ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ

ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರ(ಏ.3) ಮಂಗಳೂರಿನಲ್ಲಿ SVEEP ಚಟುವಟಿಕೆಗಳ ಭಾಗವಾಗಿ ಅಧಿಕಾರಿಗಳು ‘ಎಲೆಕ್ಷನ್ ಫೋಕಸ್' ಇ-ಪೇಪರ್ ಅನ್ನು ಬಿಡುಗಡೆ ಮಾಡಿದ್ದಾರೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ
ಇ-ಪೇಪರ್​ ಬಿಡುಗಡೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 05, 2023 | 10:58 AM

ದಕ್ಷಿಣ ಕನ್ನಡ: ಜಿಲ್ಲೆಯ ಸ್ವೀಪ್ ಸಮಿತಿಯು ಚುನಾವಣೆಗಳ ಕುರಿತು ದೈನಂದಿನ ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದೆ. ಇ-ಪೇಪರ್ ಅನ್ನು ಬಿಡುಗಡೆ ಮಾಡಿದ SVEEP ಸಮಿತಿಯ ಅಧ್ಯಕ್ಷ ಕುಮಾರ್ ಮಾತನಾಡಿ ‘ ಜನ ಸಾಮಾನ್ಯರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮತದಾರರು ಮತದಾನ ಮಾಡುವಂತೆ ಉತ್ತೇಜಿಸುವುದು ಇ-ಪೇಪರ್ ಅನ್ನು ಪ್ರಸಾರ ಮಾಡುವ ಮುಖ್ಯ ಉದ್ದೇಶವಾಗಿದೆ ಎಂದರು.

ಇ-ಪೇಪರ್‌ ‘ಎಲೆಕ್ಷನ್ ಫೋಕಸ್’ ಅನ್ನು ಪ್ರಾರಂಭಿಸಿದ ಉದ್ದೇಶ

ಇದು ದಕ್ಷಿಣ ಕನ್ನಡ SVEEP ಸಮಿತಿಯ ವಿನೂತನ ಚಟುವಟಿಕೆಯಾಗಿದೆ. ಎಲೆಕ್ಷನ್ ಫೋಕಸ್ ಎನ್ನುವುದು ಕನ್ನಡ ಭಾಷೆಯಲ್ಲಿ 4 ರಿಂದ 5 ಪುಟಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ಪೇಪರ್ ಆಗಿದೆ. ಇದು ಜಿಲ್ಲೆಯಲ್ಲಿನ SVEEP ಸಮಿತಿಯ ಚಟುವಟಿಕೆಗಳ ವಿವರಗಳು, ಅದರ ಕ್ರಿಯಾ ಯೋಜನೆಗಳು ಜೊತೆಗೆ ಅನುಷ್ಠಾನದ ತಂತ್ರಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಲೇಖಕರ ಲೇಖನಗಳು, ಕವನಗಳು, ಕಥೆಗಳು, ಉಲ್ಲೇಖಗಳು, ಅಭಿಪ್ರಾಯಗಳನ್ನು ಹೊಂದಿರುತ್ತದೆ. SVEEP ಚಟುವಟಿಕೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ:‘Ghulam Nabi Azad: ಯಾವುದೇ ರಾಜ್ಯದ ಚುನಾವಣೆ ಗೆಲುವಿನ ಶ್ರೇಯ ಕಾಂಗ್ರೆಸ್​​ ಕೇಂದ್ರ ನಾಯಕತ್ವಕ್ಕೆ ಸಲ್ಲದು; ಗುಲಾಂ ನಬಿ ಆಜಾದ್

 ಸಾಮಾಜಿಕ ಮಾಧ್ಯಮಗಳಿಂದ ಯುವ ಮತದಾರರನ್ನ ತಲುಪುವ ಗುರಿ

ಇ-ಪೇಪರ್ ಅನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಮತದಾರರಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಯು ಮತ್ತು ಪದವಿ ಕಾಲೇಜು ವಿಭಾಗಗಳ ಮೂಲಕ ಎಲ್ಲ ಯುವ ಮತದಾರರನ್ನು ತಲುಪುವ ಗುರಿ ಹೊಂದಿದ್ದೇವೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳು, ಡಿಡಿಪಿಐ, ಬಿಇಒಗಳು, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಬಿಇಒಗಳು ಮತ್ತು ಎಲ್ಲಾ ಇಲಾಖೆ ಮುಖ್ಯಸ್ಥರು ಇ-ಪೇಪರ್ ಅನ್ನು ಪ್ರತಿಯೊಬ್ಬ ಮತದಾರರಿಗೆ ತಲುಪುವವರೆಗೆ ಪ್ರಸಾರ ಮಾಡುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 5 April 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?