ಹಾಲಿ ಶಾಸಕರಿಗೆ ಟಿಕೇಟ್ ಕೊಟ್ರೆ ಸೋಲು ಖಚಿತ: ಬಿಜೆಪಿ ಕಾರ್ಯಕರ್ತರಿಂದಲೇ ಕಟೀಲ್ಗೆ ಹೀಗೊಂದು ಪತ್ರ
ಕರ್ನಾಟಕ ವಿಧಾನಸಭೆ ಚುನಾವಣಾ ಸಮೀಪಿಸುತ್ತಿರುವಾಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. ಬಿಜೆಪಿ ಕಾರ್ಯಕರ್ತರೇ ಹಾಲಿ ಶಾಸಕರ ವಿರುದ್ಧ ಪತ್ರ ಬರೆದಿದ್ದಾರೆ.
ಗದಗ: ಕರ್ನಾಟಕ ವಿಧಾನಸಭೆ ಚುನಾವಣಾ (Karnataka Assembly Election 2023) ಸಮೀಪಿಸುತ್ತಿರುವಾಗಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಟಿಕೆಟ್ ಫೈಟ್ ಶುರುವಾಗಿದೆ.
ಅದರಲ್ಲೂ ಗದಗ ಜಿಲ್ಲೆಯಲ್ಲಿ ಈಗಿನಿಂದಲೇ ಚುನಾವಣಾ ಕಾವು ಏರತೊಡಗಿದೆ. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷದ ಪ್ರಚಾರದ ಅಬ್ಬರ ಜೋರಾಗಿದೆ. ರೋಣ ಕ್ಷೇತ್ರಕ್ಕೆ ಆಪ್ ಪಕ್ಷಕ್ಕೆ ಆನೇಕಲ್ ದೊಡ್ಡಯ್ಯ ಅಭ್ಯರ್ಥಿಯಾಗಿದ್ದು, ಬಿಜೆಪಿ ಶಾಸಕ ಕಳಕಪ್ಪ ಬಂಡಿಗೆ ಠಕ್ಕರ್ ಕೊಡಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಇದರ ಮಧ್ಯೆ ಕಳಪ್ಪ ಬಂಡಿಗೆ ಬಿಜೆಪಿ ಕಾರ್ಯಕರ್ತರೇ ಶಾಕ್ ಕೊಟ್ಟಿದ್ದಾರೆ.
ಬೆಳಗಾವಿ ಅಖಾಡಕ್ಕಿಳಿದ ಬಿ.ಎಲ್.ಸಂತೋಷ್, ಬಣ ಬೇಗುದಿಗೆ ಸಿಗುವುದೇ ಮುಲಾಮು?
ಹೌದು…..ರೋಣ ಕ್ಷೇತ್ರದ ಹಾಲಿ ಶಾಸಕರಿಗೆ (ಕಳಕಪ್ಪ ಬಂಡಿ) ಟಿಕೇಟ್ ಕೊಟ್ರೆ ಸೋಲು ಖಚಿತ ಎಂದು ಬಿಜೆಪಿ ಕಾರ್ಯಕರ್ತರೇ ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ನಾಲ್ಕು ವರ್ಷವಾದ್ರು ಜನ ಮೆಚ್ಚುವ ಕೆಲಸವನ್ನು ಮಾಡಿಲ್ಲ. ರಸ್ತೆ, ಚರಂಡಿ ಸೇರಿದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ. ಈ ಬಾರಿ ಟಿಕೇಟ್ ಕೊಟ್ರೆ ಗೆಲ್ಲೋದು ಬಹಳ ಕಠಿಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಸೆಯಂತೆ ಯುವಕರಿಗೆ ಅವಕಾಶ ಕೊಡಿ. ಅಂದಪ್ಪ ಸಂಕನೂರು ಅವರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪತ್ರದ ಮೂಲಕ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ರೋಣದಲ್ಲಿ ಹವಾ ಎಬ್ಬಿಸಿದ ಎಎಪಿ
ಅತ್ತ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದ್ರೆ, ಮತ್ತೊಂದೆಡೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷದ ಹವಾ ಜೋರಾಗಿದೆ. ಈಗಾಗಲೇ ಎಂ. ದೊಡ್ಡಯ್ಯ ಆನೇಕಲ್ ಅವರು ಎಎಪಿ ಅಭ್ಯರ್ಥಿಯಾಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕ್ಷೇತ್ರದಾದ್ಯಂತ ಸುತ್ತಾಡಿ ಜನರನ್ನು ಎಎಪಿಯತ್ತ ಸೆಳೆಯುವ ಕೆಲಸದಲ್ಲಿ ನಿರತರಾಗಿದ್ದಾರೆ.
ಗಜೇಂದ್ರಗಡ ಪಟ್ಟಣದಲ್ಲಿ ಆಪ್ ಪಕ್ಷದ ಕಾರ್ಯಾಲಯ ಉದ್ಘಾಟನೆಯಲ್ಲಿ ತನ್ನ ಬಲಾಬಲ ತೋರಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ಪಟ್ಟಣದ ಜಿಟಿಡಿ ಕಲ್ಯಾಣ ಮಂಟಪದಿಂದ ಆರಂಭಗೊಂಡ ಬೃಹತ್ ಮೆರವಣಿಗೆ ಕಾಲಕಾಲೇಶ್ವರ ವೃತ್ತದ ಮೂಲಕ ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿರುವ ಆಪ್ ಕಾರ್ಯಾಲಯದವರೆಗೂ ಸಂಚರಿಸಿತು.
ಮೆರವಣಿಗೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ ಜನ ಮನ ಸೆಳೆಯಿತು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Published On - 2:20 pm, Wed, 12 October 22