ಬಿಡುಗಡೆ ಮಾಡಿದ ಬರ ಪರಿಹಾರವು ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತಿದೆ: ಬಸವರಾಜ ಬೊಮ್ಮಾಯಿ

| Updated By: Rakesh Nayak Manchi

Updated on: Jan 06, 2024 | 7:44 PM

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿರುವ ಸಿದ್ದರಾಮಯ್ಯ ಸರ್ಕಾರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಪರಿಹಾರವಾಗಿ ಒಟ್ಟು 105 ಕೋಟಿ ರೂ. ಬಿಡುಗಡೆ ಮಾಡಿದೆ. ಇದು ಟೀಕೆಗೆ ಕಾರಣವಾಗಿದೆ. ಈ ನಡುವೆ ಟ್ವೀಟ್ ಮಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದಿದ್ದಾರೆ.

ಬಿಡುಗಡೆ ಮಾಡಿದ ಬರ ಪರಿಹಾರವು ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತಿದೆ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯ
Image Credit source: FILE PHOTO
Follow us on

ಬೆಂಗಳೂರು, ಜ.6: ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಪರಿಹಾರವಾಗಿ ಒಟ್ಟು 105 ಕೋಟಿ ರೂ. ಬಿಡುಗಡೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಕಾರಣವಾಗಿದೆ. ಈ ನಡುವೆ ಟ್ವೀಟ್ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ಬೊಮ್ಮಾಯಿ‌ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ ಬೊಮ್ಮಾಯಿ, ರೈತರ ಹಿತ ಕಾಯುವುದರಲ್ಲಿ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದರು.

ಮುಖ್ಯಮಂತ್ರಿಗಳೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ?ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ 2000 ರೂ. ಬರ ಪರಿಹಾರ ಬಿಡುಗಡೆ

NDRF ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣದ ಬಗ್ಗೆ ನಾವೂ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಆದರೆ, ನಿಮ್ಮನ್ನು ಆಯ್ಕೆ ಮಾಡಿ ಅಧಿಕಾರದ ಗದ್ದುಗೆಗೆ ಕೂಡಿಸಿರುವ ರೈತಾಪಿ ವರ್ಗವನ್ನು ರಕ್ಷಿಸುವಂತದ್ದು ನಿಮ್ಮ ಕರ್ತವ್ಯ ನೀವು ಕೂಡಲೇ ಸಂಪೂರ್ಣವಾಗಿರುವ ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹ ಮಾಡುತ್ತೇನೆ ಎಂದರು.

ಈಗಾಗಲೇ ಸಾಕಷ್ಟು ಕಾಲಹರಣವನ್ನು ಮಾಡಿರುತ್ತೀರಿ, ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ ಇದೆ ಎಂದು ಬೆನ್ನು ತಟ್ಟಿಕೊಳ್ಳುತ್ತಿರುವ ನಿಮ್ಮ ಸರ್ಕಾರ ಯಾಕೆ ರೈತರ ಪರಿಹಾರವನ್ನು ಪೂರ್ಣ ಬಿಡುಗಡೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ 18000 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ 105 ಕೋಟಿ ಬಿಡುಗಡೆ ಮಾಡಿದ್ದು, ಶೇ 1 % ರಷ್ಟು ಆಗಿಲ್ಲ ಎಂದು ರೈತಾಪಿ ವರ್ಗದವರು ಕೇಳುತ್ತಿದ್ದಾರೆ ಎಂದರು.

ಮಾತಿನಲ್ಲಲ್ಲ ಕೃತಿಯಲ್ಲಿ ನಿಮ್ಮ ಬದ್ಧತೆ ತೋರಿಸಬೇಕು. ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಾವು ಕೇವಲ ಎರಡು ತಿಂಗಳಲ್ಲಿ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ ಒಟ್ಟು 2031 ಕೋಟಿ ನಾವು ಬಿಡುಗಡೆ ಮಾಡಿದ್ದೇವೆ. ಹೀಗಾಗಿ ಈ ಪ್ರಶ್ನೆ ಕೇಳುವ ಹಕ್ಕು ನಮಗಿದೆ. ರೈತರ ಪರವಾಗಿ ಅವರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ‌. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ಧನಿದ್ದೇನೆ ಎಂದರು.

ರಾಜಕೀಯ ಅಸ್ತಿತ್ವಕ್ಕಾಗಿ ಬೊಮ್ಮಾಯಿ‌ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ ಬೊಮ್ಮಾಯಿ, ರೈತರ ಹಿತ ಕಾಯುವುದರಲ್ಲಿ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Sat, 6 January 24