ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? – ಸಿದ್ದರಾಮಯ್ಯ

Ramesh Jarkiholi: ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಚಲೋ ಎಂದಿರಿವ ವಿಚಾರದ ಬಗ್ಗೆ ಮಾತನಾಡಿ, ಆತ ಸತ್ಯ ಹೇಳಿದ್ದಾನೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ರಮೇಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲಿ, ನಾವು ಮೇಟಿಯಿಂದ ರಾಜೀನಾಮೆ ಕೊಡಿಸಿರಲಿಲ್ವಾ? - ಸಿದ್ದರಾಮಯ್ಯ
ರಮೇಶ್​ ಜಾರಕಿಹೊಳಿ ಮತ್ತು ಸಿದ್ದರಾಮಯ್ಯ
Follow us
Skanda
|

Updated on: Mar 03, 2021 | 12:54 PM

ರಮೇಶ್​ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾನ‌ ಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ. ಹಿಂದೆ‌ ಹೆಚ್.ವೈ.ಮೇಟಿ ಪ್ರಕರಣದಲ್ಲೂ ಇದೇ ರೀತಿ ಆಗಿತ್ತು. ಆಗಲೂ ನಕಲಿ ಸಿಡಿ ಅಂತಾ ಹೇಳಲಾಗಿತ್ತು. ಆದರೂ ನಾವು ಕೂಡಲೇ ರಾಜೀನಾಮೆ ಪಡೆದಿದ್ದೆವು. ಇವರಿಗೆ ಮಾನ ಮರ್ಯಾದೆ ಇಲ್ಲ. ಸಿಡಿಯನ್ನು ಸಿಬಿಐ ತನಿಖೆಗಾದ್ರೂ ಕೊಡಲಿ ಬೇರೆ ಯಾವುದಕ್ಕಾದ್ರೂ ಕೊಡಲಿ ಆದರೆ, ಮೊದಲು ರಾಜೀನಾಮೆ ಕೊಡಿಸಲಿ ಎಂದು ಹೇಳಿದ್ದಾರೆ. ಜೊತೆಗೆ, ‘ಸಿದ್ದರಾಮಯ್ಯ ಚಲೋ’ ಎಂದು ಸಿಡಿಯಲ್ಲಿ ಯುವತಿ ಜೊತೆ ಮಾತನಾಡುತ್ತಾ, ರಮೇಶ್​ ಜಾರಕಿಹೊಳಿ ಹೇಳಿರುವ ವಿಚಾರದ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ‘ಆತ ಸತ್ಯ’ ಹೇಳಿದ್ದಾನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೈತ್ರಿ ಸರ್ಕಾರ ಬೀಳಿಸಿದವರು ಇದಕ್ಕೆ ಉತ್ತರಿಸಬೇಕು. ಇಂತಹ ವಿಷಯಗಳಿಟ್ಟುಕೊಂಡು ನಾನು ರಾಜಕೀಯ ಮಾಡಲ್ಲ. ಆದರೆ, ರಾಜಕೀಯ ವ್ಯಕ್ತಿಗಳ ಈ ರೀತಿ ನಡುವಳಿಕೆ ಸರಿಯಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಯಡಿಯೂರಪ್ಪ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ವೆಂಕಟರಾವ್ ನಾಡಗೌಡ ಸಹ ಮಾತನಾಡಿ, ಸಿಡಿ ನಿಜವೋ ಸುಳ್ಳೋ ಅನ್ನೋದು ಅವರಿಗೆ ಚೆನ್ನಾಗಿ ಗೊತ್ತಿರುತ್ತದೆ. ಆದರೆ ಈಗ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಒಂದು ವೇಳೆ ಅದು ಸುಳ್ಳು ಅನ್ನೋದಾದ್ರೆ ನಂತರ ಅವರು ಮತ್ತೆ ಸಚಿವರಾಗಬಹುದು. ಹೀಗಾಗಿ ಈಗ ರಾಜೀನಾಮೆ ನೀಡುವುದೇ ಉತ್ತಮ ಎಂದಿದ್ದಾರೆ. ಈ ಸಂಬಂಧ ಜೆಡಿಎಸ್ ನಿಲುವೇನು ಎಂಬುದು ನನಗೆ ಗೊತ್ತಿಲ್ಲ. ನಾಳೆ ಪಕ್ಷದ ಪ್ರಮುಖರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದ್ದಾರೆ.

ಈ ನಡುವೆ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ರಮೆಶ್​ ಜಾರಕಿಹೊಳಿ ರಾಜೀನಾಮೆ ಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಹೋದರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು