ಸಚಿವ ಸ್ಥಾನ ಸಿಗದಿದ್ದಕ್ಕೆ ರಮೇಶ್​ ಜಾರಕಿಹೊಳಿ ಹತಾಶೆಗೊಂಡಿದ್ದಾರೆ, ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಾಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ರಮೇಶ್​ ಜಾರಕಿಹೊಳಿ ಹತಾಶೆಗೊಂಡಿದ್ದಾರೆ, ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ವ್ಯಂಗ್ಯ
ಡಿ.ಕೆ.ಶಿವಕುಮಾರ್, ರಮೇಶ್​ ಜಾರಕಿಹೊಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 01, 2023 | 4:43 PM

ಬೆಂಗಳೂರು: ಸಾಹುಕಾರ್​​​​​​ ವರ್ಸಸ್​ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K.Shivakumar) ಸಿಡಿ ಫೈಟ್ ತಾರಕಕ್ಕೇರಿದೆ​​​. ಮೊನ್ನೆ ಆರ್ಭಟಿಸಿದ್ದ ರಮೇಶ್​​​ ಜಾರಕಿಹೊಳಿ (Ramesh Jarakiholi) ನಿನ್ನೆ ಸೈಲೆಂಟ್​​​ ಆಗಿಯೇ ಸಮರ ಸಾರಿದ್ರು. ಅತ್ತ ಗಡಿನಾಡು ಬೆಳಗಾವಿಯಲ್ಲಿ ಸಾಹುಕಾರ್​​​​​​ ಬದ್ರರ್ಸ್​​​​​ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಗರ್ಜಿಸಿದ್ರು. ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್​ನ್ನು ಸಿಡಿಸಿದ್ದರು. ಸದ್ಯ ಈ ವಿಚಾರವಾಗಿ ಬೆಂಗಳೂರಿನಲ್ಲಿ  ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅವರಿಗೆ ಮಂತ್ರಿ ಆಗಬೇಕಿತ್ತು, ಅವರ ಪಕ್ಷ ಕೊಟ್ಟಿಲ್ಲ. ಹಿಗಾಗಿ ಹತಾಶೆಯಿಂದ ಹೀಗೆ ಮಾತಾಡುತ್ತಿದ್ದಾರೆ. ಅವರ ಮಾತುಗಳನ್ನು ಕೇಳಿದರೆ ಅಯ್ಯೋ ಅನ್ನಿಸುತ್ತೆ. ರಮೇಶ್​ ಜಾರಕಿಹೊಳಿಯನ್ನು ಬಿಜೆಪಿಯವರು ಆಸ್ಪತ್ರೆಗೆ ತೋರಿಸಬೇಕು. ತನಿಖೆ ಮಾಡಿಸಲು ಜಾರಕಿಹೊಳಿಯನ್ನು ಯಾರು ತಡೆದಿದ್ದಾರೆ. ನಾನೇನು ಪ್ರತಿಕ್ರಿಯೆ ಕೊಡಲ್ಲ, ಯಾವ ತನಿಖೆ ಬೇಕಾದ್ರೂ ಮಾಡಲಿ ಎಂದು ವ್ಯಂಗ್ಯವಾಡಿದವರು.

ಇನ್ನು ವಿದೇಶದಲ್ಲಿ ಡಿ.ಕೆ.ಶಿವಕುಮಾರ್​ ಫ್ಲ್ಯಾಟ್​​ ಇದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, 10% ಆದರೂ ಬರುವ ಹಾಗೆ ಮಾಡಿ, ನಾನೇ ಹೋಗಿ ಬರುತ್ತೇನೆ. ಐ ವಿಷ್ ಹಿಮ್ ಆಲ್ ದ ಬೆಸ್ಟ್, ಶುಭವಾಗಲಿ ಯಶಸ್ಸಾಗಲಿ ಎಂದು ಜಾರಕಿಹೊಳಿಗೆ ಟಾಂಗ್ ನೀಡಿದರು. ಚುನಾವಣೆಯಲ್ಲಿ ಭೇಟಿ ಮಾಡೋಣ ಎಂದಿದ್ದಾರೆ, ಭೇಟಿಯಾಗೋಣ. ಯಾವ ಆಸ್ತಿ, ಯಾವ ಆಡಿಯೋ ಬೇಕಾದರೂ ಮಾಡಿಕೊಳ್ಳಲಿ. ಅವರಲ್ಲಿ ಏನೇನು ಪಟ್ಟುಗಳು, ಆಸನಗಳು ಇದ್ದಾವೆ ತೋರಿಸಲಿ ನೋಡಿಕೋಳ್ತಿವಿ ಎಂದು ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದರು.

ಇದನ್ನೂ ಓದಿ: ಸಿಡಿ ಮುಂದಿಟ್ಟು ಚುನಾವಣೆಗೆ ಹೋದರೆ ಮೂರು ಕುಟುಂಬಗಳ ಇಮೇಜ್ ಡ್ಯಾಮೇಜ್ ಆಗಲಿದೆ: ಬಾಲಚಂದ್ರ ಜಾರಕಿಹೊಳಿ

ಡಿ.ಕೆ.ಶಿವಕುಮಾರ್​​ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ

ಇನ್ನು ಡಿ.ಕೆ.ಶಿವಕುಮಾರ್​​ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ಮಾಡಿದ್ದು, ಎಲ್ಲ ವಿಚಾರಕ್ಕೂ ಪ್ರತಿಕ್ರಿಯೆ ಕೊಡ್ತಾರೆ, ಈಗ ಯಾಕೆ ಮೌನವಾದ್ರು ಎಂದು ಪ್ರಶ್ನಿಸಿದರು. ಡಿ.ಕೆ.ಶಿವಕುಮಾರ್ ಕಾಂಗ್ರೆಸ್​​​ ನಾಯಕರ ಬಾಯಿ ಮುಚ್ಚಿಸಿದ್ದಾರೆ. ಸಿಬಿಐ ಸಿಡಿ ಕೇಸ್​​​ ತನಿಖೆ ನಡೆಸಬೇಕೆಂಬುದು ಜಾರಕಿಹೊಳಿ ಅಪೇಕ್ಷೆ. ನೂರು ರೂಪಾಯಿ ತೆಗೆದುಕೊಂಡು ಬ್ಲೂಫಿಲ್ಮ್​ ತೋರಿಸುತ್ತಿದ್ದ ವ್ಯಕ್ತಿ. ಇಂದು ಸಾವಿರಾರು ಕೋಟಿ ಒಡೆಯನಾಗಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​​ ಕಟ್ಟಿದ ಪಾರ್ಟಿ ಅಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾಪುರುಷರು ಕಟ್ಟಿದ ಪಕ್ಷ ಕಾಂಗ್ರೆಸ್. ಆ ಕಾಂಗ್ರೆಸ್ ಮರ್ಯಾದೆ ಉಳಿಯಬೇಕಾದ್ರೆ ಡಿಕೆಶಿ ಬಾಯಿ ಬಿಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ ಕೊಡಬೇಕು ಎಂದು ಬಳ್ಳಾರಿಯಲ್ಲಿ ಡಿಕೆಶಿ ವಿರುದ್ಧ ಮಾಜಿ ಸಚಿವ K.S.ಈಶ್ವರಪ್ಪ ವಾಗ್ದಾಳಿ ಮಾಡಿದರು.

ಬಾಲಚಂದ್ರ ಜಾರಕಿಹೊಳಿ ಮನವಿ

ಈ ಬಗ್ಗೆ ಗೋಕಾಕ್​ನಲ್ಲಿ ನಿನ್ನೆ ಪ್ರತಿಕ್ರಿಯಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪ ಪ್ರತ್ಯಾರೋಪ ಮುಂದುವರೆದರೆ ಡಿ.ಕೆ.ಶಿವಕುಮಾರ್, ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಗಳಿಗೆ ಡ್ಯಾಮೇಜ್ ಆಗುತ್ತದೆ. ಮೂರೂ ಕುಟುಂಬಗಳು ದೊಡ್ಡದಿವೆ. ಸಿಡಿ ಪ್ರಕರಣವನ್ನು ಇಲ್ಲಿಗೆ ಬಿಡಿ, ಮುಂದುವರಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 100 ರೂಪಾಯಿಗೆ ಕನಕಪುರದಲ್ಲಿ ಬ್ಲೂ ಫಿಲ್ಮ್ ತೋರಿಸಿದ್ದ ಡಿ.ಕೆ.ಶಿವಕುಮಾರ್: ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಇನ್ನು ಮೂರು ತಿಂಗಳಲ್ಲಿ ಚುನಾವಣೆ ಬರಲಿದೆ. ಸಿಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ಟೀಕೆಗಳನ್ನು ಮಾಡುವುದನ್ನು ಮೂವರು ನಿಲ್ಲಿಸಬೇಕು. ಎಲ್ಲರೂ ದೊಡ್ಡ ಮಟ್ಟಕ್ಕೆ ಬೆಳೆದಿದ್ದೀರಿ, ಇನ್ನೂ ಎತ್ತರಕ್ಕೆ ಬೆಳೆಯಬೇಕು. ನಾವೆಲ್ಲರು ಸೇರಿ ರಾಜಕೀಯವಾಗಿ ಹೋರಾಟ ಮಾಡೋಣ ಬನ್ನಿ. ಜನರಿಗೆ ಯಾರ ಮೇಲೆ‌ ಪ್ರೀತಿ ಇದೆಯೋ ಅವರಿಗೆ ವೋಟ್ ಹಾಕುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:42 pm, Wed, 1 February 23

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ