Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಫಾರಸು ಆದ ವಿಶೇಷ ಅನುದಾನ ನಿರಾಕರಣೆ: ಕೈಗೆ ಬಂದ ತುತ್ತು ಕಸಿದ ವಿತ್ತ ಸಚಿವೆ: ಸಿಎಂ ಸಿದ್ದರಾಮಯ್ಯ ಆರೋಪ

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತಾ ಬಂತು, ಕೇಂದ್ರ ಸರ್ಕಾರದ ಪಾಲುದಾರಿಕೆಯ ವಿವಿಧ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ. ವಿತ್ತ ಸಚಿವೆಯಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. 

ಶಿಫಾರಸು ಆದ ವಿಶೇಷ ಅನುದಾನ ನಿರಾಕರಣೆ: ಕೈಗೆ ಬಂದ ತುತ್ತು ಕಸಿದ ವಿತ್ತ ಸಚಿವೆ: ಸಿಎಂ ಸಿದ್ದರಾಮಯ್ಯ ಆರೋಪ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Oct 29, 2023 | 8:55 PM

ಬೆಂಗಳೂರು, ಅಕ್ಟೋಬರ್​​​ 29: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ, ಮೋದಿ ಮುಖ ನೋಡಿ ಮತನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಯುಪಿಎ ಸರ್ಕಾರದ ಅವಧಿಯ 14ನೇ ಹಣಕಾಸು ಆಯೋಗ ನಿಗದಿಪಡಿಸಿದ್ದ ತೆರಿಗೆ ಪಾಲು 4.72% ಗೆ ಕತ್ತರಿ ಹಾಕಿ, ನಿಮ್ಮ ಸರ್ಕಾರದ ಅವಧಿಯ 15ನೇ ಹಣಕಾಸು ಆಯೋಗವು 3.64% ಗೆ ಇಳಿಸಿದೆ. ಪ್ರಧಾನಿ ಮೋದಿ ಅವರೇ, ಕನ್ನಡಿಗರಿಗೆ ಸಿಗಬೇಕಿದ್ದ ರೂ. 45,000 ಕೋಟಿ ತೆರಿಗೆ ಹಣ ವಂಚಿಸಿದವರು ನೀವೇ ಅಲ್ಲವೇ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತಾ ಬಂತು, ಕೇಂದ್ರ ಸರ್ಕಾರದ ಪಾಲುದಾರಿಕೆಯ ವಿವಿಧ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ಕೇಂದ್ರದಿಂದ ನಯಾಪೈಸೆ ಹಣ ಬಂದಿಲ್ಲ. ಉದ್ಯಮಿಗಳ ಲಕ್ಷಾಂತರ ಕೋಟಿ ಸಾಲಮನ್ನಾ ಮಾಡುವ ನಿಮ್ಮ‌ ಸರ್ಕಾರಕ್ಕೆ ಕನ್ನಡಿಗರ ಕಲ್ಯಾಣ ಕಾರ್ಯಕ್ರಮಗಳು ಹೊರೆಯಾದವೇ? ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದ ಯೋಜನೆಗಳು ಬಂದ್ ಆಗಲಿದೆ ಎಂದು ಜೆ.ಪಿ ನಡ್ಡಾ ಹೇಳಿದ್ದರು, ಅವರು ಆಡಿದ್ದನ್ನು ನೀವು ಮಾಡಿ ತೋರಿಸುತ್ತಿದ್ದೀರಾ?

ಸಿಎಂ ಸಿದ್ದರಾಮಯ್ಯ ಟ್ವೀಟ್​

ಕೇಂದ್ರ ಪ್ರಾಯೋಜಕತ್ವದ ಹಲವು ಜನಪರ ಯೋಜನೆಗಳ ಅನುದಾನಕ್ಕೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕೊಕ್ಕೆ ಹಾಕಿದ್ದರಿಂದ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪದೆ ಸಂಕಷ್ಟದಲ್ಲಿದ್ದಾರೆ. ಕನ್ನಡಿಗರ ಪಾಲಿನ ಅನುದಾನ ಕತ್ತರಿಸಿ ಅದಾನಿಯ ಕೈಗಿತ್ತರೆ ದೇಶ ಅಭಿವೃದ್ಧಿ ಆಗುವುದೇ ಎಂದು ಪ್ರಶ್ನಿಸಿದ್ದಾರೆ.

ಶ್ರಮಜೀವಿ ಕನ್ನಡಿಗರು ಕೇಂದ್ರಕ್ಕೆ 1 ರೂಪಾಯಿ ತೆರಿಗೆ ಪಾವತಿಸಿದರೆ ಮರಳಿ ನಮ್ಮ ಕೈಸೇರುವುದು 15 ಪೈಸೆ ಮಾತ್ರ. ಪ್ರಧಾನಿ ಅವರೇ, ಬರ, ನೆರೆ ಬಂದರೂ ಸೂಕ್ತ ನೆರವು ಸಿಗಲಿಲ್ಲ, ಕೊರೊನಾ ಕಾಲದಲ್ಲೂ ನೀವು ಕನ್ನಡಿಗರ ಕೈ ಹಿಡಿಯಲಿಲ್ಲ, 25 ಬಿಜೆಪಿ ಸಂಸದರನ್ನು ಗೆಲ್ಲಿಸಿದ ಕರುನಾಡಿಗೆ ಈ ದ್ರೋಹ ನ್ಯಾಯವೇ? 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.