯಲ್ಲಿ ವಿಜಯೇಂದ್ರ ಪರ ಬ್ಯಾಟ್ ಬೀಸಿದ ಸೋತ ನಾಯಕರು, ಯತ್ನಾಳ್ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಬಣ ಕಿತ್ತಾಟ.. ವಿಜಯೇಂದ್ರ ಪರ ಸೋತವರ ಬ್ಯಾಟಿಂಗ್, ಸಭೆಯಲ್ಲಿ ಏನೇನಾಯ್ತು?

ಅದರಲ್ಲೂ ಮಾಜಿ ಸಚಿವ ರೇಣುಕಾಚಾರ್ಯ, ಯಡಿಯೂರಪ್ಪೋತ್ಸವವನ್ನ ಮಾಡೇ ಮಾಡುತ್ತೇವೆ ಅಂತಾ ಕಡ್ಡಿ ಮುರಿದಂತೆ ಹೇಳಿದ್ದರು. ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಾಗಿಲ್ಲ. ನಾವೇ ಹಣ ಹಾಕುತ್ತೇವೆ ಎಂದಿದ್ದಾರೆ. ಪರ್ಯಾಯ ನಾಯಕತ್ವವಿಲ್ಲ. ವಿಜಯೇಂದ್ರ ನೇತೃತ್ವದಲ್ಲೇ ಚುನಾವಣೆಗೆ ಹೋಗಬೇಕು ಎಂದು ಹೇಳುವ ಮೂಲಕ ಯತ್ನಾಳ್ ಬಣಕ್ಕೆ ಸಂದೇಶ ರವಾಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Sat, 11 January 25

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ