Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ
ರೋಹಿತ್ ಚಕ್ರತೀರ್ಥ ಮತ್ತು ಸಿದ್ದರಾಮಯ್ಯ
Follow us
Rakesh Nayak Manchi
|

Updated on: May 31, 2023 | 5:25 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakrathirtha) ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದೆ. ಒಕ್ಕೂಟವು ಮೇ 29 ರಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದೆ.

ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿಸಿ ನಾಗೇಶ್ ಹಾಗೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ವಿರುದ್ಧ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ತಿರುಗಿ ಬಿದ್ದಿದ್ದಾರೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಮತ್ತು ಸೂಕ್ತ ಆದೇಶವಿಲ್ಲದೆ ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಖಜಾನೆಗೆ ಕೋಟ್ಯಾಂತರ ರೂಪಯಿ ನಷ್ಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 6 ಟಿಎಂಸಿ ನೀರು ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಪರಿಷ್ಕರಣೆಯ ಹೆಸರಿನಲ್ಲಿ ರಾಜ್ಯ ಖಜಾನೆಗೆ ಕೋಟ್ಯಾಂತರ ರೂಪಯಿ ನಷ್ಟ ಮಾಡಿದ್ದಾರೆ ಎಂದು ಒಕ್ಕೂಟವು ಆರೋಪಿಸಿದ್ದು, ಕೋಟ್ಯಾಂತರ ರೂಪಾಯಿ ನಷ್ಟಕ್ಕೆ ಮಾಜಿ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ತಂಡದ ಸದಸ್ಯರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ಲಕ್ಷ ಲಕ್ಷ ಸಂಖ್ಯೆಯಲ್ಲಿ ಮುದ್ರಣವಾಗಿರುವ ಇತಿಹಾಸ ಹಾಗೂ ಕನ್ನಡ ಪುಸ್ತಕಗಳ ಸರಬರಾಜು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದೆ.

ಲಕ್ಷ ಲಕ್ಷ ಸಂಖ್ಯೆಯಲ್ಲಿ ಮುದ್ರಣವಾಗಿರುವ ಇತಿಹಾಸ ಹಾಗೂ ಕನ್ನಡ ಪುಸ್ತಕಗಳ ಸರಬರಾಜು ಸ್ಥಗಿತ ಮಾಡಬೇಕು. ಪರಿಷ್ಕರಣೆಯ ಹೆಸರಲ್ಲಿ ಪೋಲು ಮಾಡಿದ ಸಾರ್ವಜನಿಕರ ಕೋಟ್ಯಾಂತರ ರೂಪಾಯಿ ಹಣವನ್ನ ರೋಹಿತ್ ಸಮಿತಿಯಿಂದಲೇ ವಸೂಲಿ ಮಾಡವಂತೆ ಸಿಎಂ ಸಿದ್ದರಾಮಯ್ಯ ಅವರಲ್ಲಿ ಒಕ್ಕೂಟವು ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ