AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ: ಕಾಂಗ್ರೆಸ್​ಗೇ ತಿರುಗುಬಾಣವಾಗಿಸಲು ತಂತ್ರ

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ್ದ ಹೇಳಿಕೆಗಳು ಮುಳುವಾಗಿದ್ದನ್ನು ಅರಿತಿರುವ ಬಿಜೆಪಿ ಮತ್ತು ಸಂಘ ಪರಿವಾರ ಅದನ್ನೀಗ ಕಾಂಗ್ರೆಸ್​ಗೇ ತಿರುಗು ಬಾಣವಾಗಿಸಿ ರಾಜಕೀಯವಾಗಿ ಆದ ಹಿನ್ನೆಡೆಯಿಂದ ಮೇಲೆ ಬರಲು ಮುಂದಾಗಿವೆ. ಅದಕ್ಕಾಗಿ ಯೋಜನೆ ಹಾಕಿಕೊಂಡಿವೆ. ಹಾಗಾದರೆ ಸಂಘ ಪರಿವಾರದ ಆ ಯೋಜನೆ ಏನು? ಅದು ಕಾಂಗ್ರೆಸ್​ಗೆ ತಿರುಗುಬಾಣವಾಗುವುದು ಹೇಗೆ? ಇಲ್ಲಿದೆ ವಿವರ.

ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ: ಕಾಂಗ್ರೆಸ್​ಗೇ ತಿರುಗುಬಾಣವಾಗಿಸಲು ತಂತ್ರ
ಸಂವಿಧಾನ ಕುರಿತ ಹೇಳಿಕೆ ಡ್ಯಾಮೇಜ್ ಕಂಟ್ರೋಲ್​ಗೆ ಸಂಘ ಪರಿವಾರದಿಂದ ಯೋಜನೆ
ಕಿರಣ್​ ಹನಿಯಡ್ಕ
| Edited By: |

Updated on: Jun 20, 2024 | 9:05 AM

Share

ಬೆಂಗಳೂರು, ಜೂನ್ 20: ಸಂವಿಧಾನದ (Constitution) ಕುರಿತಾಗಿ ನೀಡಿರುವ ಹೇಳಿಕೆಗಳಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ (BJP) ಹಿನ್ನೆಡೆ ಆಗಿರುವುದರಿಂದ ಈಗ ಸಂಘ (RSS) ಪರಿವಾರ ಎಚ್ಚೆತ್ತುಕೊಂಡಿದೆ.‌ ಜೂನ್ 25 ರಂದು ತುರ್ತು ಪರಿಸ್ಥಿತಿಯ ವರ್ಷಾಚರಣೆ ಸಂದರ್ಭ ರಾಜ್ಯದಲ್ಲಿ ವಿವಿಧ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಘ ಪರಿವಾರದ ಕಡೆಯಿಂದ ಸಿದ್ಧತೆ ನಡೆದಿದೆ. ಸಂವಿಧಾನದ ಕುರಿತ ಹೇಳಿಕೆಗಳ ಬಗ್ಗೆ ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಬಿಂಬಿಸಿದ ರೀತಿ ಬಿಜೆಪಿಗೆ ಇನ್ನಿಲ್ಲದ ಹೊಡೆತ ಕೊಟ್ಟಿತ್ತು.‌ ಎಸ್​ಸಿ, ಎಸ್​​ಟಿ ಕ್ಷೇತ್ರಗಳು ಬಿಜೆಪಿಯ ಅರಿವಿಗೇ ಇಲ್ಲದಂತೆ ಕೈ ಬಿಟ್ಟು ಹೋಗಿದ್ದವು. ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಕಾಂಗ್ರೆಸ್ ಸಂವಿಧಾನದ ಬಗ್ಗೆ ವಿಷಯ ಎತ್ತಲೂ ಅವಕಾಶವಿಲ್ಲದಂತಹ ರೀತಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಲು ಇದೀಗ ಬಿಜೆಪಿ ಹಾಗೂ ಸಂಘ ಪರಿವಾರ ಹೊರಟಿವೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಆಚರಣೆಯ ದಿನವಾದ ಜೂನ್ 25 ರಂದು ರಾಜ್ಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಘ ಪರಿವಾರ ಮುಂದಾಗಿದೆ.

ಜೂನ್ 25 ರಂದು ರಾಜ್ಯದಲ್ಲಿ ವಿಚಾರ ಸಂಕಿರಣಗಳು, ಸಂವಾದಗಳು, ಭಾಷಣಗಳು, ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದ್ದು, ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನಕ್ಕೆ ಕಾಂಗ್ರೆಸ್ ಯಾವ ರೀತಿ ಅಪಚಾರ ಎಸಗಿತ್ತು ಎಂಬುದನ್ನು ಬಿಂಬಿಸಲು ತುರ್ತು ಪರಿಸ್ಥಿತಿಯ ದಿನದ ಮೂಲಕ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ಕುರಿತಂತೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬುಧವಾರ ಪ್ರಮುಖರ ಸಭೆ ಕೂಡಾ ನಡೆದಿದೆ. ಚಿಂತಕ ಚಕ್ರವರ್ತಿ ಸೂಲಿಬೆಲೆ, ಪ್ರಸಾರ ಭಾರತಿ ಮಾಜಿ ಅಧ್ಯಕ್ಷ ಅರಕಲಗೂಡು ಸೂರ್ಯಪ್ರಕಾಶ್ ಸೇರಿದಂತೆ ಸಂಘ ಪರಿವಾರದ ಹಿನ್ನೆಲೆಯ ಮುಖಂಡರು ಮತ್ತು ಬಿಜೆಪಿ ಶಾಸಕರು ಕೂಡಾ ಈ ಸಭೆಯಲ್ಲಿ ಭಾಗವಹಿಸಿದ್ದರು‌. ಮುಂದಿನ ವರ್ಷ ತುರ್ತು ಪರಿಸ್ಥಿತಿಯ 50 ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ಡಿಕೆ ಶಿವಕುಮಾರ್ ಪಣ: ಚನ್ನಪಟ್ಟಣದಲ್ಲಿ ಸೋಲಿನಲ್ಲೂ ಗೆಲುವು ಹುಡುಕಿದ ಡಿಸಿಎಂ‌

ಸಂವಿಧಾನದ ವಿಚಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಆಗಿರುವಂತಹ ಹಿನ್ನಡೆಯನ್ನು ಭರ್ತಿ ಮಾಡಿಕೊಳ್ಳಲು ತುರ್ತು ಪರಿಸ್ಥಿತಿಯ ದಿನದ ಕಾರ್ಯಕ್ರಮಗಳ ಮೂಲಕ ಸಿದ್ಧತೆ ಮಾಡಿಕೊಂಡಿರುವ ಬಿಜೆಪಿ, ಸಂವಿಧಾನದ ವಿಚಾರದಲ್ಲಿ ಆಗಿರುವ ನಷ್ಟವನ್ನು ಅದರಿಂದಲೇ ಗಳಿಸಿಕೊಳ್ಳಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!