ಬೆಂಗಳೂರು: ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ (randeep singh surjewala) ಉಪಸ್ಥಿತರಾಗಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಅಷ್ಟೇ ಅಲ್ಲದೇ ಒಂದು ಹೆಜ್ಜೆ ಮುಂದೆ ಹೋಗಿ ನಾಳೆ ಮಧ್ಯಾಹ್ನ 12.30ಕ್ಕೆ ಸುರ್ಜೇವಾಲ ಸಭೆ ಬಗ್ಗೆ ಗವರ್ನರ್ಗೆ ದೂರು ನೀಡಲು ಬಿಜೆಪಿ ಮುಂದಾಗಿದೆ. ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗದಿಂದ ದೂರು ನೀಡಲಾಗುತ್ತಿದೆ.
ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, BBMP ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ
ಯಾವುದೇ ಅಧಿಕೃತ ಸಂಬಂಧವಿಲ್ಲದ ಸುರ್ಜೇವಾಲರಿಗೆ ಏನು ಕೆಲಸ? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದ್ದು, ಈ ಬಗ್ಗೆ ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರೇ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.
ಈ ಕುರಿತಾಗಿ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಸಹ ಟ್ವೀಟ್ ಮಾಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಕರೆದಿದ್ದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದೆ. ಇಂದು ನಡೆದ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದೇವೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಭಾಗಿಯಾಗಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
Participated in the Meeting which was called by Deputy Cheif Minister @DKShivakumar at Shangri-la Hotel in Bengaluru
and Discussed about Various Issues and Betterment of BengaluruAICC General Secretary and in-charge of Karnataka State @rssurjewala was also Present pic.twitter.com/BP3TtRR4yl
— B Z Zameer Ahmed Khan (@BZZameerAhmedK) June 13, 2023
ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕೂಡ ಈ ಕುರಿತು ಟೀಕಿಸಿದ್ದು, ಕರ್ನಾಟಕ ಸರ್ಕಾರವನ್ನು ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ ಅಂತಾ ಜರಿದಿದ್ದಾರೆ. ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ? ಅಥವಾ ಕೈಗೊಂಬೆ ಸರಕಾರಕ್ಕಾ? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:29 pm, Tue, 13 June 23