ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ಗವರ್ನರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿಚಾರವಾಗಿ ನಾಳೆ ಮಧ್ಯಾಹ್ನ 12.30ಕ್ಕೆ ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿ ಗವರ್ನರ್​ಗೆ ಬಿಜೆಪಿ ದೂರು ನೀಡಲು ಮುಂದಾಗಿದೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 9:34 PM

ಬೆಂಗಳೂರು: ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (randeep singh surjewala) ಉಪಸ್ಥಿತರಾಗಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿ ನಾಳೆ ಮಧ್ಯಾಹ್ನ 12.30ಕ್ಕೆ ಸುರ್ಜೇವಾಲ ಸಭೆ ಬಗ್ಗೆ ಗವರ್ನರ್​ಗೆ ದೂರು ನೀಡಲು ಬಿಜೆಪಿ ಮುಂದಾಗಿದೆ. ಮಾಜಿ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗದಿಂದ ದೂರು ನೀಡಲಾಗುತ್ತಿದೆ.

ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, BBMP ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್​​ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ

ಯಾವುದೇ ಅಧಿಕೃತ ಸಂಬಂಧವಿಲ್ಲದ ಸುರ್ಜೇವಾಲರಿಗೆ ಏನು ಕೆಲಸ? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ ಎಂದು ರಾಜ್ಯ ಬಿಜೆಪಿ ಟಾಂಗ್​​ ನೀಡಿದ್ದು, ಈ ಬಗ್ಗೆ ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರೇ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಡಿ.ಕೆ.ಶಿವಕುಮಾರ್​ ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದೆ ಎಂದ ಜಮೀರ್ ಅಹ್ಮದ್ ಖಾನ್

ಈ ಕುರಿತಾಗಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್​ ಸಹ ಟ್ವೀಟ್ ಮಾಡಿದ್ದು,​​ ಡಿಸಿಎಂ ಡಿ.ಕೆ.ಶಿವಕುಮಾರ್​ ಕರೆದಿದ್ದ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇವೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಭಾಗಿಯಾಗಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಈ ಕುರಿತು ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ. ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:29 pm, Tue, 13 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್