ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಜಗಳದ ನಡುವೆಯೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಶೀಘ್ರದಲ್ಲೇ ಮೇಜರ್ ಸರ್ಜರಿ?

ಮೂಲಗಳ ಪ್ರಕಾರ ಪಕ್ಷದ ಉನ್ನತ ನಾಯಕತ್ವವು ಬಿಕ್ಕಟ್ಟನ್ನು ಪರಿಹರಿಸಲು ಮತ್ತು ಪಕ್ಷದಲ್ಲಿ ಒಗ್ಗಟ್ಟನ್ನು ಪುನಃಸ್ಥಾಪಿಸಲು ರಾಜಸ್ಥಾನದಲ್ಲಿ ದೊಡ್ಡ ಆಪರೇಷನ್ ನಡೆಯಲಿದೆ ಎಂದು ಸೂಚಿಸಿದೆ. ಆದಾಗ್ಯೂ, ಆಪರೇಷನ್ ಸಮಯ ಮತ್ತು ಸ್ವರೂಪವು ಇತರ ಹಿರಿಯ ನಾಯಕರ ಪ್ರತಿಕ್ರಿಯೆ ಮತ್ತು ರಾಜ್ಯದ ರಾಜಕೀಯ ಪರಿಸ್ಥಿತಿ ಸೇರಿದಂತೆ ಹಲವು ಅಂಶಗಳನ್ನು ಅವಲಂಬಿಸಿರುತ್ತದೆ

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಜಗಳದ ನಡುವೆಯೇ ರಾಜಸ್ಥಾನ ಕಾಂಗ್ರೆಸ್​​ನಲ್ಲಿ ಶೀಘ್ರದಲ್ಲೇ ಮೇಜರ್ ಸರ್ಜರಿ?
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 12, 2023 | 8:00 PM

ದೆಹಲಿ: ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ರಾಜಸ್ಥಾನದ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಮತ್ತು ಅವರ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ (Sachin Pilot) ನಡುವಿನ ಭಿನ್ನಾಭಿಪ್ರಾಯವು ಭುಗಿಲೆದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಮುಖ ಸರ್ಜರಿಗೆ ಸಜ್ಜಾಗಿದೆ ಎಂದು ಮೂಲಗಳು ಬುಧವಾರ ಎನ್​​ಡಿಟಿವಿಗೆ ತಿಳಿಸಿದೆ.  ಮೂರು ವರ್ಷಗಳ ಹಿಂದೆ ಗೆಹ್ಲೋಟ್ ವಿರುದ್ಧ ವಿಫಲ ದಂಗೆಯ ನೇತೃತ್ವ ವಹಿಸಿದ್ದ ಪೈಲಟ್, ಈ ಬಾರಿ ತಮ್ಮ ಎದುರಾಳಿ ಬಿಜೆಪಿಯ ವಸುಂಧರಾ ರಾಜೆ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಮಂಗಳವಾರ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ದಿನವಿಡೀ ಉಪವಾಸ ನಡೆಸಿದರು. ಕಾಂಗ್ರೆಸ್ ನಾಯಕತ್ವವು ಪರಿಸ್ಥಿತಿಯನ್ನು ಗಮನಿಸಿದ್ದು, ಶೀಘ್ರದಲ್ಲೇ ಮಧ್ಯಪ್ರವೇಶಿಸಲು ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ರಾಜಸ್ಥಾನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸುಖಜೀಂದರ್ ರಾಂಧವಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.

ಮೂಲಗಳ ಪ್ರಕಾರ ಪಕ್ಷದ ಉನ್ನತ ನಾಯಕತ್ವವು ಬಿಕ್ಕಟ್ಟನ್ನು ಪರಿಹರಿಸಲು ಮತ್ತು ಪಕ್ಷದಲ್ಲಿ ಒಗ್ಗಟ್ಟನ್ನು ಪುನಃಸ್ಥಾಪಿಸಲು ರಾಜಸ್ಥಾನದಲ್ಲಿ ದೊಡ್ಡ ಆಪರೇಷನ್ ನಡೆಯಲಿದೆ ಎಂದು ಸೂಚಿಸಿದೆ. ಆದಾಗ್ಯೂ, ಆಪರೇಷನ್ ಸಮಯ ಮತ್ತು ಸ್ವರೂಪವು ಇತರ ಹಿರಿಯ ನಾಯಕರ ಪ್ರತಿಕ್ರಿಯೆ ಮತ್ತು ರಾಜ್ಯದ ರಾಜಕೀಯ ಪರಿಸ್ಥಿತಿ ಸೇರಿದಂತೆ ಹಲವು ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕತ್ವವು ಪಂಜಾಬ್‌ನಲ್ಲಿ ಆದಂತೆ ಸೋಲನ್ನು ಪುನರಾವರ್ತಿಸಲು ಬಯಸುವುದಿಲ್ಲ. ಅಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವಿನ ಜಗಳದಲ್ಲಿ, ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಕ್ಷವನ್ನು ತೊರೆದು ತಮ್ಮದೇ ಆದ ಸಂಘಟನೆಯನ್ನು ರಚಿಸಿದ್ದರು.

ಪಕ್ಷದ ಒಳಗಿನವರ ಪ್ರಕಾರ, ಈ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕಠಿಣ ಸವಾಲನ್ನು ಎದುರಿಸುತ್ತಿರುವ ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವವು ಈಗಾಗಲೇ ಗೆಹ್ಲೋಟ್ ಅವರ ಪರವಾಗಿ ನಿಂತಿದೆ.  ಪೈಲಟ್‌ ಅವರ ಇತ್ತೀಚಿನ ಜಗಳ ರಾಜಸ್ಥಾನದಲ್ಲಿ ಪಕ್ಷದ ಪ್ರಮುಖ ಮುಖ ಯಾರು ಎಂಬ ಸಮಸ್ಯೆಯನ್ನು ಇತ್ಯರ್ಥಪಡಿಸಲು ಕಾಂಗ್ರೆಸ್ ನಾಯಕತ್ವದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ.

ಇದನ್ನೂ ಓದಿ: Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ತಮ್ಮ ನಡೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗುವುದು ಎಂಬ ಎಚ್ಚರಿಕೆಯನ್ನು ಧಿಕ್ಕರಿಸಿ, ಪೈಲಟ್ ಒಂದು ದಿನದ ಹಿಂದೆ ಜೈಪುರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹೆಸರು ಅಥವಾ ಚಿಹ್ನೆ ಇರಲಿಲ್ಲ, ಹಾಗಾಗಿ ಸಚಿನ್ ಪಕ್ಷ ತೊರೆಯಲಿದ್ದಾರೆಯೇ ಅಥವಾ ಪಕ್ಷವೇ ಅವರನ್ನು ಹೊರಹಾಕಲಿದೆಯೇ ಎಂಬ ಊಹಾಪೋಹವನ್ನು ಇದು ಹುಟ್ಟುಹಾಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Wed, 12 April 23

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ